Homeಮುಖಪುಟಮಧ್ಯಪ್ರದೇಶ: ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಮೂವರ ಬಂಧನ

ಮಧ್ಯಪ್ರದೇಶ: ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಮೂವರ ಬಂಧನ

- Advertisement -
- Advertisement -

ಭಾನುವಾರ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಶನಿವಾರ ರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಘಟನೆಯ ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೈರಲ್‌ ಆಗಿರುವ ವಿಡಿಯೊದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಯುವಕರ ಗುಂಪು ಕಿರುಕುಳ ನೀಡುತ್ತಿರುವುದನ್ನು ಕಾಣಬಹುದು. ವಾಹನ ಮರೆಯಲ್ಲಿರುವ ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಒಂದೆಡೆಯಾದರೆ, ಮತ್ತೊಬ್ಬ ಬಾಲಕಿಯನ್ನು ನಡುಬೀದಿಯಲ್ಲಿ ಎಳೆದಾಡಿ ಕಿರುಕುಳ ನೀಡುವುದನ್ನು ಕಾಣಬಹುದು. ಜೊತೆಗೆ ಮತ್ತೊಂದು ಗುಂಪಿನ ಆರೋಪಿಗಳು ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಭಾನುವಾರ, ಬುಡಕಟ್ಟು ಸಮುದಾಯಕ್ಕೆ ಸೇರಿರುವ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) (ಹೆಣ್ಣಿನ ಘನತೆಯ ಮೇಲೆ ಹಲ್ಲೆ) ಮತ್ತು 34 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಲಿರಾಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್, “ವೀಡಿಯೊ ವೈರಲ್ ಆದ ನಂತರ ನಾವು ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತೆ ದೂರು ನೀಡಲು ಮುಂದೆ ಬಂದಿಲ್ಲ. ವೀಡಿಯೋ ಆಧಾರದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗಳನ್ನು ಗುರುತಿಸಿದ್ದೇವೆ. ನಾವು ಅವರಲ್ಲಿ ಮೂವರನ್ನು ಬಂಧಿಸಿದ್ದೇವೆ. ಇತರ ಐವರು ವಿಡಿಯೋ ಚಿತ್ರೀಕರಣ ಮತ್ತು ಆರೋಪಿಗಳಿಗೆ ಪ್ರಚೋದನೆ ನೀಡುತ್ತಿದ್ದವರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಹಿಡಿಯಲು ಪೊಲೀಸ್ ತಂಡಗಳು ಪ್ರಯತ್ನಿಸುತ್ತಿವೆ” ಎಂದು ತಿಳಿಸಿದ್ದಾರೆ.

ಟ್ರೈಬಲ್‌ ಆರ್ಮಿ ಟ್ವಿಟರ್‌ ಖಾತೆಯಲ್ಲಿ ಘಟನೆಯ ಕುರಿತು ಟ್ವೀಟ್ ಮಾಡಲಾಗಿದ್ದು, “ಇದು ಭೀಕರ ದೃಶ್ಯ. ಬುಡಕಟ್ಟು ಮಹಿಳೆಯರ ಮೇಲಾಗಿರುವ ಇಂತಹ ಘಟನೆಗಳು ನಿತ್ಯವೂ ಘಟಿಸುತ್ತವೆ. ಯಾಕೆಂದರೆ ಬುಡಕಟ್ಟು ಮಹಿಳೆಯರು ಅಲಕ್ಷಿತ ಸಮುದಾಯಕ್ಕೆ ಸೇರಿರುವುದರಿಂದ ಇಂತಹ ಘಟನೆಗಳಾಗುತ್ತವೆ” ಎಂದು ಅಭಿಪ್ರಾಯ ಪಟ್ಟಿದೆ.

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯಗಳು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಗೋರಿಯಾವನ್ನು ಆಯೋಜಿಸಲಾಗುತ್ತದೆ. ಇದು ಆದಿವಾಸಿಗಳ ದೊಡ್ಡ ಹಬ್ಬವೆಂದು ಪರಿಗಣಿಸಲ್ಪಟ್ಟಿದೆ. ಪ್ರತಿ ವರ್ಷ ಗಂಗಾ ಮಹಾದೇವನ ದೇವಸ್ಥಾನದಲ್ಲಿ ಜಾತ್ರೆಯನ್ನು ಆಯೋಜಿಸುವುದರೊಂದಿಗೆ ಹಬ್ಬ ಪ್ರಾರಂಭವಾಗುತ್ತದೆ. ಅಲಿರಾಜಪುರದ ವಾಲ್ಪುರ್‌ನ ಭಗೋರಿಯಾ ಹಬ್ಬ ಬಹಳ ಜನಪ್ರಿಯವಾಗಿದೆ.

ಇದನ್ನೂ ಓದಿ: ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...