Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಕುರ್ಚಿ ಮೇಲೆ ಕುಳಿತಿದ್ದಕ್ಕೆ ವಿರೋಧ, ಜಾತಿ ನಿಂದನೆ : ಆರೋಪ

ದಲಿತ ವ್ಯಕ್ತಿ ಕುರ್ಚಿ ಮೇಲೆ ಕುಳಿತಿದ್ದಕ್ಕೆ ವಿರೋಧ, ಜಾತಿ ನಿಂದನೆ : ಆರೋಪ

- Advertisement -
- Advertisement -

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಕುರ್ಚಿ ಮೇಲೆ ಕುಳಿತಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಬಲ ಸಮುದಾಯದ ವ್ಯಕ್ತಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈ ಪೂರ್ವ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಲಿತ ವ್ಯಕ್ತಿ ಅಶೋಕ್ ಸಾಕೇತ್ ಎಂಬವರು ತನ್ನ ಮನೆ ಮುಂದೆ ಕುರ್ಚಿ ಹಾಕಿ ಕುಳಿತಿದ್ದಾಗ, ಅದೇ ದಾರಿಯಾಗಿ ಹೋಗುತ್ತಿದ್ದ ಪ್ರಬಲ ಸಮುದಾಯದ ವ್ಯಕ್ತಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ನವೆಂಬರ್ 10ರಂದು ಅಶೋಕ್ ಅವರು ಮನೆ ಮುಂದೆ ಕುರ್ಚಿ ಹಾಕಿ ಕುಳಿತಿದ್ದರು. ಈ ವೇಳೆ ಮನೆ ಮುಂದಿನ ರಸ್ತೆಯಲ್ಲಿ ಸಾಗುತ್ತಿದ್ದ ಪ್ರಬಲ ಸಮುದಾಯದ ಮಯಾಂಕ್ ದ್ವಿವೇದಿ ಎಂಬಾತ, ಅಶೋಕ್ ಕುಳಿತಿರುವುದನ್ನು ಕಂಡು ಕೋಪಗೊಂಡಿದ್ದಾರೆ. ಜಾತಿ ನಿಂದನೆ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿ ವಿವರಿಸಿದೆ.

ನೀನು ಕೆಳ ಜಾತಿಯವ, ನೀನು ನಮ್ಮ ಮುಂದೆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಯಾವುದೇ ಹಕ್ಕಿಲ್ಲ” ಎಂದು ಮಯಾಂಕ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶೋಕ್, “ನಾನು ನನ್ನ ಮನೆ ಮುಂದೆ ಕುಳಿತಿದ್ದೇನೆ” ಎಂದು ಹೇಳಿದ್ದಾರೆ. ಈ ವೇಳೆ ಮತ್ತಷ್ಟು ಕೋಪಗೊಂಡ ಮಯಾಂಕ್, ಜಾತಿ ಉಲ್ಲೇಖಿಸಿ ಹೆಚ್ಚಿನ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅಶೋಕ್ ಪೊಲೀಸ್ ದೂರು ದಾಖಲಿಸಿದ್ದು, ದೂರು ನೀಡಲು ಹೋದಾಗ ಪೊಲೀಸ್ ಅಧಿಕಾರಿಗಳೂ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ದಿ ಮೂಕ್‌ನಾಯಕ್ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅಶೋಕ್, “ನಾನು ದೂರು ನೀಡಲು ಲಾರ್ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸರು ನನ್ನ ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬದಲಾಗಿ, ಅವರು ನನಗೆ ಜಾತಿ ನಿಂದನೆ ಮಾಡಿದ್ದಾರೆ. ಅದು ನನಗೆ ಬಹಳ ನೋವುಂಟು ಮಾಡಿದೆ. ಅಂತಿಮವಾಗಿ ಎಫ್ಐಆರ್ ದಾಖಲಾಗಿದೆ. ಆದರೆ, ಪೊಲೀಸರ ವರ್ತನೆ ನಿರಾಶಾದಾಯಕವಾಗಿತ್ತು” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಿಸಿದ ನಂತರ ಅಪರಿಚಿತ ವ್ಯಕ್ತಿಗಳು ತಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ಅಶೋಕ್ ಹೇಳಿಕೊಂಡಿದ್ದಾರೆ. ನವೆಂಬರ್ 10ರ ಸಂಜೆ, ಅವರು ಪೊಲೀಸ್ ಠಾಣೆಯಿಂದ ಹಿಂತಿರುಗಿದ ಸ್ವಲ್ಪ ಸಮಯದ ನಂತರ, ಕೆಲ ವ್ಯಕ್ತಿಗಳು ಅವರ ಮನೆಗೆ ನುಗ್ಗಿ, ಬಾಗಿಲನ್ನು ಹಾನಿಗೊಳಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ. “ನೀನು ನಮ್ಮ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಿಯಲ್ವಾ.. ಇನ್ನು ಪರಿಣಾಮಗಳನ್ನು ಎದುರಿಸು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ ಎಂದು ಮೂಕನಾಯಕ್ ವರದಿ ವಿವರಿಸಿದೆ.

ದಾಳಿ ಮಾಡಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಅಶೋಕ್ ಕುಟುಂಬ ಪೊಲೀಸರಿಗೆ ಮನವಿ ಮಾಡಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ (ಎಸ್‌ಸಿ) ವಿಭಾಗದ ಅಧ್ಯಕ್ಷ ಪ್ರದೀಪ್ ಅಹಿರ್ವಾರ್, ಕೃತ್ಯವನ್ನು ಖಂಡಿಸಿದ್ದಾರೆ. “ನಮ್ಮ ಸಮಾಜದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರದ ಘಟನೆಗಳು ಮಿತಿ ಮೀರಿವೆ. ಈ ದುರದೃಷ್ಟಕರ ಘಟನೆಯು ಆಳವಾಗಿ ಬೇರೂರಿರುವ ಜಾತಿವಾದವನ್ನು ಎತ್ತಿ ತೋರಿಸುತ್ತದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...