Homeದಲಿತ್ ಫೈಲ್ಸ್ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

- Advertisement -
- Advertisement -

ಆಗಸ್ಟ್ 6ರಂದು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಿಂದ ಹಲವಾರು ವಿಡಿಯೊಗಳು ವೈರಲ್ ಆಗಿವೆ. ಕಳ್ಳತನದ ಶಂಕೆಯ ಮೇಲೆ ದಲಿತ ವ್ಯಕ್ತಿಯೊಬ್ಬನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದ್ದಾರೆ. ಮುಸ್ಲಿಮನೋ ಹಿಂದೂವೋ ಎಂದು ತಿಳಿಯಲು ದಲಿತ ಯುವಕನ ಬಟ್ಟೆಯನ್ನೂ ಬಿಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆದಿತ್ಯ ರೋಕ್ಡೆ ಎಂದು ಗುರುತಿಸಲಾಗಿದ್ದು, ಆಗಸ್ಟ್ 3 ರಂದು ಖಾರ್ಗೋನ್‌ನ ನಿಮ್ರಾಣಿ ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಖಾರ್ಗೋನ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಧರ್ಮವೀರ್ ಸಿಂಗ್ ಯಾದವ್, ಘಟನೆಯ ಬಗ್ಗೆ ಪೊಲೀಸರಿಗೆ ಆಗಸ್ಟ್ 6ರಂದು ಮಾಹಿತಿ ಸಿಕ್ಕಿತು. ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

“ನಿಮ್ರಾಣಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ (ಆದಿತ್ಯ ರೊಕ್ಡೆ ಅವರಿಗೆ) ಕೆಲವರು ಥಳಿಸಿದ್ದಾರೆ ಎಂದು ನಮಗೆ ತಿಳಿಯಿತು. ನಾವು ಅವರ ಕುಟುಂಬವನ್ನು ಪತ್ತೆಹಚ್ಚಿದ್ದೇವೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.

ರೊಕ್ಡೆ ಅವರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ತಿಳಿದ ನಂತರವೂ ಕಾನೂನು ಕ್ರಮಗಳನ್ನು ಜರುಗಿಸುವಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.

ಮುಸ್ಲಿಮನೇ ಹಿಂದೂವೇ ಎಂದು ತಿಳಿಯಲು ಬಟ್ಟೆ ಬಿಚ್ಚಿ ಹಲ್ಲೆ: ಆರೋಪ

ರೊಕ್ಡೆ ಅವರ ತಾಯಿ ಭಗವತಿ ರೊಕ್ಡೆ ಪ್ರತಿಕ್ರಿಯೆ ನೀಡಿದ್ದು, “ನನ್ನ ಮಗ ಕೆಲಸದ ನಿಮಿತ್ತ ಖಾಲ್‌ಘಾಟ್‌ಗೆ ಹೋಗಿದ್ದನು. ಮನೆಗೆ ಹಿಂದಿರುಗುತ್ತಿದ್ದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ನನ್ನ ಮಗ ಹಿಂದೂವೋ ಅಥವಾ ಮುಸ್ಲಿಮನೋ ಎಂದು ತಿಳಿದುಕೊಳ್ಳಲು ದುಷ್ಕರ್ಮಿಗಳು ನನ್ನ ಮಗನ ಬಟ್ಟೆ ಬಿಚ್ಚಿ ಅವಮಾನ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ದುಷ್ಕರ್ಮಿಗಳು ನನ್ನ ಮಗನನ್ನು ಹೊಡೆದಿದ್ದಾರೆ. ವಿವಸ್ತ್ರಗೊಳಿಸಿದ್ದಾರೆ. ಹಿಂದೂ ಸಮುದಾಯದವನೋ ಅಥವಾ ಮುಸ್ಲಿಂ ಸಮುದಾಯದವನೋ ಎಂದು ಪರಿಶೀಲಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದರೂ ನನ್ನ ಮಗನನ್ನು ಕಾಪಾಡಲು ಯಾವುದೇ ಕ್ರಮ ಜರುಗಿಸಲಿಲ್ಲ” ಎಂದು ನೊಂದ ತಾಯಿ ಸಂಕಷ್ಟ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಕುಟುಂಬದ ಆರೋಪವನ್ನು ಅಲ್ಲಗಳೆದಿದ್ದು, ರೋಕ್ಡೆಯವರನ್ನು ಕಳ್ಳತನದ ಆರೋಪದ ಮೇಲೆ ಥಳಿಸಿದ್ದಾರೆಯೇ ಹೊರತು ಧರ್ಮದ ಆಧಾರದಲ್ಲಿ ಅಲ್ಲ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...