Homeಮುಖಪುಟಮಧ್ಯಪ್ರದೇಶ: ಗಾಯಕ್ಕೆ ‘ಕಾಂಡೋಮ್‌ನ ಕವರ್‌’ ಇಟ್ಟು ಬ್ಯಾಂಡೇಜ್ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ

ಮಧ್ಯಪ್ರದೇಶ: ಗಾಯಕ್ಕೆ ‘ಕಾಂಡೋಮ್‌ನ ಕವರ್‌’ ಇಟ್ಟು ಬ್ಯಾಂಡೇಜ್ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ

- Advertisement -
- Advertisement -

ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದ ವೃದ್ಧೆಯೊಬ್ಬರ ತಲೆಯ ಗಾಯಕ್ಕೆ ಬ್ಯಾಂಡೇಜ್ ಮಾಡುವಾಗ ಹತ್ತಿಯೊಂದಿಗೆ ಕಾಂಡೋಮ್‌ನ ಕವರ್‌‌ ಇಟ್ಟು ಬ್ಯಾಂಡೇಜ್ ಮಾಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಪೋರ್ಸಾದಲ್ಲಿ ನಡೆದಿದೆ.

ಗಾಯದಿಂದ ಉಂಟಾಗುವ ರಕ್ತಸ್ರಾವವನ್ನು ನಿಲ್ಲಿಸಲು ಹತ್ತಿಯ ಜೊತೆಗೆ, ತಾತ್ಕಾಲಿಕ ಬ್ಯಾಂಡೇಜ್‌ನ ರೂಪವಾಗಿ ಮಹಿಳೆಯ ತಲೆಯ ಮೇಲೆ ಕಾಂಡೋಮ್‌ನ ಕವರ್‌ ಅನ್ನು ಇಟ್ಟು ಬ್ಯಾಂಡೇಜ್ ಮಾಡಲಾಗಿದೆ. ಗಾಯದ ತೀವ್ರತೆಯಿಂದಾಗಿ ಮಹಿಳೆಯು ಜಿಲ್ಲಾ ಆಸ್ಪತ್ರೆಗೆ ದಾಖಲಾದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತ ಮಹಿಳೆಯನ್ನು ರೇಷ್ಮಾ ಬಾಯಿ ಎಂದು ಗುರುತಿಸಲಾಗಿದೆ. ಮಹಿಳೆಯ ಗಾಯದ ತೀವ್ರತೆಯಿಂದಾಗಿ ಅವರನ್ನು ಮೊರೆನಾದಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದಾಗ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ, ಅಲ್ಲಿ ಗಾಯಕ್ಕೆ ಚಿಕಿತ್ಸೆ ನೀಡಲಾಗಿದೆ.

ಪೋರ್ಸಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಗೆ ಬ್ಯಾಂಡೇಜ್ ಮಾಡಿದ್ದ ಸಿಬ್ಬಂದಿಯನ್ನು ರಾಜ್ಯ ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...