Homeಮುಖಪುಟಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಬಿಜೆಪಿ ಮುಖಂಡನಿಂದ ಮೂತ್ರ ವಿಸರ್ಜನೆ

ಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಬಿಜೆಪಿ ಮುಖಂಡನಿಂದ ಮೂತ್ರ ವಿಸರ್ಜನೆ

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿದೆ.

ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆಗಿದ್ದು, ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.

ಆರೋಪಿಯನ್ನು ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ.

ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಟ್ವಿಟರ್‌ನಲ್ಲಿ ಆ ವೀಡಿಯೊವನ್ನು ಹಂಚಿಕೊಂಡಿದ್ದು, “ಆದಿವಾಸಿಗಳ ಹಿತಾಸಕ್ತಿಗಳ ಬಗ್ಗೆ ಸುಳ್ಳು ಮಾತನಾಡುವ ಬಿಜೆಪಿ ನಾಯಕರು ಬುಡಕಟ್ಟು ಜನಾಂಗದ ಬಡವರ ಮೇಲೆ ಈ ರೀತಿ ನಡೆದುಕೊಳ್ಳುತ್ತಿರುವುದು ಖಂಡನೀಯ” ಎಂದಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಟ್ಯಾಗ್ ಮಾಡಿರುವ ಅವರು “ಇದು ನಿಮ್ಮ ಬುಡಕಟ್ಟು ಪ್ರೀತಿಯೇ? ಇದನ್ನು ಜಂಗಲ್ ರಾಜ್ ಎನ್ನದೇ ಮತ್ತೆ ಏನೆಂದು ಕರೆಯಬೇಕು? ಈ ದುಷ್ಕೃತ್ಯ ಎಸಗಿದ ಬಿಜೆಪಿ ನಾಯಕನನ್ನು ಏಕೆ ಬಂಧಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಹೆಸರನ್ನು ಪ್ರವೇಶ್ ಶುಕ್ಲಾ ಎಂದು ಹೇಳಲಾಗುತ್ತಿದೆ, ಅವರು ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾರವರ ಬೆಂಬಲಿಗ ಕಾರ್ಯಕರ್ತರಾಗಿದ್ದಾರೆ. ಆತ ಹಿರಿಯ ಬಿಜೆಪಿ ನಾಯಕರೊಂದಿಗೆ ತೆಗೆಸಿಕೊಂಡಿರುವ ಫೋಟೊಗಳಿವೆ ಎಂದು ಅಬ್ಬಾಸ್ ಹಫೀಜ್ ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ಈ ಅಮಾನುಷ ಕೃತ್ಯ ಎಸಗಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೂಡಲೇ ಆರೋಪಿಯನ್ನು ಬಂಧಸಬೇಕೆಂದು ನೆಟ್ಟಿಗರು ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್‌ರವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ಬಿಡುಗಡೆಗೆ ವಿರೋಧ ಸರಿಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

0
ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್...