Homeಮುಖಪುಟಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ನಾಯಕನಿಗೆ ಹೃದಯಾಘಾತ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ನಾಯಕನಿಗೆ ಹೃದಯಾಘಾತ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಟಿಕೆಟ್ ನಿರಾಕರಿಸಿದ ಸುದ್ದಿ ತಿಳಿದ ನಂತರ ಹಿರಿಯ ಬಿಜೆಪಿ ನಾಯಕ, ಮಾಜಿ ಗೃಹ ಸಚಿವ ಉಮಾಶಂಕರ್ ಗುಪ್ತಾ (71) ಹೃದಯಾಘಾತಕ್ಕೀಡಾಗಿದ್ದು, ಅವರನ್ನು ಸೋಮವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು TOI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸುದ್ದಿ ತಿಳಿದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ, ಗುಪ್ತಾರ ಆರೋಗ್ಯ ಸ್ಥಿತಿ ಕುರಿತು ವಿಚಾರಿಸಿದರು.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗುಪ್ತಾ ಅವರ ಆರೋಗ್ಯ ವಿಚಾರಿಸಿದ್ದಾರೆ.

ಮಾಜಿ ಗೃಹ ಸಚಿವ, ಭೋಪಾಲ್‌ನ ಮಾಜಿ ಮೇಯರ್ ಹಾಗೂ ನೈರುತ್ಯ ಭೋಪಾಲ್ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಉಮಾಶಂಕರ್ ಗುಪ್ತಾ, ಈ ಬಾರಿಯೂ ಅದೇ ಕ್ಷೇತ್ರದಿಂದಲೇ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ, ಬಿಜೆಪಿಯು ಈ ಬಾರಿಯು ಹೊಸ ಮುಖವಾದ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಭಗವಾನ್‌ದಾಸ್ ಸಬ್ನಾನಿ ಅವರಿಗೆ ಆ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅನಂತ್ ಶ್ರೀ ಆಸ್ಪತ್ರೆಯ ವೈದ್ಯರೊಬ್ಬರು, ”ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಆಂಜಿಯೊಗ್ರಫಿ ಮಾಡಿದಾಗ ಅವರ ರಕ್ತನಾಳದಲ್ಲಿ ಸಮಸ್ಯೆ ಕಂಡು ಬಂದಿದ್ದು, ಆಂಜಿಯೋಪ್ಲ್ಯಾಸ್ಟಿಯನ್ನು ನೆರವೇರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಗುಪ್ತಾ ಅವರ ಹೃದಯಾಘಾತದ ಸುದ್ದಿ ಹರಡಿದ ಕೂಡಲೇ, ಅವರ ಹಲವಾರು ಬೆಂಬಲಿಗರು ಆಸ್ಪತ್ರೆಯಲ್ಲಿ ಜಮಾವಣೆಗೊಂಡರು.

ಸಬನಾನಿ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಅವರು ಶನಿವಾರ ಭೋಪಾಲ್‌ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಗಲಾಟೆ ಮಾಡಿದರು.

ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ಆಶಿಶ್ ಅಗರ್ವಾಲ್ ಮಾತನಾಡಿ, ”ಗುಪ್ತಾ ಜಿ ಅವರು ಈಗ ಸ್ಥಿರವಾಗಿದ್ದಾರೆ. ಮುಂದಿನ 48-ಗಂಟೆಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನೋಂದಣಿಯಾಗದ ಮದರಸಾಗಳಿಗೆ ದಿನಕ್ಕೆ ₹10,000 ದಂಡ ವಿಧಿಸಿದ ಆದಿತ್ಯನಾಥ್ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...