ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮೆರವಣಿಗೆಯ ಸಂದರ್ಭದಲ್ಲಿ ಜೋರಾಗಿ ಡಿಜೆ ಹಾಕಿದ್ದಕ್ಕಾಗಿ ದಲಿತ ಮತ್ತು ಪ್ರಭಲ ಜಾತಿಗಳ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ 26 ವರ್ಷದ ಯುವಕನನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿಂಗೋನಾ ಖುರ್ದ್ ಗ್ರಾಮದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದು, ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
“ಡಿಜೆ ಶಬ್ದಕ್ಕಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಬಾಲಕನೊಬ್ಬ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ” ಎಂದು ಮೊರೆನಾದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಸಿಬಿ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.
“10 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಂಬೇಡ್ಕರ್ ಜಯಂತಿ ಮೆರವಣಿಗೆಗೆ ಸಂಬಂಧಿಸಿದ ವಿವಾದ ಎಂದು ಇದು ಹೇಳಲು ಸಾಧ್ಯವಿಲ್ಲ. ಡಿಜೆ ಶಬ್ದಕ್ಕೆ ಸಂಬಂಧಿಸಿದ ವಿವಾದ ಇದಾಗಿದ್ದು, ಇದುವರೆಗೆ ಕಾರಣ ತಿಳಿದಿಲ್ಲದಕ್ಕಾಗಿ ಅದು ಮತ್ತಷ್ಟು ಉಲ್ಬಣಗೊಂಡಿತು” ಎಂದು ಅವರು ಹೇಳಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಸಂಜಯ್ ಪಿಪ್ಪಲ್ (26) ಎಂದು ಗುರುತಿಸಲಾಗಿದ್ದು, 24 ವರ್ಷದ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಘರ್ಷಣೆಯಲ್ಲಿ ಭಾಗಿಯಾದ ಎರಡು ಗುಂಪುಗಳ ಸದಸ್ಯರು ಜಾಟವ್ ಮತ್ತು ಗುಜ್ಜರ್ ಸಮುದಾಯಗಳಿಗೆ ಸೇರಿದವರು ಎಂದು ವರದಿ ಹೇಳಿವೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು
ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

