Homeಮುಖಪುಟಮಧ್ಯ ಪ್ರದೇಶ : 15 ನಿಮಿಷದಲ್ಲಿ ಎರಡು ಬಾರಿ ಸಚಿವರಾದ ಶಾಸಕ!

ಮಧ್ಯ ಪ್ರದೇಶ : 15 ನಿಮಿಷದಲ್ಲಿ ಎರಡು ಬಾರಿ ಸಚಿವರಾದ ಶಾಸಕ!

- Advertisement -
- Advertisement -

ಮಧ್ಯ ಪ್ರದೇಶದಲ್ಲಿ ನಡೆದ ವಿಚಿತ್ರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಾಸಕರೊಬ್ಬರು 15 ನಿಮಿಷದಲ್ಲಿ ಎರಡು ಬಾರಿ ಸಚಿವರಾಗಿದ್ದಾರೆ.

ಆರು ಬಾರಿ ವಿಜಯಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿದ್ದ ರಾಮ್‌ ನಿವಾಸ್ ರಾವತ್ ಅವರು, ಕಳೆದ ಏಪ್ರಿಲ್‌ನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ನಿನ್ನೆ (ಜುಲೈ 8) ಬಿಜೆಪಿ ಸರ್ಕಾದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆದರೆ, ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅಸಾಮಾನ್ಯ ಘಟನೆಗೆ ಸಾಕ್ಷಿಯಾಗಿ ಸುದ್ದಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ರಾಜಭವನದಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರು ರಾವತ್ ಅವರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಲು ನಿರ್ಧರಿಸಲಾಗಿತ್ತು. ಬೆಳಿಗ್ಗೆ 9.03ರ ಹೊತ್ತಿಗೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದಾಗಿ 15 ನಿಮಿಷಗಳ ನಂತರ ರಾವತ್ ಅವರಿಗೆ ಸಂಪುಟ ಸಚಿವರಾಗಿ ಎರಡನೇ ಪ್ರಮಾಣ ವಚನ ಬೋಧಿಸಲಾಗಿದೆ. ಎರಡು ಬಾರಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕಾರ್ಯವಿಧಾನದ ಲೋಪಗಳ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಕಾಂಗ್ರೆಸ್‌ ಶಾಸಕರಾಗಿರುವಾಗಲೇ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಮೊದಲ ವ್ಯಕ್ತಿ ರಾಮ್ ನಿವಾಸ್ ರಾವತ್ ಆಗಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗಿರುವ ರಾಮ್ ನಿವಾಸ್ ರಾವತ್, ಇನ್ನೂ ಕೂಡ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ. ಇಂದಿಗೂ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಮತ್ತು ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೆ ಬಿಜೆಪಿ ಸೇರಿ ಸಚಿವರಾಗಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಮಾಡುವಾಗ ರಾವತ್ ‘ಸಂಪುಟ ಸಚಿವ’ ಎಂದು ಹೇಳುವ ಬದಲಾಗಿ ತಪ್ಪಿ ‘ರಾಜ್ಯ ಸಚಿವ’ ರೆಂದು ಹೇಳಿದ್ದಾರೆ. ಇದರಿಂದಾಗಿ ಎರಡು ಬಾರಿ ಪ್ರಮಾಣ ವಚನ ಸ್ವೀಕಾರ ಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಆದರೆ, ಮೊದಲು ತಪ್ಪಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸ್ಥಾನಕ್ಕೆ ರಾವತ್ ರಾಜೀನಾಮೆ ನೀಡದ ಕಾರಣ ಈಗ ರಾವತ್ ಸಂಪುಟ ಸಚಿವರೂ ಆಗಿದ್ದಾರೆ, ರಾಜ್ಯ ಸಚಿವರೂ ಆಗಿದ್ದಾರೆ. ಸಾಂಪ್ರಾದಾಯಿಕವಾಗಿ ಅವರು ಸಂಪುಟ ಸಚಿವ ಪ್ರಮಾಣ ವಚನ ಸ್ವೀಕಾರ ಮಾಡುವ ಮೊದಲು ತಾನು ತಪ್ಪಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯ ಸಚಿವ ಸ್ಥಾನಕ್ಕೆ ಔಪಚಾರಿಕವಾಗಿ ರಾಜೀನಾಮೆ ನೀಡಬೇಕಾಗುತ್ತದೆ.

ಅತ್ತ ಕಾಂಗ್ರೆಸ್‌ಗೆ ರಾಜೀನಾಮೆ ನೀಡದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ರಾವತ್, ಇತ್ತ ಪ್ರಮಾಣ ವಚನದಲ್ಲಿ ಪ್ರಮಾದವೆಸಗಿ ಎರಡು ಸಚಿವರಾಗಿದ್ದಾರೆ. ಒಟ್ಟಿನಲ್ಲಿ ರಾವತ್ ರಾಜಕೀಯ ಗೊಂದಲಮಯವಾಗಿದೆ.

ಇದನ್ನೂ ಓದಿ : ಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...