Homeಮುಖಪುಟದಲಿತ ಯುವಕನಿಗೆ ಮೂತ್ರ ಕುಡಿಸಿದ್ದ 3 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ 3 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

- Advertisement -
- Advertisement -

ಗ್ವಾಲಿಯರ್ : ಕಳೆದ ತಿಂಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಭಿಂಡ್ ಮೂತ್ರ ವಿಸರ್ಜನೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠ ಶುಕ್ರವಾರ ತಿರಸ್ಕರಿಸಿದೆ. ಕೆಲವು ಮೇಲ್ಜಾತಿಯ ಯುವಕರು ದಲಿತ ಯುವಕನನ್ನು ಅಪಹರಿಸಿ, ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದ ಅಮಾನವೀಯ ಘಟನೆಯಿಂದ ಚಂಬಲ್ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಅದರ ನಡುವೆಯೇ ಈ ಕ್ರಮ ಕೈಗೊಳ್ಳಲಾಗಿದೆ.

ಭಿಂಡ್ ಜಿಲ್ಲೆಯ ದಲಿತ ಯುವಕನೊಬ್ಬ, ಮೇಲ್ಜಾತಿಯ ವ್ಯಕ್ತಿಗಳ ಬೊಲೆರೋ ಗಾಡಿಯನ್ನು ಓಡಿಸಲು ನಿರಾಕರಿಸಿದ ಕಾರಣ ಆತನನ್ನು ಅಪಹರಿಸಿ, ಕಾಲುಗಳನ್ನ ಕಟ್ಟಿ, ಥಳಿಸಿ, ಆತನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ಹಲ್ಲೆ ಮಾಡಲಾಗಿತ್ತು. 

ಸೋನು ಬರುವಾ, ಅಲೋಕ್ ಶರ್ಮಾ ಮತ್ತು ಛೋಟು ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು.

ದಲಿತ ಯುವಕನ ಮೇಲಾದ ಈ ಅಮಾನವೀಯ ದಾಳಿಯನ್ನು ಖಂಡಿಸಿ, ಆಜಾದ್ ಸಮಾಜ ಪಕ್ಷ ಮತ್ತು ಭೀಮ್ ಆರ್ಮಿಯಂತಹ ಗುಂಪುಗಳು ಆತನ ಬೆಂಬಲಕ್ಕೆ ನಿಂತವು, ಆದರೆ ಹಲವಾರು ಹಿಂದೂ ಸಂಘಟನೆಗಳು ಆರೋಪಗಳನ್ನು ಕಟ್ಟುಕಥೆ ಎಂದು ತಳ್ಳಿಹಾಕಿ, ಆರೋಪಿಗಳಿಗೆ ಬೆಂಬಲ ಸೂಚಿಸಿದ್ದವು.

ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಭಿಂಡ್ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಹೊರಗೆ ಹಿಂದೂ ಸಂಘಟನೆಗಳು ಮತ್ತು ಮುಖಂಡರು ಪ್ರತಿಭಟನೆ ನಡೆಸಿದರು.

ನಂತರ ಆರೋಪಿಗಳು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದರು, ಆದರೆ ದಾಳಿಗೆ ಒಳಗಾಗಿದ್ದ ಯುವಕ ಈ ಮನವಿಯನ್ನು ಬಲವಾಗಿ ವಿರೋಧಿಸಿದರು. “ಜಾಮೀನು ನೀಡುವುದರಿಂದ ಇದೇ ರೀತಿಯ ಅಪರಾಧಗಳಿಗೆ ಪ್ರೋತ್ಸಾಹ ದೊರೆಯುತ್ತದೆ ಮತ್ತು ಆರೋಪಿಗಳಿಗೆ ಧೈರ್ಯ ತುಂಬುತ್ತದೆ” ಎಂದು ಸಂತ್ರಸ್ತರ ಪರ ವಕೀಲ ಅನಿಲ್ ಕುಮಾರ್ ಜಾಟವ್ ನ್ಯಾಯಾಲಯದ ಮುಂದೆ ವಾದಿಸಿದರು. “ಇಂತಹ ಘಟನೆಗಳು ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಜಾಮೀನು ನೀಡಿದರೆ, ಅಪರಾಧ ಕೃತ್ಯಗಳತ್ತ ಒಲವು ಹೊಂದಿರುವ ಇತರ ವ್ಯಕ್ತಿಗಳು ಈ ಅಪರಾಧಗಳನ್ನು ಪುನರಾವರ್ತಿಸಬಹುದು” ಎಂದು ಅವರು ಹೇಳಿದರು.

ವಾದಗಳನ್ನು ಪರಿಗಣಿಸಿದ ನಂತರ, ಹೈಕೋರ್ಟ್ ಜಾಮೀನು ಆಕ್ಷೇಪಣೆಯನ್ನು ಎತ್ತಿಹಿಡಿದು, ಆರೋಪಿಗಳ ಅರ್ಜಿಯನ್ನು ತಿರಸ್ಕರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....