Homeಮುಖಪುಟಮಧ್ಯಪ್ರದೇಶ| 'ಬುಡಕಟ್ಟು ಜನರು ಹಿಂದೂಗಳಲ್ಲ' ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

- Advertisement -
- Advertisement -

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ.

ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಉಳಿದಿದ್ದ ಆಹಾರವನ್ನು ಭಗವಾನ್ ರಾಮನಿಗೆ ತಿನ್ನಿಸಿದವರು ಶಬರಿ; ಆಕೆ ಕೂಡ ಆದಿವಾಸಿ” ಎಂದಿದ್ದರು.

ವಿವಾದದ ಬಳಿಕ ಸ್ಪಷ್ಟನೆ ನೀಡಿರುವ ಅವರು, ತಮ್ಮ ಹೇಳಿಕೆಗಳು ಯಾವುದೇ ನಂಬಿಕೆಯನ್ನು ಅವಮಾನಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಬುಡಕಟ್ಟು ಸಮುದಾಯದ ಸಂಪ್ರದಾಯಗಳು ಮತ್ತು ಪರಂಪರೆಯು ಮನ್ನಣೆಗೆ ಅರ್ಹವಾಗಿದೆ ಎಂದು ಒತ್ತಿ ಹೇಳಿದರು.

“ನಾವು ಯಾವುದೇ ಧರ್ಮವನ್ನು ಅಗೌರವಿಸುವುದಿಲ್ಲ. ಆದರೆ ನಮ್ಮ ಸಮುದಾಯ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಬುಡಕಟ್ಟು ಜನಾಂಗದವರು ಗೌರವಕ್ಕೆ ಅರ್ಹರು” ಎಂದು ಮಧ್ಯಪ್ರದೇಶದ ಅತಿದೊಡ್ಡ ಬುಡಕಟ್ಟು ಗುಂಪಾದ ಭಿಲ್ ಸಮುದಾಯದ ನಾಲ್ಕು ಬಾರಿ ಶಾಸಕರಾಗಿರುವ ಅವರು ಹೇಳಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಹಿಂದೂ ವಿರೋಧಿ ವಾಕ್ಚಾತುರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಕ್ರಿಯಿಸಿದರು.

ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಾಂಗ್ರೆಸ್ ಯಾವಾಗಲೂ ಹಿಂದೂಗಳು ಮತ್ತು ಹಿಂದುತ್ವದ ವಿರುದ್ಧ ಕೆಲಸ ಮಾಡುವುದು ದುರದೃಷ್ಟಕರ; ಇದಕ್ಕಾಗಿ ಅವರು ನಾಚಿಕೆಪಡಬೇಕು. ಹಿಂದುತ್ವವನ್ನು ಪ್ರಶ್ನಿಸುವ ನಾಯಕರನ್ನು ಜನರು ಕ್ಷಮಿಸುವುದಿಲ್ಲ, ಕಾಂಗ್ರೆಸ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಟೀಕೆಗಳನ್ನು ಎದುರಿಸುತ್ತಿರುವ ಸಿಂಘರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬುಡಕಟ್ಟು ಗುರುತನ್ನು ಹಿಂದೂ ಧರ್ಮದ ಅಡಿಯಲ್ಲಿ ಮುಳುಗಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. “ಬುಡಕಟ್ಟು ಜನರು ಈ ದೇಶದ ಮೂಲ ನಿವಾಸಿಗಳು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮನ್ನು ಪ್ರಕೃತಿಯನ್ನು ಪೂಜಿಸುವುದನ್ನು ತಡೆಯಲು ಏಕೆ ಬಯಸುತ್ತವೆ? ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ, ಆದರೆ ಬುಡಕಟ್ಟು ಜನಾಂಗದ ವಿಷಯಕ್ಕೆ ಬಂದಾಗ, ಅವರು ತಮ್ಮ ಕಾರ್ಯಸೂಚಿಯನ್ನು ಹೇರಲು ಬಯಸುತ್ತಾರೆ” ಎಂದು ಅವರು ಆರೋಪಿಸಿದರು.

ಬುಡಕಟ್ಟು ಸಬಲೀಕರಣಕ್ಕೆ ಆಡಳಿತ ಪಕ್ಷದ ಬದ್ಧತೆಯನ್ನು ಮತ್ತಷ್ಟು ಪ್ರಶ್ನಿಸಿದ ಅವರು, “ಯಾವುದೇ ಬುಡಕಟ್ಟು ಜನಾಂಗದವರನ್ನು ಆರ್‌ಎಸ್‌ಎಸ್ ಮುಖ್ಯಸ್ಥರನ್ನಾಗಿ ಏಕೆ ಮಾಡಿಲ್ಲ? ಬಿಜೆಪಿ ನಮ್ಮ ಮತಗಳನ್ನು ಬಯಸುತ್ತದೆ. ಆದರೆ ನಮ್ಮ ಧರ್ಮ, ಸಂಸ್ಕೃತಿ ಮತ್ತು ಗುರುತಿನ ವಿಷಯಕ್ಕೆ ಬಂದಾಗ, ಅವರು ಅದನ್ನು ಅಳಿಸಲು ಬಯಸುತ್ತಾರೆ” ಎಂದರು.

ಮಧ್ಯಪ್ರದೇಶ ರಾಜಕೀಯದಲ್ಲಿ ಪ್ರಭಾವಿ ಭಿಲ್ ನಾಯಕರಾದ ಸಿಂಗರ್, ಮಧ್ಯಪ್ರದೇಶದ ಒಟ್ಟು ಬುಡಕಟ್ಟು ಜನಸಂಖ್ಯೆಯ ಶೇಕಡಾ 39 ರಷ್ಟಿರುವ ಸಮುದಾಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತಾರೆ. 2011 ರ ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇಕಡಾ 21 ಕ್ಕಿಂತ ಹೆಚ್ಚು, ಅಂದರೆ 1.53 ಕೋಟಿ ಬುಡಕಟ್ಟು ಜನಾಂಗದವರೊಂದಿಗೆ, ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿದೆ.

ಅದರ 230 ವಿಧಾನಸಭಾ ಸ್ಥಾನಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ, ಇದು ಬುಡಕಟ್ಟು ಗುರುತಿನ ರಾಜಕೀಯವನ್ನು ಚುನಾವಣೆಗೆ ಮುನ್ನ ಪ್ರಮುಖ ಯುದ್ಧಭೂಮಿಯನ್ನಾಗಿ ಮಾಡುತ್ತದೆ.

ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...