Homeಮುಖಪುಟಗಣರಾಜ್ಯೋತ್ಸವ ದಿನ 'ದಲಿತ' ಎಂಬ ಕಾರಣಕ್ಕೆ ಸರಪಂಚ್‌ಗೆ ಧ್ವಜಾರೋಹಣಕ್ಕೆ ಅವಕಾಶ ನಿರಾಕರಣೆ

ಗಣರಾಜ್ಯೋತ್ಸವ ದಿನ ‘ದಲಿತ’ ಎಂಬ ಕಾರಣಕ್ಕೆ ಸರಪಂಚ್‌ಗೆ ಧ್ವಜಾರೋಹಣಕ್ಕೆ ಅವಕಾಶ ನಿರಾಕರಣೆ

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಸರಪಂಚ್‌ಗೆ ಜಾತಿಯ ಕಾರಣ ನೀಡಿ ಧ್ವಜಾರೋಹಣ ಮಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಂಚಾಯತ್ ಇಲಾಖೆ ನೌಕರನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

ಶುಕ್ರವಾರ ರಾಜ್‌ಗಢ್ ಜಿಲ್ಲೆಯ ಬಿಯೋರಾ ತಹಸಿಲ್ ವ್ಯಾಪ್ತಿಯ ತರೇನಾ ಗ್ರಾಮ ಪಂಚಾಯತ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸರಪಂಚ್ ದಲಿತ ಎಂಬ ಕಾರಣಕ್ಕಾಗಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅಕ್ಷಯ್ ತೆಮ್ರಾವಾಲ್ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಶನಿವಾರ ರಾತ್ರಿ ತರೇನಾ ಗ್ರಾಮ ಪಂಚಾಯಿತಿಯ ಸಿಬ್ಬಂದಿ ಲಖನ್ ಸಿಂಗ್ ಸೋಂಧಿಯಾ ಅವರು ಗಣರಾಜ್ಯೋತ್ಸವದಂದು ಗ್ರಾಮದ ಸರಪಂಚ್ ಬದಲಿಗೆ ಇನ್ನೊಬ್ಬ ವ್ಯಕ್ತಿಯಿಂದ ಧ್ವಜಾರೋಹಣ ಮಾಡಿಸಿದ್ದಾರೆ. ಇದು ಸರಪಂಚ್ ಅವರ ಹಕ್ಕುಗಳನ್ನು ಕಸಿದುಕೊಂಡಿರುವ ಘಟನೆಯಾಗಿದ್ದು, ಪಂಚಾಯತ್‌ನ ಸಿಬ್ಬಂದಿಯಾಗಿರುವ ಸೋಂಧಿಯಾ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಸರಪಂಚ್ ಮಾನ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನವರಿ 26ರಂದು ತಮ್ಮ ಗ್ರಾಮದಲ್ಲಿ ಗಣರಾಜ್ಯೋತ್ಸವದ ದಿನ ನಡೆದ ಕಾರ್ಯಕ್ರಮವೊಂದರಲ್ಲಿ ನನ್ನ ಬದಲಿಗೆ ಲಖನ್ ಸಿಂಗ್ ಅವರು ಇನ್ನೊಬ್ಬ ವ್ಯಕ್ತಿಯಿಂದ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ನಾನು ದಲಿತ ಆದ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದರು. ಇದಲ್ಲದೆ ಬೈಯೋರಾ ಜನಪದ ಪಂಚಾಯತ್ ಸಿಇಒ ಈಶ್ವರ್ ಅವರಿಗೆ ದೂರು ನೀಡಿದ್ದರು.

ಸರಪಂಚ್ ಬದಲಿಗೆ ಬೇರೆಯವರಿಂದ ಧ್ವಜಾರೋಹಣ ಮಾಡಿಸಿದ ನೌಕರನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆಗ್ರಹಿಸಿದ್ದಾರೆ. ಪಂಚಾಯತ್ ಭವನದಲ್ಲಿ ಧ್ವಜಾರೋಹಣ ಮಾಡುವ ಹಕ್ಕು ಸರಪಂಚ್‌ಗೆ ಇಲ್ಲವೇ? ಅಂತಹ ತಪ್ಪಿತಸ್ಥ ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ನಾನು ಮುಖ್ಯಮಂತ್ರಿಗಳನ್ನು ಕೋರುತ್ತೇನೆ ಎಂದು ದಿಗ್ವಿಜಯ್‌ ಸಿಂಗ್‌ ಅವರು ಹೇಳಿದ್ದಾರೆ.

ಇದನ್ನು ಓದಿ: ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What the hell going in india , why sc is not belong Indian how we are educated and how we are humans , such chip mentality idiots has to punish them and wt is meaning of republic such a culture there still in India because of bjp going hindus god’s back to civilization bjp has overcome god concept we are in 21 st century well developing technology pls mind it

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...