Homeಮುಖಪುಟಮಧ್ಯ ಪ್ರದೇಶ | ಅಂಬೇಡ್ಕರ್ ಜಯಂತಿ ಡಿಜೆ ವಿವಾದ; ಗುಂಡು ಹಾರಿಸಿ ಯುವಕನ ಹತ್ಯೆ

ಮಧ್ಯ ಪ್ರದೇಶ | ಅಂಬೇಡ್ಕರ್ ಜಯಂತಿ ಡಿಜೆ ವಿವಾದ; ಗುಂಡು ಹಾರಿಸಿ ಯುವಕನ ಹತ್ಯೆ

- Advertisement -
- Advertisement -

ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮೆರವಣಿಗೆಯ ಸಂದರ್ಭದಲ್ಲಿ ಜೋರಾಗಿ ಡಿಜೆ ಹಾಕಿದ್ದಕ್ಕಾಗಿ ದಲಿತ ಮತ್ತು ಪ್ರಭಲ ಜಾತಿಗಳ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ 26 ವರ್ಷದ ಯುವಕನನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ರಾಜ್ಯದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿಂಗೋನಾ ಖುರ್ದ್ ಗ್ರಾಮದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದು, ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಡಿಜೆ ಶಬ್ದಕ್ಕಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಬಾಲಕನೊಬ್ಬ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ” ಎಂದು ಮೊರೆನಾದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಸಿಬಿ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.

“10 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಂಬೇಡ್ಕರ್ ಜಯಂತಿ ಮೆರವಣಿಗೆಗೆ ಸಂಬಂಧಿಸಿದ ವಿವಾದ ಎಂದು ಇದು ಹೇಳಲು ಸಾಧ್ಯವಿಲ್ಲ. ಡಿಜೆ ಶಬ್ದಕ್ಕೆ ಸಂಬಂಧಿಸಿದ ವಿವಾದ ಇದಾಗಿದ್ದು, ಇದುವರೆಗೆ ಕಾರಣ ತಿಳಿದಿಲ್ಲದಕ್ಕಾಗಿ ಅದು ಮತ್ತಷ್ಟು ಉಲ್ಬಣಗೊಂಡಿತು” ಎಂದು ಅವರು ಹೇಳಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಸಂಜಯ್ ಪಿಪ್ಪಲ್ (26) ಎಂದು ಗುರುತಿಸಲಾಗಿದ್ದು, 24 ವರ್ಷದ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಘರ್ಷಣೆಯಲ್ಲಿ ಭಾಗಿಯಾದ ಎರಡು ಗುಂಪುಗಳ ಸದಸ್ಯರು ಜಾಟವ್‌ ಮತ್ತು ಗುಜ್ಜರ್ ಸಮುದಾಯಗಳಿಗೆ ಸೇರಿದವರು ಎಂದು ವರದಿ ಹೇಳಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...