HomeUncategorizedಹಿಂದೂ ಭಾವನೆಗೆ ಧಕ್ಕೆ ಆರೋಪ: ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ ಜಾಮೀನು ತಿರಸ್ಕೃತ

ಹಿಂದೂ ಭಾವನೆಗೆ ಧಕ್ಕೆ ಆರೋಪ: ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ ಜಾಮೀನು ತಿರಸ್ಕೃತ

ಆರೋಪಿಗಳ ವಿರುದ್ದ ಇನ್ನೂ ಹೆಚ್ಚು ದೋಷಾರೋಪಣೆ ಸಂಗ್ರಹಿಸುವ ಸಾಧ್ಯತೆ ಇದೆ. ಅಲ್ಲದೆ ಪ್ರಕರಣದಲ್ಲಿ ಇತರ ವ್ಯಕ್ತಿಗಳ ಪಾತ್ರವನ್ನು ಕೂಡಾ ಕಡೆಗಣಿಸಲಾಗುವುದಿಲ್ಲ- ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ರೋಹಿತ್ ಆರ್ಯ

- Advertisement -
- Advertisement -

ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ ಮತ್ತು ಸಹ ಆರೋಪಿ ನಳಿನ್ ಯಾದವ್ ಅವರ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್‌ನ ಇಂದೋರ್ ನ್ಯಾಯಪೀಠ ಗುರುವಾರ ತಿರಸ್ಕರಿಸಿದೆ.

ಇಂದೋರ್‌ನಲ್ಲಿ ನಡೆದ ಹೊಸ ವರ್ಷದ ಕಾರ್ಯಕ್ರಮವೊಂದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಜನವರಿ 1 ರಂದು ಬಂಧಿಸಲಾಗಿತ್ತು.

ಮುನಾವರ್‌ ಫಾರೂಕಿ ಸ್ಥಳೀಯ ರೆಸ್ಟೋರೆಂಟ್‌ವೊಂದರಲ್ಲಿ ತಮ್ಮ ಪ್ರದರ್ಶನವನ್ನು ಪ್ರಾರಂಭಿಸುವ ಮುನ್ನ ಇಂದೋರ್‌ನ ಬಿಜೆಪಿ ಶಾಸಕ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ, ಹಿಂದೂ ರಕ್ಷಕ ಸಂಘಟನ್ ಮುಖ್ಯಸ್ಥ ಏಕಲವ್ಯ ಸಿಂಗ್ ಗೌಡ್ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ಅವರು ಇತರ ನಾಲ್ವರು ಸಹ ಆರೋಪಿಗಳೊಂದಿಗೆ ಜನವರಿ 2 ರಿಂದ ಜೈಲಿನಲ್ಲಿದ್ದಾರೆ. ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ಜನವರಿ 25 ರಂದು ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿತ್ತು.

ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ರೋಹಿತ್ ಆರ್ಯ ಅವರ ಏಕ-ನ್ಯಾಯಪೀಠವು, “ಆರೋಪಿಗಳ ವಿರುದ್ದ ಇನ್ನೂ ಹೆಚ್ಚು ದೋಷಾರೋಪಣೆ ಸಂಗ್ರಹಿಸುವ ಸಾಧ್ಯತೆ ಇದೆ. ಅಲ್ಲದೆ ಪ್ರಕರಣದಲ್ಲಿ ಇತರ ವ್ಯಕ್ತಿಗಳ ಪಾತ್ರವನ್ನು ಕೂಡಾ ಕಡೆಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಮುನಾವರ್‌ ಫಾರೂಕಿಯ ವಕೀಲ ಅನ್ಶುಮಾನ್ ಶ್ರೀವಾಸ್ತವ, “ನಾವು ನಮ್ಮ ಕಾನೂನು ಮತ್ತು ನ್ಯಾಯಾಂಗವನ್ನು ನಂಬುತ್ತೇವೆ. ಅದಕ್ಕೆ ಅನುಗುಣವಾಗಿ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...