Homeಮುಖಪುಟಭೂಪಾಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ನಾಲ್ಕು ನವಜಾತ ಶಿಶುಗಳು ಸಾವು

ಭೂಪಾಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ನಾಲ್ಕು ನವಜಾತ ಶಿಶುಗಳು ಸಾವು

- Advertisement -
- Advertisement -

ಮಧ್ಯಪ್ರದೇಶದ ಭೂಪಾಲ್‌ನ ಕಮಲಾ ನೆಹರು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ನಾಲ್ಕು ನವಜಾತ ಶಿಶುಗಳು ಸಾವನ್ನಪ್ಪಿವೆ.

ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ವಿಶೇಷ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶೇಷ ನವಜಾತ ಶಿಶು ನಿಗಾ ಘಟಕ (SNCU) ವಾರ್ಡ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಬಹುಶಃ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ದೊರೆತ ಕೂಡಲೇ ನಾವು ಸ್ಥಳಕ್ಕೆ ಭೇಟಿ ಣಿಡಿದ್ದೇವೆ. ಉಳಿದ ಮಕ್ಕಳನ್ನು ಪಕ್ಕದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ  ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.

ಕಮಲಾ ನೆಹರು ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಮಕ್ಕಳ ವಾರ್ಡ್‌ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 8 ರಿಂದ 10 ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ ಎಂದು ಫತೇಘರ್ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬರ್ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಇನ್ನು ಘಟನೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಮಕ್ಕಳನ್ನು ಉಳಿಸುವ ಬದಲು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಕೋಪಗೊಂಡಿರುವ ಮಕ್ಕಳ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಕೆಲವು ಪೋಷಕರು ತಮ್ಮ ಮಗುವನ್ನು ಇನ್ನು ಪತ್ತೆ ಮಾಡಿಲ್ಲ ಎಂದಿದ್ದಾರೆ.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಘಟನೆ ತುಂಬಾ ದುಃಖಕರ ಎಂದಿದ್ದಾರೆ. ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.

“ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ, ಮೊಹಮ್ಮದ್ ಸುಲೇಮಾನ್ ಅವರು ತನಿಖೆ ನಡೆಸುತ್ತಾರೆ” ಎಂದು ಮುಖ್ಯಮಂತ್ರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಅತಿದೊಡ್ಡ ಸರ್ಕಾರಿ ವೈದ್ಯಕೀಯ ಸೌಲಭ್ಯಗಳಲ್ಲಿ ಒಂದಾಗಿರುವ ಹಮೀಡಿಯಾ (Hamidia) ಆಸ್ಪತ್ರೆಯ ಭಾಗವಾಗಿದೆ ಕಮಲಾ ನೆಹರು ಮಕ್ಕಳ ಆಸ್ಪತ್ರೆ.

ಘಟನೆಯು “ತುಂಬಾ ನೋವಿನಿಂದ ಕೂಡಿದೆ” ಎಂದು ತಿಳಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಕಮಲ್ ನಾಥ್, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ಮತ್ತು ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...