Homeಮುಖಪುಟಮಧ್ಯಪ್ರದೇಶ: 'ಐಟಂ' ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ಮಾಜಿ ಮುಖ್ಯಮಂತ್ರಿ ಕಮಲನಾಥ್​​, ದಾಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಭಾಷಣದಲ್ಲಿ ಸುರೇಶ್ ರಾಜೆ​​ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ನಾಯಕಿ ಇಮಾರ್ತಿ ದೇವಿ ಅವರನ್ನು ಐಟಂ​ ಎಂದು ಕರೆದಿದ್ದರು

- Advertisement -
- Advertisement -

ಮಹಿಳಾ ಬಿಜೆಪಿ ಅಭ್ಯರ್ಥಿಯ ಬಗ್ಗೆ “ಐಟಂ” ಎಂಬ ಹೇಳಿಕೆಯ ಕುರಿತು 48 ಗಂಟೆಗಳ ಒಳಗೆ ವಿವರಿಸಲು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ಚುನಾವಣಾ ಆಯೋಗ ಇಂದು ಆದೇಶಿಸಿದೆ.

ಮಧ್ಯಪ್ರದೇಶ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ಮಾಜಿ ಮುಖ್ಯಮಂತ್ರಿ ಕಮಲನಾಥ್​​, ದಾಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಭಾಷಣದಲ್ಲಿ ಸುರೇಶ್ ರಾಜೆ​​ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ನಾಯಕಿ ಇಮಾರ್ತಿ ದೇವಿ ಅವರನ್ನು ಐಟಂ​ ಎಂದು ಕರೆದಿದ್ದರು

ಚುನಾವಣಾ ಸಮಾವೇಶದಲ್ಲಿ ನೇರವಾಗಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿಯವರ ಹೆಸರು ಬಳಸದೆ, “ನಮ್ಮ ಅಭ್ಯರ್ಥಿ ಅವರಂತಲ್ಲ. ಅವರ ಹೆಸರು ಏನೋ ಇದೆಯಲ್ಲ ಎಂದು ನೆರೆದಿದ್ದ ಕಾರ್ಯಕರ್ತರನ್ನು ಪ್ರಶ್ನಿಸುತ್ತಾರೆ. ಅತ್ತಲಿಂದ ಕಾರ್ಯಕರ್ತರು ಇಮಾರ್ತಿ ದೇವಿಯೆಂದು ಒಕ್ಕೊರಲಿನಿಂದ ಕೂಗುತ್ತಾರೆ. ಬಳಿಕ ಮಾತನಾಡುವ ಕಮಲ್​​ನಾಥ್​​, ಅವರು ಎಂಥ ಐಟಂ ಎಂಬುದನ್ನು ನೀವೆಲ್ಲರೂ ನನಗಿಂತ ಚೆನ್ನಾಗಿ ಬಲ್ಲಿರಿ” ಎನ್ನುವ ಮೂಲಕ ಮಹಿಳೆಯೊಬ್ಬರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ, ಹಾಲಿ ಬಿಜೆಪಿ ಅಭ್ಯರ್ಥಿಯಾಗಿರುವ ಇಮಾರ್ತಿ ದೇವಿ ಕುರಿತು ಕಮಲನಾಥ್‌ ಅವರು ಬಹಿರಂಗ ಸಭೆಯಲ್ಲೆ ‘ಐಟಂ’ ಎಂಬ ಪದ ಬಳಸಿ ವ್ಯಂಗ್ಯವಾಡಿದ್ದು, ಬಿಜೆಪಿಯಲ್ಲಿ ಆಕ್ರೋಶ ಭುಗಿಲೆದ್ದಿತ್ತು.

ಮಧ್ಯಪ್ರದೇಶ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ವಿವಾದಾತ್ಮಕ ಹೇಳಿಕೆಯನ್ನು ಪಕ್ಷದ ಮುಖಂಡ ರಾಹುಲ್ ಗಾಂಧಿ ಬಹಿರಂಗವಾಗಿ ಟೀಕಿಸಿದ್ದರು. ಇದರ ನಂತರವೂ ಕಮಲನಾಥ್ ಕ್ಷಮೆಯಾಚಿಸಲು ನಿರಾಕರಿಸಿದ್ದರು.

ಇದನ್ನೂ ಓದಿ: ಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

“ನಾನು ಆ ಹೇಳಿಕೆಯನ್ನು ನೀಡಿದ ಸಂದರ್ಭವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಯಾರನ್ನೂ ಅವಮಾನಿಸುವ ಉದ್ದೇಶವಿಲ್ಲದಿದ್ದಾಗ ನಾನು ಯಾಕೆ ಕ್ಷಮೆಯಾಚಿಸಬೇಕು? ಯಾರಾದರೂ ಅವಮಾನಕ್ಕೊಳಗಾಗಿದ್ದರೆ, ಅದಕ್ಕೆ ನಾನು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದೇನೆ. ಐಟಂ ಎನ್ನುವುದು ಸಂಸತ್ತು ಸೇರಿದಂತೆ ಎಲ್ಲೆಡೆ ಸಾಮಾನ್ಯವಾಗಿ ಬಳಸುವ ಪದವಾಗಿದೆ ಮತ್ತು ಇದು ಯಾವುದೇ ರೀತಿಯ ಅವಮಾನವಲ್ಲ” ಎಂದು ಕಮಲನಾಥ್ ಸುದ್ದಿಗಾರರಿಗೆ ತಿಳಿಸಿದರು.

“ನಾನು ಅಗೌರವದಿಂದ ಏನನ್ನೂ ಹೇಳಲಿಲ್ಲ. ನಾನು ಮಹಿಳೆಯರನ್ನು ಗೌರವಿಸುತ್ತೇನೆ. ಇದು ಅಗೌರವ ಎಂದು ಯಾರಾದರೂ ಭಾವಿಸಿದರೆ, ನಾನು ವಿಷಾದಿಸುತ್ತೇನೆ” ಎಂದು ಅವರು ಹೇಳಿದರು.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ ಹೇಳಿಕೆಯು ಉಪಚುನಾವಣೆಗೆ ಮುನ್ನ ದೊಡ್ಡ ವಿವಾದವನ್ನು ಹುಟ್ಟುಹಾಕಿದ್ದು, ರಾಜ್ಯದ ಆಡಳಿತಾರೂಢ ಬಿಜೆಪಿ ಮತ್ತು ಆ ಮಹಿಳಾ ಅಭ್ಯರ್ಥಿಯು ಕಮಲನಾಥ್‌ರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದರು.

ಈ ಅಭಿಪ್ರಾಯವು ರಾಷ್ಟ್ರೀಯ ಮಹಿಳಾ ಆಯೋಗದ ಗಮನಕ್ಕೆ ಬಂದಿದ್ದು, ಹಿರಿಯ ಮುಖಂಡರಿಂದ ವಿವರಣೆಯನ್ನು ಕೋರಿದೆ.


ಇದನ್ನೂ ಓದಿ: ಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...