Homeಮುಖಪುಟಲಂಚಾರೋಪಿ ಮಾಡಾಳ್ ವಿರೂಪಾಕ್ಷಪ್ಪ ಬಂಧನ

ಲಂಚಾರೋಪಿ ಮಾಡಾಳ್ ವಿರೂಪಾಕ್ಷಪ್ಪ ಬಂಧನ

- Advertisement -
- Advertisement -

ಲಂಚ ಪ್ರಕರಣದ ಆರೋಪಿ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಎಸ್‌ಡಿಎಲ್‌ ವರ್ಕ್ ಆರ್ಡರ್ ನೀಡಲು ಲಂಚ ಪಡೆದಿರುವ ಪ್ರಕರಣದ ಎಓನ್ ಆರೋಪಿಯಾದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ವಯಸ್ಸು ಮತ್ತು ಆರೋಗ್ಯವನ್ನು ಗಮನಿಸಿ ಜಾಮೀನು ನೀಡಲಾಗಿದೆ ಎಂದು ಉಚ್ಚರಿಸಿತ್ತು. ಅಲ್ಲಿಯವರೆಗೂ ತಲೆ ಮರೆಸಿಕೊಂಡಿದ್ದ ಮಾಡಾಳ್ ವಿರೂಪಾಕ್ಷ ಜಾಮೀನು ಸಿಗುತ್ತಲೇ ಬೃಹತ್ ರೋಡ್‌ ಶೋ ನಡೆಸಿದ್ದರು.

ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಆರೋಪಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಏಕ ಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ಮಾಡಾಳ್ ವಿರೂಪಾಕ್ಷಪ್ಪನವರನ್ನು ತುಮಕೂರಿನ ಕ್ಯಾತ್ಸಂದ್ರ ಹೋಟೆಲ್ ಬಳಿ ಬಂಧಿಸಲಾಗಿದೆ.

ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ರವರು ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ತಂದೆಯ ಬಂಧನವಾಗಿರುವುದರಿಂ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...