Homeಮುಖಪುಟಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕ ಸಚಿನ್ ಬಿರ್ಲಾ ಭಾನುವಾರ ಆಡಳಿತರೂಢ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ 2021ರ ಮಾರ್ಚ್‌ನಿಂದ ರಾಜ್ಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರು ಬರೋಬ್ಬರಿ 27 ಮಂದಿ. ಈ ಮೂಲಕ ಪ್ರತಿಪಕ್ಷ ಕಾಂಗ್ರೆ‌ಸ್‌ಗೆ ಆಘಾತ ಎದುರಾಗುತ್ತಲೇ ಇದೆ.

2021 ಮಾರ್ಚ್‌ನಿಂದ ಇಲ್ಲಿಯವರೆಗೆ ಬಿಜೆಪಿಗೆ ಸೇರಿದ ಕಾಂಗ್ರೆಸ್‌ ಶಾಸಕರಲ್ಲಿ ಸಚಿನ್ ಬಿರ್ಲಾ 27ನೇ ಕಾಂಗ್ರೆಸ್ ಶಾಸಕರಾಗಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2018 ರಲ್ಲಿ ಖಾರ್ಗೋನ್ ಜಿಲ್ಲೆಯ ಬದ್ವಾಹ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಹಿತೇಂದ್ರ ಸಿಂಗ್ ಸೋಲಂಕಿ ಅವರನ್ನು ಸುಮಾರು 30,500 ಮತಗಳ ಅಂತರದಿಂದ ಸೋಲಿಸಿ ಗೆದ್ದಿದ್ದರು.

ಸದ್ಯ ಖಾಂಡ್ವಾ ಲೋಕಸಭೆ ಕ್ಷೇತ್ರ ಮತ್ತು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ.

ಕಳೆದ ವರ್ಷದ ಮಾರ್ಚ್‌ ತಿಂಗಳಿನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ನೇತೃತ್ವದಲ್ಲಿ 22 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಇದರಿಂದಾಗಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಪಕ್ಷ ಅಧಿಕಾರಕ್ಕೇರಿತ್ತು. ನಂತರದಲ್ಲಿ ಇತರ ನಾಲ್ಕು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರು.

ಇದನ್ನೂ ಓದಿ: ಸತತ ಇಂಧನ ಬೆಲೆ ಏರಿಕೆ: ನ.14 ರಿಂದ 15 ದಿನಗಳ ಕಾಲ ಕಾಂಗ್ರೆಸ್ ಪ್ರತಿಭಟನೆ

“ಕಾಂಗ್ರೆಸ್ ದುರ್ಬಲವಾಗುತ್ತಿದೆ ಮತ್ತು ಸಾರ್ವಜನಿಕ ಬೆಂಬಲವನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದ ಯುವ ನಾಯಕರು ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಪಕ್ಷವನ್ನು ತೊರೆಯುತ್ತಿದ್ದಾರೆ. ಈ ನಾಯಕರು ಬಿಜೆಪಿಯಲ್ಲಿ ಉತ್ತಮ ರೀತಿಯಲ್ಲಿ ಜನರಿಗೆ ಸೇವೆ ಸಲ್ಲಿಸಬಹುದು. ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿದ್ದಾರೆ.

2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಿದ ಕಾಂಗ್ರೆಸ್‌ ಸರ್ಕಾರವನ್ನು ರಚಿಸಿತ್ತು. ಆದರೆ, 2020ರ ಮಾರ್ಚ್‌ನಲ್ಲಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ, ಬಿಜೆಪಿ ಸೇರಿದರು. ಇದರಿಂದಾಗಿ ಕಾಂಗ್ರೆಸ್‌ ಬಹುಮತ ಕಳೆದುಕೊಂಡಿತು. ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚಿಸಿತ್ತು.

ಸದ್ಯ ಸಚಿನ್ ಬಿರ್ಲಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 94ಕ್ಕೆ ಇಳಿಯುತ್ತದೆ. 230 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 125 ಶಾಸಕರನ್ನು ಹೊಂದಿದೆ. ವಿಧಾನಸಭೆಯಲ್ಲಿ ಇಬ್ಬರು ಬಿಎಸ್‌ಪಿ, ಒಬ್ಬರು ಎಸ್‌ಪಿ ಮತ್ತು ನಾಲ್ವರು ಸ್ವತಂತ್ರ ಶಾಸಕರು ಇದ್ದಾರೆ.

ಖಾಂಡ್ವಾ ಲೋಕಸಭೆ ಕ್ಷೇತ್ರ ಮತ್ತು ಜೋಬತ್ (ಅಲಿರಾಜಪುರ), ಪೃಥ್ವಿಪುರ (ನಿವಾರಿ) ಮತ್ತು ರಾಯಗಾಂವ್ (ಸತ್ನಾ) ಸೇರಿದಂತೆ ಮೂರು ವಿಧಾನಸಭಾ ಸ್ಥಾನಗಳು ಖಾಲಿಯಿದ್ದು, ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಕಾಂಗ್ರೆಸ್ ಸೇರಲು ಡ್ರಗ್ಸ್, ಮದ್ಯಪಾನ, ಸಾರ್ವಜನಿಕ ವೇದಿಕೆಯಲ್ಲಿ ಪಕ್ಷವನ್ನು ಟೀಕಿಸುವುದು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...