Homeಮುಖಪುಟಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು.

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ ಎನ್ನುವ ಪದಬಳಕೆ ವ್ಯಾಪಕವಾಗುತ್ತಿದ್ದು, ಆದರೆ ಈ ಪದವನ್ನು ಬಳಸುತ್ತಿರುವವರು ಕೇವಲ ಬಿಜೆಪಿ ನಾಯಕರು ಮಾತ್ರ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಇದರ ಕುರಿತು ಅಧಿಕೃತವಾಗಿ ನೀಡಿರುವ ಹೇಳಿಕೆಗೂ, ಈಗ ರಾಜ್ಯ ಸರ್ಕಾರಗಳು ಇದರ ಕುರಿತು ತೆಗೆದುಕೊಳ್ಳುತ್ತಿರುವ ನಿಲುವುಗಳು ದ್ವಂದ್ವವನ್ನು ಸೃಷ್ಟಿಸುತ್ತಿವೆ.

ಇದಕ್ಕೆ ಇನ್ನಷ್ಟು ಪುಷ್ಟಿ ನಿಡುವಂತೆ ಇದೀಗ ಮಧ್ಯಪ್ರದೇಶ ಸರ್ಕಾರ ಲವ್ ಜಿಹಾದ್ ನಿಯಂತ್ರಿಸಲು ಶೀಘ್ರವೇ ಶಾಸನ ರೂಪಿಸುವುದಾಗಿ ಹೇಳಿದೆ. ಆದರೆ ಕೇಂದ್ರ ಸರ್ಕಾರದ ಹೇಳಿಕೆಯ ಪ್ರಕಾರ ಇದುವರೆಗೂ ಯಾವುದೇ ಲವ್ ಜಿಹಾದ್ ಪ್ರಕರಣಗಳು ದಾಖಲಾಗಿಲ್ಲ ಎಂಬುದೇ ವಿಪರ್ಯಾಸ. ಈ ಮೊದಲು ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಹೇಳಿದ್ದವು.

ಈ ಕುರಿತು ಮಾತನಾಡಿದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, “ಲವ್ ಜಿಹಾದ್ ಸಮಸ್ಯೆಯನ್ನು ಎದುರಿಸಲು ರಾಜ್ಯ ಸರ್ಕಾರ ಮುಂದಿನ ಅಧಿವೇಶನದಲ್ಲಿಯೇ ಕಾನೂನನ್ನು ಜಾರಿಗೆ ತರಲಿದ್ದು, ಇದನ್ನು ಉಲ್ಲಂಘಿಸಿದವರಿಗೆ 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಆದರೆ ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

ಲೋಕಸಭೆಯಲ್ಲಿ ಲವ್‌ ಜಿಹಾದ್‌ ಬಗ್ಗೆ ಮೋದಿ ಸರ್ಕಾರ ಏನು ಹೇಳಿದೆ?

ಕೇರಳದ ಕಾಂಗ್ರೆಸ್ ಸಂಸದ ಬೆನ್ನಿ ಬೆಹಾನನ್ ಅವರು ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳು ಇಲ್ಲಿವೆ.

(ಎ) ಕೇರಳದಲ್ಲಿ ಲವ್ ಜಿಹಾದ್ ಪ್ರಕರಣವಿಲ್ಲ ಎಂದು ಕೇರಳ ಹೈಕೋರ್ಟ್‌ನ ವೀಕ್ಷಣೆಯ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ?

(ಬಿ) ಹಾಗಿದ್ದರೆ, ಅದರ ವಿವರಗಳೇನು? ಮತ್ತು

(ಸಿ) ಕಳೆದ ಎರಡು ವರ್ಷಗಳಲ್ಲಿ ಯಾವುದೇ ಕೇಂದ್ರ ಏಜೆನ್ಸಿಗಳು ಕೇರಳದಿಂದ ಲವ್ ಜಿಹಾದ್ ಪ್ರಕರಣವನ್ನು ವರದಿ ಮಾಡಿವೆಯೇ? ಹಾಗಿದ್ದಲ್ಲಿ, ಅದರ ವಿವರಗಳನ್ನು ನೀಡಿ.

ಈ ಪ್ರಶ್ನೆಗಳಿಗೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರ ಸಂಪೂರ್ಣ ಪ್ರತಿಕ್ರಿಯೆ ಇಲ್ಲಿದೆ.

“ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.”

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

 

ಕೇರಳದಿಂದ ಅಂತರ್ ಧರ್ಮ -ನಂಬಿಕೆಯ ವಿವಾಹಗಳನ್ನು ಒಳಗೊಂಡ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಮಾಡಿದೆ. ‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಇದು ಲವ್ ಜಿಹಾದ್ ಅಲ್ಲವಂತೆ

ಆದರೆ ಕೇಂದ್ರದ ಬಿಜೆಪಿ ಸರ್ಕಾರವೇ ಇಷ್ಟೆಲ್ಲಾ ಹೇಳಿದ್ದರೂ ಸಹ, ನವೆಂಬರ್ 6 ರಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ “ಲವ್ ಜಿಹಾದ್” ಹೆಸರಿನಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಇಂತಹ ಕಾನೂನು ತರಲು ತಮ್ಮ ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದ್ದರು.

ವಿವಾಹದ ಉದ್ದೇಶಕ್ಕಾಗಿ ಮಾತ್ರ ಧಾರ್ಮಿಕ ಮತಾಂತರಗೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ಸೆಪ್ಟೆಂಬರ್‌ನಲ್ಲಿ ಅಲಹಾಬಾದ್ ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...