Homeಮುಖಪುಟಮಧ್ಯಪ್ರದೇಶ: ದರ್ಗಾಕ್ಕೆ ಕೇಸರಿ ಬಳಿದ ಕಿಡಿಗೇಡಿಗಳು; ಪ್ರಕರಣ ದಾಖಲು

ಮಧ್ಯಪ್ರದೇಶ: ದರ್ಗಾಕ್ಕೆ ಕೇಸರಿ ಬಳಿದ ಕಿಡಿಗೇಡಿಗಳು; ಪ್ರಕರಣ ದಾಖಲು

ಹಿಂದೂ ಮುಸ್ಲಿಂ ಸಮುದಾಯಗಳು ಒಗ್ಗೂಡಿ ಮತ್ತೆ ಹಸಿರು ಬಣ್ಣವನ್ನು ಬಳಿದು ಕೋಮು ಸೌಹಾರ್ದತೆಯ ಸಂದೇಶ ಸಾರಿವೆ.

- Advertisement -
- Advertisement -

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಭಾನುವಾರ ಅಪರಿಚಿತ ವ್ಯಕ್ತಿಗಳು ದರ್ಗಾವನ್ನು ಧ್ವಂಸಗೊಳಿಸಿದ್ದಾರೆ. ಅದರ ಗೋಡೆಗಳು ಹಾಗೂ ಗುಮ್ಮಟಗಳಿಗೆ ಕೇಸರಿ ಬಣ್ಣವನ್ನು ಬಳಿದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ದರ್ಗಾದ ಬಾಗಿಲು ಒಡೆದಿರುವುದನ್ನು ಕೆಲವು ಸ್ಥಳೀಯರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಗುರುತಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೇಗುಲದ ಉಸ್ತುವಾರಿ ಅಬ್ದುಲ್ ಸತ್ತಾರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯೆ ನೀಡಿದ್ದು, ಗೋರಿ ಮತ್ತು ದರ್ಗಾದ ಪ್ರವೇಶದ್ವಾರಕ್ಕೆ ಕೇಸರಿ ಬಣ್ಣ ಬಳಿದಿದ್ದಾರೆ ಎಂದು ತಿಳಿಸಿದ್ದಾರೆ.

ದರ್ಗಾದ ಮರದ ಬಾಗಿಲುಗಳನ್ನು ಒಡೆದು ಸಮೀಪದ ಮಾರು ನದಿಯಲ್ಲಿ ಎಸೆಯಲಾಗಿದೆ ಎಂಬುದು ಕಂಡು ಬಂದಿದೆ. ಇದಲ್ಲದೆ, ದರ್ಗಾದ ಆವರಣದೊಳಗಿದ್ದ ಕೈ ಪಂಪನ್ನೂ ಕಿತ್ತುಹಾಕಲಾಯಿತು.

“ಭೋಪಾಲ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಈ ಸ್ಥಳದಲ್ಲಿ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವಧೇಶ್ ಪ್ರತಾಪ್ ಸಿಂಗ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳಿಗಾಗಿ, ಯಾವುದೇ ವರ್ಗದ ಧರ್ಮ, ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ವಿಧ್ವಂಸಕ ಕೃತ್ಯವನ್ನು ಖಂಡಿಸಿ ಮುಸ್ಲಿಂ ಸಮುದಾಯದ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ದೂರು ನೀಡಿದಾಗ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ. ಪ್ರತಿಭಟನಾಕಾರರು ರಾಜ್ಯ ಹೆದ್ದಾರಿಯನ್ನು ತಡೆದ ನಂತರವೇ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿರುವುದಾಗಿ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೌಹಾರ್ದತೆ ಮೆರೆದ ಸ್ಥಳೀಯರು

ಈ ಪ್ರದೇಶದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಶಾಂತಿಯುತವಾಗಿ ವಾಸಿಸುತ್ತಿದ್ದಾರೆ. ಅದನ್ನು ಒಡೆಯುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಹೇಮಂತ್ ಶ್ರೀವಾಸ್ತವ್ ಹೇಳಿದ್ದಾರೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

“ಎರಡೂ ಸಮುದಾಯಗಳ ಸ್ಥಳೀಯರು ಹಣವನ್ನು ಒಟ್ಟುಗೂಡಿಸಿ, ಬಣ್ಣವನ್ನು ತಂದು ದರ್ಗಾವನ್ನು ಮೊದಲಿನ ಸ್ಥಿತಿಗೆ ತಂದಿದ್ದಾರೆ” ಎಂದು ಶ್ರೀವಾಸ್ತವ್ ಹೇಳಿದ್ದಾರೆ. “ಈ ಪ್ರದೇಶದಲ್ಲಿ ಜನರು ಶಾಂತಿಯಿಂದ ಬದುಕುತ್ತಿದ್ದಾರೆ. ಜನರಲ್ಲಿ ಗಲಭೆ ಸೃಷ್ಟಿಸಲು ಯತ್ನಿಸಿದವರನ್ನು ನಾವು ಶೀಘ್ರದಲ್ಲೇ ಬಂಧಿಸುತ್ತೇವೆ” ಎಂದು ಇನ್‌ಸ್ಪೆಕ್ಟರ್‌ ಭರವಸೆ ನೀಡಿದ್ದಾರೆ.


ಇದನ್ನೂ ಓದಿರಿ: `ಕಾಶ್ಮೀರ್‌ ಫೈಲ್ಸ್‌‌’ ಎಂದು ಕೂಗುತ್ತಿರುವವರಿಗೆ ‘ದಲಿತ್‌ ಫೈಲ್ಸ್‌‌’ ಕಾಣುವುದಿಲ್ಲವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...