Homeಮುಖಪುಟಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!

ಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!

- Advertisement -
- Advertisement -

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ 58 ವರ್ಷದ ಕೋವಿಡ್ -19 ರೋಗಿ ಮೃತರಾಗಿದ್ದಾರೆ ಎಂದು ತಪ್ಪಾಗಿ ಘೋಷಿಸಿದ್ದಾರೆ. ಒಂದು ಸಲ ಅಲ್ಲ ಎರಡು ಸಲ ಈ ಪ್ರಮಾದ ನಡೆದಿದೆ. ಎರಡನೇ ಬಾರಿಗೆ ರೋಗಿಯ ಕುಟುಂಬವು ಅಂತ್ಯಕ್ರಿಯೆಯ ವಿಧಿಗಳಿಗೆ ಸಿದ್ಧವಾಯಿತು. ಆಗ ಇಲ್ಲ ಇಲ್ಲ ಅವರು ವೆಂಟಿಲೇಟರ್ ಮೇಲೆ ಜೀವಂತವಾಗಿದ್ದಾರೆ ಎಂದು ಆಸ್ಪತ್ರೆ ತಿಳಿಸಿತು. ಇದು ಗೊಂದಲದಿಂದ ಸಂಭವಿಸಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಕೋವಿಡ್ ಅನುಮಾನದ ಕಾರಣ ಗೋರೆಲಾಲ್ ಕೋರಿಯವರನ್ನು ಗಂಭೀರ ಸ್ಥಿತಿಯಲ್ಲಿ ವಿದಿಶಾ ಅಟಲ್ ಬಿಹಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದೆ. ಅವರನ್ನು ಬುಧವಾರ ವೆಂಟಿಲೇಟರ್‌ನಲ್ಲಿ ಇರಿಸಲಾಯಿತು.

“ಮರುದಿನ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ನನ್ನನ್ನು ಆಸ್ಪತ್ರೆಗೆ ಕರೆದರು. ನಾನು ತಲುಪಿದ ನಂತರ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ನಂತರ ಅವರು ಮತ್ತೆ ಉಸಿರಾಡುತ್ತಿದ್ದಾರೆ ಎಂದು ನರ್ಸ್ ಹೇಳಿದರು” ಎಂದು ರೋಗಿಯ ಮಗ ಕೈಲಾಶ್ ಕೋರಿ ಹೇಳಿದ್ದಾರೆ.

ಆಗ ಆಸ್ಪತ್ರೆಯ ವೈದ್ಯರು ಕುಟುಂಬಕ್ಕೆ ಮಾಹಿತಿ ನೀಡಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿದೆ ಎಂದರು. ಕುಟುಂಬವು ಅದೇ ದಿನ ಶಸ್ತ್ರಚಿಕಿತ್ಸೆಗೆ ಅನುಮತಿ ನೀಡಿತು.

ಎರಡನೇ ‘ಸಾವು’!

“ಅವರು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಅವರು ನಮಗೆ ಮಾಹಿತಿ ನೀಡಿದರು. ರಾತ್ರಿ 8.30 ರ ಸುಮಾರಿಗೆ ಅವರು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಕೊರೋನಾ ದೃಢಪಟ್ಟ ಕಾರಣ ಈಗಲೇ ನೀವು ಅವರ ಮೃತ ದೇಹವನ್ನು ಪಡೆಯಲಾಗುವುದಿಲ್ಲ ಎಂದು ಅವರು ಹೇಳಿದರು” ಎಂದು ಕೋರಿಯ ಮಗ ಸುದ್ದಿಗಾರರಿಗೆ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ, ಅವರ ಕುಟುಂಬವು ಶವಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದಾಗ ಆಸ್ಪತ್ರೆಯ ಸಿಬ್ಬಂದಿ ಗೋರೆಲಾಲ್ ಕೋರಿ ಇನ್ನೂ ಜೀವಂತವಾಗಿದ್ದಾರೆ ಎಂದು ತಿಳಿಸಿದರು. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಇನ್ನೂ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದರು’ ಎಂದು ಪುತ್ರ ತಿಳಿಸಿದರು.

“ಅವರು ಎರಡು ಬಾರಿ ಸತ್ತರು ಎಂದು ಘೋಷಿಸಿದರು. ಇದು ಬೇಜವಾಬ್ದಾರಿತನ” ಎಂದು ಕೈಲಾಶ್ ಕೋರಿ ಹೇಳಿದರು. ಆಸ್ಪತ್ರೆಯ ಅಧಿಕಾರಿಗಳು ಇಡೀ ಪ್ರಸಂಗವನ್ನು “ಗೊಂದಲ” ಎಂದು ಹೇಳಿದ್ದಾರೆ.

“ಗೋರೆಲಾಲ್ ಕೋರಿ ವೆಂಟಿಲೇಟರ್‌ನಲ್ಲಿದ್ದರು. ಇದ್ದಕ್ಕಿದ್ದಂತೆ ಅವರ ಹೃದಯ ನಿಂತುಹೋಯಿತು. ಒಬ್ಬ ನರ್ಸ್ ಮೃತರಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯವಾಗಿ, ವೈದ್ಯರು ಅಂತಹ ಪ್ರಕರಣಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಇದು 1-2 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ನಮ್ಮ ವೈದ್ಯರು ಅವರನ್ನು ಪುನಶ್ಚೇತನಗೊಳಿಸಿದರು… ಇದೆಲ್ಲವೂ ಗೊಂದಲಕ್ಕೆ ಕಾರಣವಾಯಿತು” ಎಂದು ಆಸ್ಪತ್ರೆಯ ಡೀನ್ ಡಾ.ಸುನೀಲ್ ನಂದೇಶ್ವರ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...