Homeಮುಖಪುಟಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದರಿಂದ ಕಮಲನಾಥ್ ನೇತೃತ್ವದ ಸರ್ಕಾರ ಪತನವಾಗಿತ್ತು.

- Advertisement -
- Advertisement -

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುತ್ತಿದೆ. ಉತ್ತರಪ್ರದೇಶದಲ್ಲಿ ವರದಿಯಾಗುತ್ತಿರುವ ಪ್ರಕರಣಗಳ ಕುರಿತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಅವರದ್ದೇ ಪಕ್ಷದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಬಿಜೆಪಿಯ ಮಹಿಳಾ ಅಭ್ಯರ್ಥಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ, ತಮ್ಮದೇ ಮಂತ್ರಿಮಂಡಲದ ಮಾಜಿ ಸಹೋದ್ಯೋಗಿ, ಹಾಲಿ ಬಿಜೆಪಿ ಅಭ್ಯರ್ಥಿಯಾಗಿರುವ ಇಮಾರ್ತಿ ದೇವಿ ಕುರಿತು ಕಮಲನಾಥ್‌ ಅವರು ಬಹಿರಂಗ ಸಭೆಯಲ್ಲೆ ‘ಐಟಂ’ ಎಂಬ ಪದ ಬಳಸಿ ವ್ಯಂಗ್ಯವಾಡಿದ್ದು, ಬಿಜೆಪಿಯಲ್ಲಿ ಆಕ್ರೋಶ ಭುಗಿಲ್ಲೆದ್ದಿದೆ.

ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ದಬ್ರಾ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಸುರೇಶ್ ರಾಜ್ ಪ್ರತಿಸ್ಫರ್ಧಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿಯನ್ನು ಐಟಂ ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಚುನಾವಣಾ ಸಮಾವೇಶದಲ್ಲಿ ನೇರವಾಗಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿಯವರ ಹೆಸರು ಬಳಸದೆ, ನಮ್ಮ ಅಭ್ಯರ್ಥಿ ಅವರಂತಲ್ಲ.. ಅವರ ಹೆಸರು ಏನೋ ಇದೆಯಲ್ಲ ಎಂದು ನೆರೆದಿದ್ದ ಕಾರ್ಯಕರ್ತರನ್ನು ಪ್ರಶ್ನಿಸುತ್ತಾರೆ.. ಅತ್ತಲಿಂದ ಕಾರ್ಯಕರ್ತರು ಇಮಾರ್ತಿ ದೇವಿಯೆಂದು ಒಕ್ಕೊರಲಿನಿಂದ ಕೂಗುತ್ತಾರೆ. ಬಳಿಕ ಮಾತನಾಡುವ ಕಮಲ್​​ನಾಥ್​​ ನೀವೆಲ್ಲರೂ ಅವರನ್ನು ನನಗಿಂತ ಚೆನ್ನಾಗಿ ಬಲ್ಲಿರಿ. ಎಂಥ ಐಟಂ ಎನ್ನುವ ಮೂಲಕ ಮಹಿಳೆಯೊಬ್ಬರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ.

ಕಮಲನಾಥ್ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ, ಸತ್ಯಾಗ್ರಹ ನಡೆಸಿದ್ದಾರೆ

ಇಮಾರ್ತಿ ದೇವಿ ವಿರುದ್ಧ ಮಾಜಿ ಸಿಎಂ ಕಮಲ್ ನಾಥ್ ಅವರ “ಐಟಂ” ಹೇಳಿಕೆಯನ್ನು ವಿರೋಧಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಇತರ ಪಕ್ಷದ ಮುಖಂಡರು,ಮಹಿಳಾ ಸದಸ್ಯರು ಎರಡು ಗಂಟೆಗಳ ಮೌನ ಪ್ರತಿಭಟನೆ ನಡೆಸಿದರು.

ವಿವಾದಾತ್ಮಕ ಹೇಳಿಕೆ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ‘ಮಹಿಳೆಯರು ಮತ್ತು ದಲಿತರನ್ನು ಕಮಲನಾಥ್‌ ಅಪಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ 21 ಕ್ಷೇತ್ರಗಳೂ ಸೇರಿ ರಾಜ್ಯದ 28 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು, ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.


ಇದನ್ನೂ ಓದಿ: ಮೊಹರಂ ಮೆರವಣಿಗೆ: NSA ಪ್ರಕರಣಗಳನ್ನು ಕೈಬಿಟ್ಟ ಮಧ್ಯಪ್ರದೇಶ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

The Mysore-Chennai Vandebharat train, inaugurated by the Prime Minister last week, collided; Calf death

‘ವಂದೇ ಭಾರತ್’ ಲಾಭದ ಪ್ರತ್ಯೇಕ ದಾಖಲೆಗಳನ್ನು ರೈಲ್ವೆ ಇಲಾಖೆ ನಿರ್ವಹಿಸುವುದಿಲ್ಲ: ಆರ್‌ಟಿಐ ಮಾಹಿತಿ

0
ವಂದೇ ಭಾರತ್ ರೈಲುಗಳ ಯಾವುದೇ ಪ್ರತ್ಯೇಕ ಆದಾಯದ ದಾಖಲೆಗಳನ್ನು ರೈಲ್ವೇ ಸಚಿವಾಲಯವು ನಿರ್ವಹಿಸುವುದಿಲ್ಲ ಎಂದು ಆರ್‌ಟಿಐ ಕಾಯ್ದೆಯಡಿಯಲ್ಲಿ ಸಲ್ಲಿಸಲಾದ ಅರ್ಜಿಗೆ ಸಚಿವಾಲಯದ ಪ್ರತಿಕ್ರಿಯೆ ನೀಡಿದೆ. ಮಧ್ಯಪ್ರದೇಶ ಮೂಲದ ಚಂದ್ರ ಶೇಖರ್ ಗೌರ್ ಅವರು ಕಳೆದ...