ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ
PC:[email protected]

ರಾಯಚೂರಿನಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 16 ದಿನಗಳಿಂದ ಮಧ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟ ಅವಧಿಯ ಸತ್ಯಾಗ್ರಹ ನಡೆಯುತ್ತಿದೆ. ಸದ್ಯ ಸತ್ಯಾಗ್ರಹ ನಡೆಸುತ್ತಿರುವ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಸದಸ್ಯರು ಮತ್ತು  ಪ್ರತಿಭಟನಾ ನಿರತ ಮಹಿಳೆಯರು ಫೆ.28ರ ಭಾನುವಾರ ಟ್ವಿಟರ್ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಪ್ರಶ್ನಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಕಳೆದ 16 ದಿನಗಳಿಂದಲೂ ಆಲಿಸುತ್ತಿಲ್ಲ ಎಂದು ಆರೋಪಿಸಿ ಈ ಟ್ವಿಟರ್‌ ಅಭಿಯಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

ಇವರ ಬೇಡಿಕೆಗಳು

೧. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
೩. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.

Image

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

Image
PC:[email protected]

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

ಟ್ವಿಟರ್‌ ಅಭಿಯಾನದಲ್ಲಿ ಜನರು ಹೆಚ್ಚು ಟ್ವೀಟ್‌ಗಳನ್ನು ಬರೆದು ನಮ್ಮೊಂದಿಗೆ ಹಂಚಿಕೊಳ್ಲಿ ಮತ್ತು ಅಭಿಯಾನವನ್ನು ಬೆಂಬಲಿಸಿ ಎಂದು ಪ್ರತಿಭಟನಾ ನಿರತ ಹೋರಾಟಗಾರರು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here