Homeಮುಖಪುಟಪರಿಶಿಷ್ಟರ ಕಲ್ಯಾಣ ನಿಧಿಯನ್ನು ಗೋವು, ಧಾರ್ಮಿಕ ಕೇಂದ್ರಗಳಿಗೆ ಬಳಸಿಕೊಂಡ ಮಧ್ಯ ಪ್ರದೇಶ

ಪರಿಶಿಷ್ಟರ ಕಲ್ಯಾಣ ನಿಧಿಯನ್ನು ಗೋವು, ಧಾರ್ಮಿಕ ಕೇಂದ್ರಗಳಿಗೆ ಬಳಸಿಕೊಂಡ ಮಧ್ಯ ಪ್ರದೇಶ

- Advertisement -
- Advertisement -

ಕೇಂದ್ರ ಸರ್ಕಾರದ ಅನುದಾನಿತ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಇರುವ ನಿಧಿಯನ್ನು ಮಧ್ಯ ಪ್ರದೇಶ ಸರ್ಕಾರ ಧಾರ್ಮಿಕ ಕೇಂದ್ರಗಳು ಮತ್ತು ಮ್ಯೂಸಿಯಂ ಅಭಿವೃದ್ಧಿ, ಗೋವುಗಳ ಕಲ್ಯಾಣಕ್ಕೆ ಬಳಕೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ‘ಗೋ ಸಂವರ್ಧನೆ ಮತ್ತು ಪಶು ಸಂವರ್ಧನೆ ಯೋಜನೆಯಡಿ ಗೋ ಕಲ್ಯಾಣಕ್ಕೆ ನಿಗದಿಯಾಗಿದ್ದ 252 ಕೋಟಿ ರೂಪಾಯಿಗಳಲ್ಲಿ 96.76 ಕೋಟಿ ರೂಪಾಯಿಗಳನ್ನು ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ನಿಧಿಯಿಂದ ಬಳಸಿಕೊಳ್ಳಲಾಗಿದೆ. ಗೋ ಕಲ್ಯಾಣ ನಿಧಿಯನ್ನು ಕಳೆದ ವರ್ಷಕ್ಕಿಂತ 90 ಕೋಟಿ ರೂಪಾಯಿಯಷ್ಟು ಹೆಚ್ಚಿಸಲಾಗಿದೆ.

ಅದೇ ರೀತಿ, ಆರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮೀಸಲಿಟ್ಟ 109 ಕೋಟಿ ರೂ.ಗಳಲ್ಲಿ ಅರ್ಧದಷ್ಟು ಹಣ ಕೂಡ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ನಿಧಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ದಾಖಲೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪರಿಶಿಷ್ಟರ ಕಲ್ಯಾಣ ನಿಧಿಯನ್ನು ಇತರ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಇದರಿಂದ ಪರಿಶಿಷ್ಟರು ಕೂಡ ಪ್ರಯೋಜನ ಪಡೆಯುತ್ತಾರೆ ಎಂದು ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ತಿಳಿಸಿದೆ.

“ನಮ್ಮ ಬಜೆಟರಿ ವ್ಯವಸ್ಥೆಯಲ್ಲಿ ಇತರ ಯೋಜನೆಗಳಿಗೆ ಎಸ್‌ಸಿ, ಎಸ್‌ಟಿ ಉಪಯೋಜನೆ ಹಣವನ್ನು ಬಳಸಿಕೊಳ್ಳುವುದಕ್ಕೆ ಯಾವುದೇ ನಿರ್ಬಂಧ ಇಲ್ಲ” ಎಂದು ಅಧಿಕಾರಿ ಹೇಳಿದ್ದಾರೆ ಎಂದಿದೆ.

1974ರಲ್ಲಿ ಪರಿಶಿಷ್ಟ ಪಂಗಡಗಳ ಉಪಯೋಜನೆ ಜಾರಿಗೆ ಬಂದರೆ, 1979ರಲ್ಲಿ ಪರಿಶಿಷ್ಟ ಜಾತಿಗೆ ಉಪಯೋಜನೆ ಜಾರಿಗೆ ಬಂದಿದೆ. ಇದು ಸಂವಿಧಾನದ 46 ನೇ ವಿಧಿಯನ್ನು ಅನುಷ್ಠಾನಗೊಳಿಸುವ ಒಂದು ಮಾರ್ಗವಾಗಿದೆ. ರಾಜ್ಯಗಳು ಶಿಕ್ಷಣ ಮತ್ತು ಸಮಾಜದ ದುರ್ಬಲ ವರ್ಗಗಳ ಆರ್ಥಿಕ ಹಿತಾಸಕ್ತಿಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಮಧ್ಯ ಪ್ರದೇಶವು ಕರ್ನಾಟಕದ ಬಳಿಕ ಎಸ್‌ಸಿ, ಎಸ್ಟಿ ನಿಧಿಯನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿರುವ ಎರಡನೇ ರಾಜ್ಯವಾಗಿದೆ. ಕರ್ನಾಟಕ ಸರ್ಕಾರ ಕಲ್ಯಾಣ ಯೋಜನೆಗಳಿಗಾಗಿ 14 ಸಾವಿರ ಕೋಟಿ ರೂಪಾಯಿಗಳನ್ನು ಈ ಉಪಯೋಜನೆಯಿಂದ ವರ್ಗಾಯಿಸಿತ್ತು.

ಇದನ್ನೂ ಓದಿ : ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...