Homeಮುಖಪುಟಮಧ್ಯಪ್ರದೇಶ: ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 10 ಕಾಡಾನೆಗಳು ಸಾವು

ಮಧ್ಯಪ್ರದೇಶ: ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 10 ಕಾಡಾನೆಗಳು ಸಾವು

- Advertisement -
- Advertisement -

ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಅಕ್ಟೋಬರ್ 29 ರಿಂದ, ಸುಮಾರು 10 ಕಾಡು ಆನೆಗಳು ಸಾವನ್ನಪ್ಪಿವೆ. ಆನೆಗಳು ಸೇವಿಸಿದ ರಾಗಿಯಲ್ಲಿ ಮೈಕೋಟಾಕ್ಸಿನ್‌ ಕಂಡುಬಂದಿದೆ ಎಂದು ಆರಂಭಿಕ ತನಿಖೆಗಳಿಂದ ತಿಳಿದುಬಂದಿದೆ. ಘಟನೆಯ ತನಿಖೆಗಾಗಿ ರಾಜ್ಯವು ಐದು ಸದಸ್ಯರ ಸಮಿತಿಯನ್ನು ರಚಿಸಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತುರ್ತು ಸಭೆಯನ್ನು ಕರೆದ್ದಾರೆ.

“10 ಆನೆಗಳ ಸಾವಿನ ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶಕ್ಕೆ (ಬಿಟಿಆರ್) ಕಳುಹಿಸಿರುವ ಉನ್ನತ ಮಟ್ಟದ ತಂಡವು ಯಾವುದೇ ‘ಪಿತೂರಿ’ ಕಂಡಿಲ್ಲ” ಎಂದು ಅದರ ಸದಸ್ಯರೊಬ್ಬರು ಹೇಳಿದರು.

ಮಧ್ಯಪ್ರದೇಶದ ಅರಣ್ಯ ಸಚಿವರಾದ ಪ್ರದೀಪ್ ಅಹಿರ್ವಾರ್ ಅವರನ್ನು ಒಳಗೊಂಡ ತಂಡ; ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಶೋಕ್ ಬರನ್ವಾಲ್ ಮತ್ತು ಅರಣ್ಯ ಪಡೆ ಮುಖ್ಯಸ್ಥ ಅಸೀಮ್ ಶ್ರೀವಾಸ್ತವ ಅವರು ಶನಿವಾರ (ನವೆಂಬರ್ 2, 2024) ಆನೆಗಳು ಸಾವನ್ನಪ್ಪಿದ ಮೀಸಲು ಪ್ರದೇಶಕ್ಕೆ ಭೇಟಿ ನೀಡಿದರು.

ಅಕ್ಟೋಬರ್ 29 ರಂದು ಬಿಟಿಆರ್‌ನ ಖಿಟೋಲಿ ವ್ಯಾಪ್ತಿಯ ಸಂಖಾನಿ ಮತ್ತು ಬಕೇಲಿಯಲ್ಲಿ ನಾಲ್ಕು ಕಾಡು ಆನೆಗಳು ಸತ್ತವು. ಅಕ್ಟೋಬರ್ 30 ರಂದು ಇನ್ನೂ ನಾಲ್ಕು ಮತ್ತು ಮರುದಿನ ಎರಡು ಆನೆಗಳು ಸಾವನ್ನಪ್ಪಿವೆ.

ವನ್ಯಜೀವಿ ತಜ್ಞ ಅಜಯ್ ದುಬೆ ಅವರ ಪ್ರಕಾರ, ಪ್ರದೇಶದಲ್ಲಿ 72 ಗಂಟೆಗಳ ಅವಧಿಯಲ್ಲಿ 10 ಆನೆಗಳು ಹಿಂದೆಂದೂ ಸಾವನ್ನಪ್ಪಿಲ್ಲ. ಶವಗಳ ಶವಪರೀಕ್ಷೆಯು ಅವುಗಳ ಹೊಟ್ಟೆಯಲ್ಲಿ ಅಪಾರ ಪ್ರಮಾಣದ ಕೊಡೋ ರಾಗಿಯೊಂದಿಗೆ ವಿಷಕಾರಿ ಅಂಶ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆನೆಗಳ ಸಾವಿನ ಕುರಿತು ತನಿಖೆ ನಡೆಸಲು ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ (ಡಬ್ಲ್ಯುಸಿಸಿಬಿ) ತಂಡವನ್ನು ರಚಿಸಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ. ಘಟನೆಯ ಕುರಿತು ತನಿಖೆ ನಡೆಸಲು ಮಧ್ಯಪ್ರದೇಶ ಸರ್ಕಾರ ಸಮಿತಿಯನ್ನೂ ರಚಿಸಿದೆ.

ಶನಿವಾರ (ನವೆಂಬರ್ 3, 2024) ಅಧಿಕಾರಿಯೊಬ್ಬರು ಅಹಿರ್ವಾರ್ ಮತ್ತು ಇಬ್ಬರು ಉನ್ನತ ಅಧಿಕಾರಿಗಳನ್ನು ಮೀಸಲು ಪ್ರದೇಶಕ್ಕೆ ತೆರಳಿದರು.

ಶುಕ್ರವಾರ ರಾತ್ರಿ (ನವೆಂಬರ್ 1, 2024) ಮುಖ್ಯಮಂತ್ರಿ ಯಾದವ್ ಅವರು ಕರೆದಿದ್ದ ತುರ್ತು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು, “ಹೆಚ್ಚು ಕೊಡೋ ರಾಗಿಗಳನ್ನು ಸೇವಿಸಿದ ನಂತರ ಆನೆಗಳು ಸತ್ತಿವೆ ಎಂಬ ಅರಣ್ಯ ಇಲಾಖೆಯ ಪ್ರಾಥಮಿಕ ವರದಿಯಿಂದ ಸಿಎಂ ಅತೃಪ್ತರಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ; ಯೂಟ್ಯೂಬ್ ವೀಡಿಯೋ ನೋಡಿ ಹೃದಯ ಪರೀಕ್ಷೆ ನಡೆಸಿದ ವಾರ್ಡ್ ಬಾಯ್; ಜೋಧ್‌ಪುರ ಆಸ್ಪತ್ರೆಯಲ್ಲಿ ನಡೆದ ಘಟನೆಯ ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...