Homeದಲಿತ್ ಫೈಲ್ಸ್ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

- Advertisement -
- Advertisement -

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...