Homeಮುಖಪುಟಮಧ್ಯಪ್ರದೇಶ: ಆದಿವಾಸಿ ಯುವಕನ ಪಾದ ತೊಳೆದ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶ: ಆದಿವಾಸಿ ಯುವಕನ ಪಾದ ತೊಳೆದ ಸಿಎಂ ಶಿವರಾಜ್ ಸಿಂಗ್ ಚೌಹಾಣ್

- Advertisement -
- Advertisement -

ಬಿಜೆಪಿ ನಾಯಕ ಪ್ರವೇಜ್ ಶುಕ್ಲಾ ಎಂಬುವವನು ಆದಿವಾಸಿ ಯುವಕನ ಮುಖದ ಮೇಲೆ ಮೂತ್ರ ವಿಸರ್ಜಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಖಂಡನೆ ವ್ಯಕ್ತಪಡಿಸಿದ್ದಾರೆ. ಭೋಪಾಲ್‌ನ ಸಿಎಂ ಕಚೇರಿಯಲ್ಲಿ ಸಂತ್ರಸ್ತ ಯುವಕ ದಶರಥ ರಾವತ್‌ರನ್ನು ಭೇಟಿ ಮಾಡಿದ ಅವರು ಯುವಕನ ಪಾದ ತೊಳೆದು ಕ್ಷಮೆ ಯಾಚಿಸಿದ್ದಾರೆ.

“ಆ ವಿಡಿಯೋ ನೋಡಿ ನನಗೆ ನೋವಾಗಿದೆ. ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಜನರು ನನಗೆ ದೇವರಂತೆ” ಎಂದು ಚೌಹಾಣ್ ರಾವತ್‌ಗೆ ಹೇಳಿದ್ದಾರೆ. ದಶರಥ ರಾವತ್‌ರವರ ಪಾದ ತೊಳೆದು, ಹೂಮಾಲೆ ಹಾಕಿರುವ ವಿಡಿಯೋವನ್ನು  ಹಂಚಿಕೊಂಡಿದ್ದಾರೆ.

ಮಧ್ಯಪ್ರದೇಶದ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾರವರ ಬೆಂಬಲಿಗ ಎನ್ನಲಾದ ಪ್ರವೇಶ್ ಶುಕ್ಲಾ ಎಂಬಾತ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಆತನ ಮನೆಯನ್ನು ನೆಲಸಮಗೊಳಿಸಲಾಗಿದೆ ಎನ್ನಲಾಗಿದೆ.

ಬಿಜೆಪಿ ಆಡಳಿತದಲ್ಲಿ ಆದಿವಾಸಿ ಸಹೋದರ ಸಹೋದರಿಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಧ್ಯಪ್ರದೇಶದ ಬಿಜೆಪಿ ನಾಯಕನ ಅಮಾನವೀಯ ಅಪರಾಧದಿಂದ ಇಡೀ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ. ಇದು ಆದಿವಾಸಿಗಳು ಮತ್ತು ದಲಿತರ ಮೇಲಿನ ಬಿಜೆಪಿಯ ದ್ವೇಷದ ಅಸಹ್ಯಕರ ಮುಖ ಮತ್ತು ನೈಜ ಸ್ವರೂಪ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಬಿಎಸ್‌ಪಿ ವರಿಷ್ಠೆ ಮಾಯಾವತಿಯವರು ಟ್ವೀಟ್ ಮಾಡಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಏಕೆ ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಆದಿವಾಸಿ ಯುವಕನ ಮೇಲೆ ಮೂತ್ರ ಪ್ರಕರಣ ಬಿಜೆಪಿಯ ದ್ವೇಷದ ಅಸಹ್ಯಕರ ಮುಖವಾಗಿದೆ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...