Homeಮುಖಪುಟಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ನೀರು ಉಗುಳಿದ್ದಾರೆಂದು ಮೂವರು ಮುಸ್ಲಿಮರ ಮನೆಗಳ ಧ್ವಂಸ

ಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ನೀರು ಉಗುಳಿದ್ದಾರೆಂದು ಮೂವರು ಮುಸ್ಲಿಮರ ಮನೆಗಳ ಧ್ವಂಸ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬುಧವಾರ ನಡೆದ ಧಾರ್ಮಿಕ ಮೆರವಣಿಗೆ ವೇಳೆ ಮೂವರು ಮುಸ್ಲಿಂ ಯುವಕರು ನೀರು ಉಗುಳಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆ ಬಳಿಕ ಸರ್ಕಾರ ಆ ಯುವಕರ ಮನೆಗಳನ್ನು ನೆಲಸಮಗೊಳಿಸಿದೆ. ಆ ಮನೆಗಳು ಅಕ್ರಮ ಜಾಗದಲ್ಲಿ ನಿರ್ಮಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಮನೆಗಳನ್ನು ಧ್ವಂಸ ಮಾಡುವ ಸಮಯದಲ್ಲಿ ಅಧಿಕಾರಿಗಳು ಡ್ರಮ್ ಬಾರಿಸುವವರನ್ನು ಸಹ ಕರೆದುಕೊಂಡು ಹೋಗಿದ್ದರು.

ಬಾಬಾ ಮಹಾಕಾಲ್ ಸವಾರಿ ಎಂಬ ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ನೀರು ಉಗುಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಕೋಮು ಸೌಹಾರ್ದತೆಗೆ ಭಂಗ ತಂದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತರಾಗಿದ್ದು, ಅವರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಮೂರನೇ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಬಗ್ಗೆ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಕಂದಾಯ ಇಲಾಖೆಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಕಾಶ್ ಭುರಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆ ನಂತರ ಅತಿಕ್ರಮಣ ಮಾಡಿ ಮನೆ ಕಟ್ಟಿರುವುದರಿಂದ ಆ ಮನೆಗಳನ್ನು ತೆರವು ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮನೆ ನೆಲಸಮಗೊಳಿಸುವ ವೇಳೆ ಡ್ರಮ್ ಭಾರಿಸಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಭುರಿಯಾ ಅವರು, ”ಅಕ್ರಮ ಮನೆ ನೆಲಸಮಗೊಳಿಸುವ ವೇಳೆ ಡ್ರಮ್ಮರ್‌ಗಳನ್ನು ಕರೆತರುವುದು ಮತ್ತು ಸಾರ್ವಜನಿಕವಾಗಿ ಘೋಷಿಸುವುದು ನಿಯಮದಲ್ಲಿದೆ. ನಾವು ಈ ನಿಯಮಗಳನ್ನು ಅನುಸರಿಸಿದ್ದೇವೆ” ಎಂದು ಹೇಳಿದ್ದಾರೆ.

ಅಪರಾಧ ಮಾಡಿರುವ ಆರೋಪಿಗಳ ಮನೆಯನ್ನು ಕೆಡವಲು ಭಾರತೀಯ ಕಾನೂನಿನಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ. ಆದಾಗ್ಯೂ, ಈ ಅಭ್ಯಾಸವನ್ನು ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿಟ್ಟಿದೆ.

ಇದನ್ನೂ ಓದಿ: ಗ್ವಾಲಿಯರ್‌: ತನ್ನ ಪಾದ ನೆಕ್ಕುವಂತೆ ಮುಸ್ಲಿಂ ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿದ ಹಿಂದುತ್ವ ಮುಖಂಡ; ವೀಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...