Homeಮುಖಪುಟಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದ ಮಧುಗಿರಿ ಜೆಡಿಎಸ್ ಶಾಸಕ ವೀರಭದ್ರಯ್ಯ: ಕಾರಣ?

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದ ಮಧುಗಿರಿ ಜೆಡಿಎಸ್ ಶಾಸಕ ವೀರಭದ್ರಯ್ಯ: ಕಾರಣ?

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ಪಕ್ಷಕ್ಕೆ ಸಂಕಷ್ಟಗಳು ಎದುರಾಗುತ್ತಿವೆ. ಕೆಲ ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಇಂತಹ ಸಮಯದಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಧುಗಿರಿ ಕ್ಷೇತ್ರದ ಜೆಡಿಎಸ್ ಶಾಸಕ ವೀರಭದ್ರಯ್ಯ ಸ್ಪಷ್ಟಪಡಿಸಿದ್ದಾರೆ.

ಮಧುಗಿರಿ ತಾಲ್ಲೂಕಿನ ಸಿದ್ದಾಪುರದ ಬಳಿಯ ವೇಣುಗೋಪಾಲ ದೇವಾಲಯದ ಬಳಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, “ನನಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆ ಕಾರಣದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ಕುಟುಂಬದವರು ಒತ್ತಡ ಹೇರುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ” ಎಂದಿದ್ದಾರೆ.

ಈ ಸಂದರ್ಭದಲ್ಲಿ ನೆರೆದಿದ್ದ ಅಭಿಮಾನಿಗಳು, ಅನುಯಾಯಿಗಳು ಮುಂದಿನ ಚುನಾವಣೆಯಲ್ಲಿ ನೀವೇ ಸ್ಪರ್ಧಿಸಬೇಕೆಂದು ಒತ್ತಾಯಿಸಿದ ಘಟನೆ ಜರುಗಿದೆ.

ಕಾರ್ಯಕರ್ತರ ಪ್ರೀತಿ ಅಭಿಮಾನಕ್ಕೆ ಬೆಲೆ ಕೊಡುತ್ತೇನೆ. ನಿಮ್ಮಗಳ ಶಕ್ತಿಯ ಬಗ್ಗೆ ನನಗೆ ಅರಿವಿದೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ಆದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿರುವುದರಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯಲು ಬಯಸಿದ್ದೇನೆ. ರಾಜಕೀಯ ಹೊರತುಪಡಿಸಿ ನಿಮ್ಮೊಂದಿಗೆ ಇದ್ದೇ ಇರುತ್ತೇನೆ. ಈ ಕುರಿತು ಎಚ್.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಹಿರಿಯ ಮುಖಂಡರಿಗೆ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ರಾಜಣ್ಣನವರ ಟೀಕೆಗಳಿಗೆ ಉತ್ತರ ಕೊಡುತ್ತಿಲ್ಲ, ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟಿಸುತ್ತಿಲ್ಲ ಎಂದು ಕೆಲವರು ದೂರಿದ್ದಾರೆ. ಆದರೆ ಅದು ಸುಳ್ಳಾಗಿದ್ದು ಪಕ್ಷದ ಕೆಲಸದಲ್ಲಿ ತೊಡಗಿದ್ದೇನೆ. ಈ ಬಗ್ಗೆ ಯಾರಿಂದಲೂ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ರಾಜಣ್ಣ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ. ಆದರೆ ಎಚ್.ಡಿ ದೇವೇಗೌಡರ ವಿರುದ್ಧ ಮಾತನಾಡಿದಾಗ ಪ್ರತಿಭಟನೆ ನಡೆಸಿದ್ದೇನೆ ಎಂದು ವೀರಭದ್ರಯ್ಯ ಹೇಳಿದ್ದಾರೆ.

IAS ಅಧಿಕಾರಿಯಾಗಿದ್ದ ವೀರಭದ್ರಯ್ಯನವರು 2013ರ ವಿಧಾನಸಭಾ ಚುನಾವಣೆ ವೇಳೆಗೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್ ರಾಜಣ್ಣನವರ ಎದುರು ಸೋಲುಂಡ ಅವರು 2018ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಶಾಸಕರಾಗಿದ್ದರು.

ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡರವರು ಪಕ್ಷ ತೊರೆದಿದ್ದಾರೆ. ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್‌ರವರು ಕಾಂಗ್ರೆಸ್ ಸೇರುವ ಉತ್ಸಾಹದಲ್ಲಿದ್ದಾರೆ. ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್‌ವಿ ದತ್ತಾರವರು, ಅದೇ ರೀತಿ ಚಿತ್ರದುರ್ಗದ ಯುವ ಜೆಡಿಎಸ್ ನಾಯಕ ಕೆ.ಸಿ ವೀರೇಂದ್ರರವರು ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ. ಹಾಗಾಗಿ ಜೆಡಿಎಸ್‌ಗೆ ಇದು ಸಂಕಷ್ಟದ ಕಾಲವಾಗಿದೆ.

ಇದನ್ನೂ ಓದಿ; ಸೋನಿಯಾ ಗಾಂಧಿ ಅರ್ಧ ಕಿಮೀ ನಡೆದು, ವಾಪಸ್ಸಾಗಿದ್ದಾರೆ: ಸಿಎಂ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...