Homeಮುಖಪುಟಮಧ್ಯಪ್ರದೇಶ: RSSನ ಮಾಜಿ ಸ್ವಯಂಸೇವಕರಿಂದ ಹೊಸ ಪಕ್ಷ ಘೋಷಣೆ

ಮಧ್ಯಪ್ರದೇಶ: RSSನ ಮಾಜಿ ಸ್ವಯಂಸೇವಕರಿಂದ ಹೊಸ ಪಕ್ಷ ಘೋಷಣೆ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮಾಜಿ ಸ್ವಯಂಸೇವಕರ ಗುಂಪು ಮಧ್ಯಪ್ರದೇಶದಲ್ಲಿ ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷ ಜನಹಿತ್ ಪಾರ್ಟಿಯನ್ನು ರಚಿಸುವ ನಿರ್ಧಾರವನ್ನು ರವಿವಾರ ಪ್ರಕಟಿಸಿದೆ. ಈ ಕ್ರಮವು ಆಡಳಿತವನ್ನು ಸುಧಾರಿಸಲು ರಾಜಕೀಯ ಪಕ್ಷಗಳನ್ನು ಉತ್ತೇಜಿಸುತ್ತದೆ ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಮಾಜಿ ಪ್ರಚಾರಕ ಅಭಯ್ ಜೈನ್ ಅವರು ಭೋಪಾಲ್ ಬಳಿಯ ಮಿಸ್ರೋಡ್‌ನಲ್ಲಿ ತಮ್ಮ ಮಾಜಿ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ”ಎಲ್ಲಾ ರಾಜಕೀಯ ಪಕ್ಷಗಳ ಸಂಸ್ಕೃತಿಯು ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ನಾವು ಜನಹಿತ್ ಪಾರ್ಟಿಯನ್ನು ರಚಿಸಿದ್ದೇವೆ. ಎಲ್ಲ ರಾಜಕೀಯ ಪಕ್ಷಗಳು ವಿಫಲವಾಗಿವೆ” ಎಂದು ತಿಳಿಸಿದರು.

”ಎಲ್ಲಾ ರಾಜಕೀಯ ಪಕ್ಷಗಳ ಸಂಸ್ಕೃತಿ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ನಾವು ಜನಹಿತ್ ಪಕ್ಷವನ್ನು ರಚಿಸಿದ್ದೇವೆ. ಎಲ್ಲರೂ ವಿಫಲರಾಗಿದ್ದಾರೆ” ಎಂದು ತಿಳಿಸಿದರು.

”ತಮ್ಮ ಇನ್ನೂ ನೋಂದಣಿಯಾಗದ ಪಕ್ಷವು ಆಡಳಿತಾರೂಢ ಬಿಜೆಪಿಯ ಮತಗಳನ್ನು ಪಡೆಯುತ್ತದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ” ಎಂದು ಅವರು ಹೇಳಿದರು.

”2018ರಲ್ಲಿ ಬಿಜೆಪಿ ಸೋತಾಗ ಕಳೆದ ಸಂಸದೀಯ ಚುನಾವಣೆಯಲ್ಲಿ ನಾವು ಇರಲಿಲ್ಲ. ನಂತರ ಬಿಜೆಪಿ ಮತಗಳು ಕಾಂಗ್ರೆಸ್‌ಗೆ ಬದಲಾದವು, ಅದು ಉತ್ತಮ ಸ್ಥಿತಿಯಲ್ಲಿಲ್ಲ” ಎಂದು ಅವರು ಹೇಳಿದರು.

”ಬಿಜೆಪಿ ಸರ್ಕಾರದ ಕಾರ್ಯವೈಖರಿಯಿಂದ ಜನರು ತೃಪ್ತರಾಗಿಲ್ಲ” ಎಂದು ಜೈನ್ ಹೇಳಿದ್ದಾರೆ.

”ನಾವು ರಾಜಕೀಯ ವೇದಿಕೆಯಲ್ಲಿ ಕಾಣಿಸಿಕೊಂಡರೆ ಏನಾಗುತ್ತದೆ? ಬಿಜೆಪಿಯ ಬಗ್ಗೆ ಅಸಮಾಧಾನ ಹೊಂದಿರುವ, ಆದರೆ ಹಿಂದೂ ಮನಸ್ಥಿತಿ ಹೊಂದಿರುವವರು ನಮಗೆ ಆದ್ಯತೆ ನೀಡುತ್ತಾರೆ. ಬಿಜೆಪಿ ಐದು ಮತಗಳನ್ನು ಕಳೆದುಕೊಂಡರೆ, ರಾಜಕೀಯ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಅವುಗಳನ್ನು ಗಳಿಸುವುದಿಲ್ಲ. ನಮ್ಮ ಈ ಕ್ರಮವು ತಮ್ಮ ಆಡಳಿತವನ್ನು ಸುಧಾರಿಸಲು ರಾಜಕೀಯ ಪಕ್ಷಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ ಎಂದು ನಮಗೆ ಗೊತ್ತಿದೆ” ಎಂದು ಹೇಳಿದರು.

”ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದೀರಾ? ಎಂಬ ಪ್ರಶ್ನೆಗೆ ಜೈನ್, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ಯೋಚಿಸುತ್ತಿದ್ದೇವೆ. ನಮ್ಮ ರಾಜಕೀಯ ಗುರಿ ದೂರದೃಷ್ಟಿಯಿಂದ ಕೂಡಿದೆ” ಎಂದು ಅವರು ಹೇಳಿದರು.

ಜಾರ್ಖಂಡ್‌ನ ಐವರು ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರು ಒಳಗೊಂಡಂತೆ 200ಕ್ಕೂ ಹೆಚ್ಚು ಜನರು ಮಿಸ್ರೋಡ್‌ನಲ್ಲಿ ತಮ್ಮ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಜೈನ್ ಪಿಟಿಐಗೆ ದೂರವಾಣಿಯಲ್ಲಿ ತಿಳಿಸಿದರು.

ಸಂಘ ಪರಿವಾರದ ಸಂಘಟನೆಯಾದ ಭಾರತೀಯ ಕಿಸಾನ್ ಸಂಘದೊಂದಿಗೆ ಒಮ್ಮೆ ಸಂಬಂಧ ಹೊಂದಿದ್ದ ರವಿ ದತ್ ಸಿಂಗ್ ಅವರ ಪ್ರಕಾರ, ಅವರು ಸಭೆಯಲ್ಲಿ ಭಾಗವಹಿಸಿದ್ದರು. ಭಾಗವಹಿಸಿದವರು 2007-2008ರಲ್ಲಿ ಆರ್‌ಎಸ್‌ಎಸ್ ತೊರೆದವರು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...