ಪೌರಕಾರ್ಮಿಕ ಆತ್ಮಹತ್ಯೆ ಕೇಸ್: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ಪುರಸಭೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೌರ ಕಾರ್ಮಿಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಈ ಘಟನೆ ನಡೆದಿದೆ. ಪುರಸಭೆ ಪೌರಕಾರ್ಮಿಕರಾದ ನಾರಾಯಣ ಎಂಬುವವರು ನೇಣಿಗೆ ಶರಣಾಗಿದ್ದರು. ಇದಕ್ಕೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಈ ಪ್ರಕರಣವನ್ನು ಮುಚ್ಚಿಹಾಕಲು ಪುರಸಭೆಯ ಇತರ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳು ಸೇರಿ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಈ ವಿಷಯ ಸಮಾಜ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಚರ್ಚೆಗೆ ಬಂದು ಪುರಸಭೆಯ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದರು. ನಂತರ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಘಟನೆಗೆ ಸಂಬಂಧಿಸಿದಂತೆ ಈಗ ಪೌರಡಳಿತ ನಿರ್ದೇಶನಾಲಯದ ನಿರ್ದೇಶಕ ಬಿ.ಬಿ.ಕಾವೇರಿ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಘಟನೆಯ ಕುರಿತು ನಾರಾಯಣ ಅವರ ಅತ್ತೆ ಸಂಪೂರ್ಣ ವಿವರ ನೀಡಿದ್ದಾರೆ. ವೀಡಿಯೋ ನೋಡಿ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here