Homeಕರ್ನಾಟಕಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಕಾರ್ಖಾನೆ ಆಡಳಿತದ ಬೇಜವಾಬ್ದಾರಿಗೆ ಕಾರ್ಮಿಕರ ಜೀವನ ಬಲಿ

- Advertisement -
- Advertisement -

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜೆಲಗೆರೆ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬೇಜವಾಬ್ದಾರಿಯಿಂದಾಗಿ ಕಾರ್ಮಿಕರು ಆಸ್ಪತ್ರೆ ಸೇರಿ ನರಳುವಂತಾಗಿದೆ.

ಗುರುವಾರ (ಫೆ.20) ಕಾರ್ಖಾನೆಯಲ್ಲಿ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲೇ ಇದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರ್ಖಾನೆಯಲ್ಲಿ ಮೊದಲ ಅವಘಡ ಸಂಭವಿಸಿದೆ. ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್) ನಿಂದ ಕೆಮಿಕಲ್ ಸ್ಪೋಟಗೊಂಡ ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿವಕುಮಾರ್ ಮತ್ತು ಪ್ರಸನ್ನ ಎಂಬವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿವೆ. ಇನ್ನೊಬ್ಬರು ಮಹಿಳಾ ಕಾರ್ಮಿಕರಾದ ಲಕ್ಷ್ಮೀ ಎಂಬವರು ಪ್ರಜ್ಞಾಹೀನರಾಗಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

ತೀವ್ರತರದ ಸುಟ್ಟ ಗಾಯಗಳಿಂದ ನರಳುತ್ತಿರುವ ಕಾರ್ಮಿಕ ಶಿವಕುಮಾರ್

ಅವಘಡದಲ್ಲಿ ಶಿವಕುಮಾರ್ ಮತ್ತು ಪ್ರಸನ್ನ ಅವರ ಕೈಗಳು ಮತ್ತು ಮುಖ ಸುಟ್ಟಿದೆ. ದುರಂತ ನಡೆದಾಗ ಗಂಭೀರ ಸ್ಥಿತಿಯಲ್ಲಿದ್ದ ಇವರಿಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ಯದ ಕಾರ್ಖಾನೆ ಆಡಳಿತ, ತುಂಬಾ ಹೊತ್ತು ಕಾಯಿಸಿ, ಬಳಿಕ ಮದ್ದೂರಿನ ಸಿದ್ದೇಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಅಲ್ಲಿ ಚಿಕಿತ್ಸೆ ಕೊಡಿಸಿ ಆಂಬ್ಯುಲೆನ್ಸ್‌ನಲ್ಲಿ ವಾಪಸ್ ಕಾರ್ಖಾನೆಗೆ ಕರೆತಂದು ಆಂಬ್ಯುಲೆನ್ಸ್‌ನಲ್ಲೇ ಒಂದು ಗಂಟೆ ಕಾಲ ಇರಿಸಿ, ನಂತರ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ ಎಂದು ಕರ್ನಾಟಕ ಇಂಡಿಪೆಂಡೆಂಟ್ ಗಾರ್ಮೆಂಟ್ ವರ್ಕರ್ಸ್ ಯೂನಿಯನ್ (ಕೆಐಜಿಡಬ್ಲ್ಯುಯು) ಪ್ರಧಾನ ಕಾರ್ಯದರ್ಶಿ ಜಯರಾಮ್ ಎ.ಹೆಚ್ ದೂರಿದ್ದಾರೆ.

ಕಾರ್ಮಿಕ ಪ್ರಸನ್ನ ಅವರಿಗೆ ಗಾಯಗಳಾಗಿರುವುದು

ಶಿವಕುಮಾರ್ ಅವರ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಮನೆಯವರು ಮಂಡ್ಯ ಜಿಲ್ಲಾಸ್ಪತ್ರೆ ಮಿಮ್ಸ್‌ಗೆ ದಾಖಲಿಸಿದ್ದಾರೆ. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ಜಯರಾಮ್ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಮಿಮ್ಸ್‌ನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು

ಕೆಮಿಕಲ್ ಬ್ಲಾಸ್ಟ್ ಅವಘಡದ ಸ್ವಲ್ಪ ಹೊತ್ತಿನ ಬಳಿಕ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇದರಲ್ಲಿ ಫ್ಲೋರ್ ಕಟ್ಟಿಂಗ್ ವೇಳೆ ಎಂ. ಅವಿನಾಶ್ ಎಂಬ ಕಾರ್ಮಿಕನ ಎಡಗೈನ ಮುಂಗೈಗೆ ತೀವ್ರವಾದ ಪೆಟ್ಟು ಬಿದ್ದಿದೆ. ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವಿನಾಶ್ ಅವರಿಗೆ ತೀವ್ರ ಪೆಟ್ಟಾಗಿರುವ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಕೆಐಜಿಡಬ್ಲ್ಯುಯು ಸಂಘಟನಾ ಕಾರ್ಯದರ್ಶಿ ಉಮೇಶ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಅವಿನಾಶ್ ಅವರದ್ದು ವೆಲ್ಡಿಂಗ್ ಕೆಲಸ. ಆದರೆ, ಕಾರ್ಖಾನೆಯ ಸೂಪರ್ ವೈಝರ್ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ಅವರು ಮಾಡದೇ ಇರುವ ಫ್ಲೋರ್ ಕಟ್ಟಿಂಗ್ ಕೆಲಸ ಮಾಡಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆಗಾಗ ಈ ರೀತಿಯ ಅವಘಡಗಳು ನಡೆಯುತ್ತಲೇ ಇರುತ್ತವೆ. ಅಲ್ಲಿ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ದುಡಿಸಲಾಗುತ್ತಿದೆ. ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲ ತಿಂಗಳ ಹೀಟಿಂಗ್ ಮೆಷಿನ್ ಇಟ್ಟಿದ ಟೇಬಲ್‌ನ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ತುಂಡಾದ ಕಾರಣ, ಮೆಷಿನ್ ಕೆಳಗೆ ಬಿದ್ದಿತ್ತು. ಈ ವೇಳೆ ಮಹಿಳಾ ಕಾರ್ಮಿಕರೊಬ್ಬರ ಕಾಲಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅವಘಡ ತಪ್ಪಿದೆ. ಕಾರ್ಖಾನೆ ಆಡಳಿತ ಗಾಯಗೊಂಡವರನ್ನು ಬೆದರಿಸಿ ಶೌಚಾಲಯದಲ್ಲಿ ಬಿದ್ದು ಗಾಯವಾಗಿದೆ ಎಂದು ಹೇಳಿಸಿದೆ. ಕಂಬಗಳು ತುಕ್ಕು ಹಿಡಿದ ಬಗ್ಗೆ ಕಾರ್ಮಿಕರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಮೇಶ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಪ್ರಿಂಟಿಂಗ್ ವಿಭಾಗದಲ್ಲಿ ಕಾರ್ಮಿರೊಬ್ಬರ ಹೊಟ್ಟೆಯ ಭಾಗಕ್ಕೆ ಮೆಷಿನ್ ತಾಗಿತ್ತು. ಅವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಕಾರ್ಖಾನೆ ಅಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಉಮೇಶ್ ದೂರಿದ್ದಾರೆ.

ಗುರುವಾರ ನಡೆದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಮತ್ತು ಕಾರ್ಖಾನೆ ಅಡಳಿತ ತಾವು ಮಾಡಬೇಕಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಗ್ರಹಿಸಿದ್ದೇವೆ. ಅವರು ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಡೆಯ ಬಗ್ಗೆ ಯೋಚಿಸುತ್ತೇವೆ ಎಂದು ಉಮೇಶ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...