Homeಮುಖಪುಟಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು - ತೀವ್ರ ಖಂಡನೆ

ಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು – ತೀವ್ರ ಖಂಡನೆ

- Advertisement -
- Advertisement -

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ಸರತಿ ಸಾಲಿನಲ್ಲಿ ನಿಂತ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಿಗರು ವಿಡಿಯೋವನ್ನು ಹಂಚಿಕೊಂಡು ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಕೆಲದಿನಗಳಿಂದ ಮಧ್ಯಪ್ರದೇಶ ಹಲವು ನಗರಗಳಲ್ಲಿ ರಸಗೊಬ್ಬರದ ಕೊರತೆ ಕಂಡುಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ DAP ಗೊಬ್ಬರ ಸರಬರಾಜು ಮಾಡುತ್ತಿದ್ದೇವೆ ಎಂದು ಹೇಳಿಕೊಂಡಿತ್ತು. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ಟ್ವೀಟ್ ಮಾಡಿ ನಾವು ಸಬ್ಸಿಡಿ ದರದಲ್ಲಿ ರೈತರಿಗೆ ರಸಗೊಬ್ಬರ ನೀಡುತ್ತಿದ್ದೇವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರದ ಬೆಲೆ ಹೆಚ್ಚಿದ್ದರೂ ಕಡಿಮೆ ಬೆಲೆ ರೈತರಿಗೆ ಒದಗಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು.

ಕೃಷಿ ಸಚಿವರ ಸ್ವಂತ ಜಿಲ್ಲೆ ಮೊರೆನಾದಲ್ಲಿಯೇ ರೈತರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಮಂಗಳವಾರ ಮಧ್ಯಾಹ್ನ ಮೊರೆನಾ ಜಿಲ್ಲೆಯ ಕೈಲಾರಸ್ ಪಟ್ಟಣದಲ್ಲಿ ಸಹಕಾರಿ ಸಂಘದ ಹೊರಗೆ ಜಮಾಯಿಸಿದ ರೈತರು ಒಬ್ಬರನ್ನೊಬ್ಬರು ತಳ್ಳುವ ರೀತಿ ರೈತರು ಸರತಿ ಸಾಲಿನಲ್ಲಿ ನಿಂತಿದ್ದರು. ಸಹಕಾರಿ ಸಂಘದ ಹೊರಗೆ ಕಾಲ್ತುಳಿತದಂತಹ ಪರಿಸ್ಥಿತಿ ಇತ್ತು. ಜನಜಂಗುಳಿಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಪೊಲೀಸರನ್ನು ಒತ್ತಾಯಿಸಿತು. ಹಾಗಾಗಿ ಪೊಲೀಸರು ಮನಬಂದತೆ ಲಾಠಿ ಬೀಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಘಟನೆಯನ್ನು ಖಂಡಿಸಿರುವ ಕಿಸಾನ್ ಏಕ್ತಾ ಮೋರ್ಚಾ, “ಸಚಿವರು ಟ್ವಿಟರ್‌ನಲ್ಲಿ ರಸಗೊಬ್ಬರ ಚೀಲಗಳನ್ನು ವಿತರಿಸಬಹುದೆನೋ. ಏಕೆಂದರೆ ಗೊಬ್ಬರ ಪಡೆಯಲು ಸರತಿ ಸಾಲಿನಲ್ಲಿ ನಿಂತ ರೈತ ದೊಣ್ಣೆಗಳಿಂದ ಏಟು ಪಡೆಯುತ್ತಿದ್ದಾರೆ” ಎಂದು ಕಿಡಿಕಾರಿದೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರ ಕೇಳಿದ ರೈತರಿಗೆ ಲಾಠೀಚಾರ್ಜ್ ಮಾಡಲಾಗುತ್ತಿದೆ. ಬಿಜೆಪಿಯು ಸಂಪೂರ್ಣ ರೈತ ವಿರೋಧಿಯಾಗಿದೆ. ದೇಶದ ಅನ್ನದಾತ ಸ್ವತಂತ್ರ ಭಾರತದಲ್ಲಿ ಎಂದಿಗೂ ಇಂತಹ ಕ್ರೌರ್ಯವನ್ನು ಎದುರಿಸಿಲ್ಲ ಎಂದು ಹಲವು ಕಾಂಗ್ರೆಸ್ ಮುಖಂಡರು ಟ್ವೀಟ್ ಮಾಡಿದ್ದಾರೆ.

ಮಧ್ಯ ಪ್ರದೇಶದ ಮೊರೆನಾದಲ್ಲಿ ರಸಗೊಬ್ಬರ ಕೊರತೆಯನ್ನು ಎದುರಿಸುತ್ತಿರುವ ಹಸಿದ ಮತ್ತು ಬಾಯಾರಿದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದರು. ಬೆಳಿಗ್ಗೆಯಿಂದ ಹಸಿದ ಮತ್ತು ಬಾಯಾರಿದ ರೈತರ ಮೇಲೆ ಪೊಲೀಸರು ಲಾಠಿ ಮಳೆಗೈದರು ಎಂದು ರಾಜ ಎಂಬ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...