Homeಮುಖಪುಟಮಧುಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ವಜಾ: ಕೆ.ಎನ್.ರಾಜಣ್ಣಗೆ ಬಿಸಿ ಮುಟ್ಟಿಸಿದ ಕೆಪಿಸಿಸಿ

ಮಧುಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ವಜಾ: ಕೆ.ಎನ್.ರಾಜಣ್ಣಗೆ ಬಿಸಿ ಮುಟ್ಟಿಸಿದ ಕೆಪಿಸಿಸಿ

- Advertisement -
ಮಧುಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ವಜಾ: ಕೆ.ಎನ್.ರಾಜಣ್ಣಗೆ ಬಿಸಿ ಮುಟ್ಟಿಸಿದ ಕೆಪಿಸಿಸಿ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿರುದ್ಧವಾಗಿ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮಧುಗಿರಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್.ರಾಜಗೋಪಾಲ್ ಮತ್ತು ಎಂ.ಎಸ್.ಮಲ್ಲಿಕಾರ್ಜುನಯ್ಯ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
ತುಮಕೂರಿನ ಹಾಲಿ ಕಾಂಗ್ರೆಸ್ ಲೋಕಸಭಾ ಸದಸ್ಯರಾದ ಮುದ್ದಹನುಮೇಗೌಡರಿಗೆ ಟಿಕೇಟ್ ನೀಡದೆ ಮೈತ್ರಿಯ ಒಪ್ಪಂದದಂತೆ ತುಮಕೂರು ಕ್ಷೇತ್ರ ಜೆಡಿಎಸ್‌ನ ಪಾಲಾಗಿತ್ತು. ಇದರಿಂದ ಆಕ್ರೋಶಗೊಂಡ ಮುದ್ದಹನುಮೇಗೌಡ ಮತ್ತು ಮಧುಗಿರಿಯ ಮಾಜಿ ಶಾಸಕ ಮತ್ತು ಪ್ರಭಾವಿ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿದು ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾವಾಗಿದ್ದರು.
ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಿ ಸಂಧಾನದಿಂದ ಮತ್ತೆ ಇಬ್ಬರು ಮುಖಂಡರು ನಾಮಪತ್ರ ವಾಪಸ್ಸು ತೆಗೆದುಕೊಂಡಿದ್ದರು. ಆದರೆ ಮುನಿಸು ಕಡಿಮೆ ಮಾಡಿಕೊಂಡಿರಲಿಲ್ಲ. ಚುನಾವಣೆಯ ಪ್ರಚಾರ ಸಭೆಗೂ ಬರಲು ಒಪ್ಪದಿದ್ದಾಗ ಸಿದ್ದರಾಮಯ್ಯನವರು ಮಾತುಕತೆ ಮಾಡಿ ಸಭೆಗೆ ಬರುವಂತೆ ಮಾಡಿದ್ದರು. ಆದರೆ ಚುನಾವಣೆಯಲ್ಲಿ ಮೈತ್ರಿ ಧರ್ಮದಂತೆ ಮೈತ್ರಿ ಅಭ್ಯರ್ಥಿಗೆ ಮತ ಹಾಕಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮುಖಂಡರೆ ಮುಂದೆ ನಿಂತು ಬಿಜೆಪಿಗೆ ಮತಹಾಕಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸದ ಕೆ.ಎನ್.ರಾಜಣ್ಣ ಅವರ ಆಪ್ತರು ಆದ ಮಧುಗಿರಿ ನಗರ ಮತ್ತು ಗ್ರಾಮಾಂತರ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಮೂಲಕ ಪಕ್ಷದಲ್ಲಿನ ಬಂಡಾಯ ಮುಖಂಡರಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ.
- Advertisement -

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...