Homeಕರ್ನಾಟಕವಿಜಯಪುರ: ದಲಿತ ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣ: ನಿಧಾನಗತಿಯ ತನಿಖೆಗೆ ಮಾದಾರ ಚೆನ್ನಯ್ಯ ...

ವಿಜಯಪುರ: ದಲಿತ ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣ: ನಿಧಾನಗತಿಯ ತನಿಖೆಗೆ ಮಾದಾರ ಚೆನ್ನಯ್ಯ ಸ್ವಾಮೀಜಿ ಖಂಡನೆ

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ಇಬ್ಬರು ಅಮಾಯಕ ದಲಿತ ಹೆಣ್ಣು ಮಕ್ಕಳ ಮೇಲೆ ಬರ್ಬರ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ನಿಧಾನವಾಗುತ್ತಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಖಂಡಿಸಿದ್ದಾರೆ.

ದಲಿತ ಹೆಣ್ಣು ಮಕ್ಕಳ ಮೇಲೆ ಬರ್ಬರವಾಗಿ ಅತ್ಯಾಚಾರ ಮಾಡಿ, ಅತ್ಯಂತ ಹೇಯವಾಗಿ ಕೊಲೆಮಾಡಿದ ಘಟನೆ ನಡೆದು ಒಂದು ವಾರವಾದರೂ ಪೋಲೀಸ್ ಇಲಾಖೆ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

’ಮಾದಿಗ ಸಮಾಜದ 13 ಮತ್ತು 15 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕಿಡಿಗೇಡಿಗಳ ಗುಂಪೊಂದು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಿಗಿದ್ದಾರೆ. ನಂತರ ಇಬ್ಬರು ಹೆಣ್ಣುಮಕ್ಕಳನ್ನು ಕಟ್ಟಿಹಾಕಿ ಹತ್ತಿರದ ಬಾವಿಗೆ ಎಸೆದು ಕೊಲ್ಲಲಾಗಿದೆ. ಇಂತಹ ಹೇಯ ಘಟನೆ ನಡೆದು ವಾರವಾದರೂ ಪೋಲೀಸ್ ಇಲಾಖೆ ಕಠಿಣ , ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿಲ್ಲ’ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

’ಸರ್ಕಾರದಿಂದ ಪರಿಹಾರ ಕೊಡಲು ಬಂದಾಗ ಸಂತ್ರಸ್ತರ ಪೋಷಕರು ಮೊದಲು ಅತ್ಯಾಚಾರ , ಕೊಲೆ ಮಾಡಿದ ತಪ್ಪಿಸ್ಥರನ್ನು ಬಂಧಿಸಿ, ಗಲ್ಲು ಶಿಕ್ಷೆ ವಿಧಿಸಿ. ನಿಮ್ಮ ಪರಿಹಾರದಿಂದ ಕಳೆದುಹೋದ ಹೆಣ್ಣುಮಕ್ಕಳು ನಮಗೆ ವಾಪಸ್ ಸಿಗುವುದಿಲ್ಲ ಎಂದು ದಿಟ್ಟವಾಗಿ ಉತ್ತರಿಸಿದ್ದಾರೆ.  ಮಾದಾರ ಚೆನ್ನಯ್ಯ ಗುರುಪೀಠ ಸಂತ್ರಸ್ತ ಪೋಷಕರ ಜೊತೆಗಿದ್ದು, ವಿಜಯಪುರದ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿದೆ’ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ದೆಹಲಿಯ ನಿರ್ಭಯ ಪ್ರಕರಣದ ಹಿನ್ನೆಯಲ್ಲಿ ಅತ್ಯಾಚಾರದ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗಬೇಕು . ಪೊಲೀಸ್   ಇಲಾಖೆ ಮೂವರನ್ನು ಬಂಧಿಸಿರುವುದಾಗಿ ಹೇಳಿದೆ ಆದರೆ, ಬಂಧಿತರ ಯಾವ ವಿವರವನ್ನು ಬಹಿರಂಗಪಡಿಸಿಲ್ಲ . ಗ್ರಾಮದ ಪ್ರಮುಖರ ಮಾಹಿತಿಯಂತೆ ಕಿಡಿಗೇಡಿಗಳ ಗುಂಪಿನಲ್ಲಿ ಇನ್ನು ಕೆಲವರಿದ್ದಾರೆ. ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೇ 12 ರ ಮಧ್ಯಾಹ್ನ ಬಸವನಬಾಗೇವಾಡಿ ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದ 14 ಮತ್ತು 15 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರು ಕಾಣೆಯಾಗಿದ್ದರು. ಕಾಣೆಯಾದ ಎರಡು ದಿನಗಳ ನಂತರ ಇಬ್ಬರ ಮೃತ ದೇಹಗಳು ಕೈ ಕಟ್ಟಿದ ಸ್ಥಿತಿಯಲ್ಲಿ ಬಾವಿಯೊಂದರಲ್ಲಿ ಪತ್ತೆಯಾಗಿದ್ದವು. ಬಾಲಕಿಯರಿಗೆ ನ್ಯಾಯ ದೊರಕಬೇಕು ಎಂದು ಅನೇಕ ದಲಿತ ಸಂಘಟನೆಗಳು ಆಗ್ರಹಿಸಿದ್ದವು.


ಇದನ್ನೂ ಓದಿ: ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...