Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

- Advertisement -
- Advertisement -

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು ಹೇಳಿ ಥಳಿಸಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ಅಮರಕಂಟಕ್‌ನಲ್ಲಿ 22 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರನ್ನು ಹೊರಹಾಕಿ, ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಜಿಎನ್‌ಟಿಯುನಲ್ಲಿ ಅಸ್ಸಾಂನ ಅರ್ಥಶಾಸ್ತ್ರದ ಸ್ನಾತಕೋತ್ತರ ವಿದ್ಯಾರ್ಥಿ ಹಿರೋಸ್ ಜ್ಯೋತಿ ದಾಸ್ ಅವರ ದೂರಿನ ಮೇರೆಗೆ ಬುಧವಾರ ಮಧ್ಯರಾತ್ರಿಯ ಮೊದಲು ಐದು ಆರೋಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅನುಪ್ಪುರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ನವೀನ್ ತಿವಾರಿ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 296 (ಅಶ್ಲೀಲ ಕೃತ್ಯಗಳು ಮತ್ತು ಮಾತುಗಳು), 351(3) (ಕ್ರಿಮಿನಲ್ ಬೆದರಿಕೆ), ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಗುರುವಾರ ಹೇಳಿದರು.

ಕಳೆದ ತಿಂಗಳು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಈಶಾನ್ಯದ ತ್ರಿಪುರದ ವಿದ್ಯಾರ್ಥಿನಿ ಅಂಜೆಲ್ ಚಕ್ಮಾ ಸಾವನ್ನಪ್ಪಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಚಕ್ಮಾ ಹತ್ಯೆ ಪ್ರಕರಣ ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಯಿತು. ಇಂತಹ ದ್ವೇಷ ಅಪರಾಧಗಳ ವಿರುದ್ಧ ಕ್ರಮ ಮತ್ತು ಕಾನೂನುಗಳಿಗೆ ಕರೆಗಳು ಬಂದಿವೆ.

“ಐವರು ವಿದ್ಯಾರ್ಥಿಗಳನ್ನು ಶಿಸ್ತು ಸಮಿತಿಯು ಒಂದು ದಿನ ಮುಂಚಿತವಾಗಿ ವಿಶ್ವವಿದ್ಯಾಲಯದಿಂದ ಹೊರಹಾಕಿದೆ ಎಂದು ವಿಶ್ವವಿದ್ಯಾಲಯವು ನಮಗೆ ತಿಳಿಸಿದೆ. ದಾಸ್ ಅವರಿಂದ ದೂರು ಸ್ವೀಕರಿಸಿದ ನಂತರ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ದಾಸ್ ಪ್ರಕಾರ, ಅವರು ಶೌಚಾಲಯದಿಂದ ತಮ್ಮ ಹಾಸ್ಟೆಲ್ ಕೋಣೆಗೆ ಹಿಂತಿರುಗುತ್ತಿದ್ದಾಗ, ಆರೋಪಿಗಳು ನೀವು ಎಲ್ಲಿಂದ ಬಂದವರು ಮತ್ತು ವಿಶ್ವವಿದ್ಯಾಲಯದಲ್ಲಿ ಏನು ಮಾಡುತ್ತಿದ್ದೀರಿ ಎಂದು ಕೇಳಿದರು. ನಂತರ ಅವರು ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಅವರ ಮೇಲೆ ಹಲ್ಲೆ ನಡೆಸಿದರು” ಎಂದು ಅಧಿಕಾರಿ ಹೇಳಿದರು.

“ತಾನು ಕಳೆದ ಮೂರು ವರ್ಷಗಳಿಂದ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದೇನೆ. ಬಳೆಯಿಂದ ಹೊಡೆದ ಪರಿಣಾಮ ತನ್ನ ಕಣ್ಣು, ತುಟಿ, ಮೂಗಿಗೆ ಗಾಯಗಳಾಗಿವೆ” ಎಂದು ಬಲಿಪಶು ಪೊಲೀಸರಿಗೆ ತಿಳಿಸಿದ್ದಾರೆಂದು ಅಧಿಕಾರಿ ತಿಳಿಸಿದ್ದಾರೆ.

“ವಿದ್ಯಾರ್ಥಿಯು ತಮ್ಮ ದೂರಿನಲ್ಲಿ ಅನುರಾಗ್ ಪಾಂಡೆ, ಜತಿನ್ ಸಿಂಗ್, ರಜನೀಶ್ ತ್ರಿಪಾಠಿ, ವಿಶಾಲ್ ಯಾದವ್ ಮತ್ತು ಉತ್ಕರ್ಷ್ ಸಿಂಗ್ ಅವರನ್ನು ಹೆಸರಿಸಿದ್ದಾರೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...