Homeಮುಖಪುಟಮಧ್ಯಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ: ಅದಾನಿ, ಅಂಬಾನಿಯಿಂದ 13.43 ಲಕ್ಷ ಉದ್ಯೋಗಗಳು, ₹22.4 ಕೋಟಿ ಯೋಜನೆಗಳ...

ಮಧ್ಯಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ: ಅದಾನಿ, ಅಂಬಾನಿಯಿಂದ 13.43 ಲಕ್ಷ ಉದ್ಯೋಗಗಳು, ₹22.4 ಕೋಟಿ ಯೋಜನೆಗಳ ಘೋಷಣೆ

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮೊದಲ ದಿನದಂದು, ಅದಾನಿ, ರಿಲಯನ್ಸ್ ಮತ್ತು ಹಿಂಡಾಲ್ಕೊ 13.43 ಲಕ್ಷ ಉದ್ಯೋಗಗಳ ಭರವಸೆಯೊಂದಿಗೆ ರಾಜ್ಯದಲ್ಲಿ ಸಂಭಾವ್ಯ ದೊಡ್ಡ ಹೂಡಿಕೆದಾರರಾಗಿ ಹೊರಹೊಮ್ಮಿವೆ. ಇಲ್ಲಿಯವರೆಗೆ ಪ್ರಸ್ತಾಪಿಸಲಾದ ಒಟ್ಟು ಹೂಡಿಕೆಗಳು ₹22.4 ಲಕ್ಷ ಕೋಟಿ ರೂ. ವಾಗಿದೆ.

ಇದುವರೆಗೆ ಪ್ರಸ್ತಾಪಿಸಲಾದ ಅತಿದೊಡ್ಡ ಹೂಡಿಕೆ ನವೀಕರಿಸಬಹುದಾದ ಇಂಧನ ವಲಯದಲ್ಲಿದೆ. ಅದಾನಿ ಗ್ರೂಪ್ 60,000 ಸಂಭಾವ್ಯ ಉದ್ಯೋಗ ಸೃಷ್ಟಿಯೊಂದಿಗೆ ಉಷ್ಣ ಶಕ್ತಿಯಲ್ಲಿ ₹50,000 ಕೋಟಿ ಹೂಡಿಕೆಯನ್ನು ಪ್ರಸ್ತಾಪಿಸಿದೆ.

ಸಿಮೆಂಟ್, ಒಳಚರಂಡಿ, ಸ್ಮಾರ್ಟ್ ಮೀಟರ್ ತಂತ್ರಜ್ಞಾನ ಮತ್ತು ಗಣಿಗಾರಿಕೆಯಲ್ಲಿಯೂ ಸಹ ಸಮೂಹವು ಹೂಡಿಕೆ ಮಾಡಲಿದೆ. ಇದು 1.2 ಲಕ್ಷ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ. ಮತ್ತೊಂದು ಗ್ರೀನ್‌ಫೀಲ್ಡ್ ಸ್ಮಾರ್ಟ್ ಸಿಟಿ ಹೂಡಿಕೆ ಯೋಜನೆಯು ₹1 ಲಕ್ಷ ಕೋಟಿ ಹೂಡಿಕೆಯನ್ನು ಕಾಣಲಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಜೈವಿಕ ಇಂಧನಗಳಲ್ಲಿ ₹60,000 ಕೋಟಿ ಹೂಡಿಕೆಯನ್ನು ಪ್ರಸ್ತಾಪಿಸಿದೆ. ಇದು 1.2 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಈ ಗುಂಪು ಗ್ರೀನ್‌ಫೀಲ್ಡ್ ಸ್ಮಾರ್ಟ್ ಸಿಟಿಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮತ್ತು ವಿಮಾನ ನಿಲ್ದಾಣದ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವ ಬಗ್ಗೆಯೂ ಮಾತುಕತೆ ನಡೆಸುತ್ತಿದೆ.

ರೈತರಿಗೆ ಕನಿಷ್ಠ 10 ಗಂಟೆಗಳ ನಿರಂತರ ವಿದ್ಯುತ್ ಒದಗಿಸುವ ಸರ್ಕಾರದ ಯೋಜನೆಗಳೊಂದಿಗೆ ಹಸಿರು ಇಂಧನದ ಮೇಲಿನ ಗಮನವು ಸಂಬಂಧ ಹೊಂದಿದೆ. ರಾಜ್ಯವು ಪ್ರಸ್ತುತ ನವೀಕರಿಸಬಹುದಾದ ಮೂಲಗಳ ಮೂಲಕ ತನ್ನ ವಿದ್ಯುತ್‌ನ ಶೇಕಡಾ 15ರಷ್ಟು ಉತ್ಪಾದಿಸುತ್ತದೆ.

ಅವಾಡಾ ಗ್ರೂಪ್ ಮುಂದಿನ ಐದು ವರ್ಷಗಳಲ್ಲಿ ಸೌರಶಕ್ತಿ, ಪವನ ಶಕ್ತಿ, ಪಂಪ್ ಸಂಗ್ರಹಣೆ ಮತ್ತು ಬ್ಯಾಟರಿ ಸಂಗ್ರಹಣೆಯಲ್ಲಿ ₹50,000 ಕೋಟಿ ಹೂಡಿಕೆ ಮಾಡಲು ಪ್ರತಿಜ್ಞೆ ಮಾಡಿದೆ. ಇವುಗಳನ್ನು ಮಾಲ್ವಾ, ಬುಂದೇಲ್‌ಖಂಡ್ ಮತ್ತು ಭಿಂದ್‌ನಂತಹ ರಾಜ್ಯದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಸ್ಥಾಪಿಸಲಾಗುವುದು.

ಹಿಂಡಾಲ್ಕೊದ ₹15,000 ಕೋಟಿ ಹೂಡಿಕೆಯು ಅಲ್ಯೂಮಿನಿಯಂ ಕರಗಿಸುವಿಕೆಗೆ ಹೋಗುತ್ತದೆ. ಗುಂಪು ಈಗಾಗಲೇ ರಾಜ್ಯದಲ್ಲಿ ₹25,000 ಕೋಟಿ ದೊಡ್ಡ ಹೂಡಿಕೆಯನ್ನು ಹೊಂದಿದೆ.

ಮತ್ತೊಂದು ಆಸಕ್ತಿಯ ಕ್ಷೇತ್ರವೆಂದರೆ ಆಟೋಮೋಟಿವ್ ಮತ್ತು ವಿದ್ಯುತ್ ವಾಹನಗಳ ವಲಯ. ಇದರ ಕುರಿತಾದ ಪ್ರದರ್ಶನವೂ ಶೃಂಗಸಭೆಯ ಭಾಗವಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 30 ಕ್ಕೂ ಹೆಚ್ಚು ಮೂಲ ಉಪಕರಣ ತಯಾರಕರು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನವರನ್ನು ಆಹ್ವಾನಿಸಲು ಇದು ಆಶಿಸುತ್ತಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ₹1 ಲಕ್ಷ ಕೋಟಿ ಹೂಡಿಕೆಯೊಂದಿಗೆ 4,000 ಕಿ.ಮೀ ರಸ್ತೆಗಳನ್ನು ಸೇರಿಸುವ ಮೂಲಕ ಇದರಲ್ಲಿ ಭಾಗವಹಿಸಲಿದೆ.

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...