Homeಮುಖಪುಟಮಧ್ಯಪ್ರದೇಶ - ಪಕ್ಷದ ನಾಯಕಿಯ ಮೇಲೆಯೆ ಅತ್ಯಾಚಾರ; ಬಿಜೆಪಿ ನಾಯಕ ಅರೆಸ್ಟ್‌

ಮಧ್ಯಪ್ರದೇಶ – ಪಕ್ಷದ ನಾಯಕಿಯ ಮೇಲೆಯೆ ಅತ್ಯಾಚಾರ; ಬಿಜೆಪಿ ನಾಯಕ ಅರೆಸ್ಟ್‌

- Advertisement -
- Advertisement -

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸ್ಥಳೀಯ ರಾಜಕಾರಣಿಯೊಬ್ಬರ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಆಡಳಿತಾರೂಢ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಆಡಳಿತ ಪಕ್ಷದ ನಾಯಕ ತನ್ನಿಂದ ಹಣ ವಸೂಲಿ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಧ್ಯಪ್ರದೇಶ

ಆರೋಪಿಯನ್ನು ಪ್ರಭಾವಿ ರಾಜಕೀಯ ಮತ್ತು ಮಾಜಿ ರಾಜಮನೆತನದ ಕುಟುಂಬದ ಅಜಿತ್ ಪಾಲ್ ಸಿಂಗ್ ಚೌಹಾಣ್ ಎಂದು ಗುರುತಿಸಲಾಗಿದ್ದು, ಸುಮಾರು 50 ವರ್ಷ ವಯಸ್ಸಿನ ಅವರನ್ನು ಮಂಗಳವಾರ ಪಕ್ಕದ ರೇವಾ ಜಿಲ್ಲೆಯ ಸಿಧಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅತ್ಯಾಚಾರ, ಸುಲಿಗೆ, ಕ್ರಿಮಿನಲ್ ಬೆದರಿಕೆ ಮತ್ತು ಅಶ್ಲೀಲ ಕೃತ್ಯದ ಆರೋಪ ಹೊರಿಸಲಾದ ಕೆಲವೇ ಗಂಟೆಗಳ ನಂತರ ಈ ಬಂಧನ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಪೊಲೀಸರಿಗೆ ಸಲ್ಲಿಸಿದ ತಮ್ಮ ದೂರಿನಲ್ಲಿ, ಆರೋಪಿ ಬಿಜೆಪಿ ಮುಖಂಡ ಅಜಿತ್ ಪಾಲ್ 2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತ ಪಕ್ಷದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಜೊತೆಗೆ ಆರೋಪಿಯು ತನ್ನ ಮೇಲೆ ಅತ್ಯಾಚಾರ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದು, ಹಣ ವಸೂಲಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೂರಿನ ತನಿಖೆ ನಡೆಸಿದ ನಂತರ, ಸ್ಥಳೀಯ ಪೊಲೀಸರು ಸೋಮವಾರ ಚೌಹಾಣ್ ವಿರುದ್ಧ ಪ್ರಕರಣ ದಾಖಲಿಸಿ ಮಂಗಳವಾರ ಅವರನ್ನು ಬಂಧಿಸಿದ್ದಾರೆ.

ಈ ಮಧ್ಯೆ, ರಾಜ್ಯ ಬಿಜೆಪಿ ಮುಖ್ಯಸ್ಥ ವಿ.ಡಿ. ಶರ್ಮಾ ಅವರ ಸೂಚನೆಯ ಮೇರೆಗೆ, ಪಕ್ಷದ ಸಿಧಿ ಜಿಲ್ಲಾ ಘಟಕವು ಚೌಹಾಣ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ. ಚೌಹಾಣ್ ಸಿಧಿ ಜಿಲ್ಲೆಯ ಪ್ರಬಲ ರಾಜಕೀಯ ಮತ್ತು ಮಾಜಿ ರಾಜಮನೆತನದ ಕುಟುಂಬದ  ವ್ಯಕ್ತಿಯಾಗಿದ್ದು, ಅವರ ಕುಟುಂಬವು ದಶಕಗಳಿಂದ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿತ್ತು.

ಮೂರು ವರ್ಷಗಳ ಹಿಂದೆ ಬಿಜೆಪಿಗೆ ಸೇರಿದ್ದ ಅವರು, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶದ ಕೆಲವು ದೊಡ್ಡ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಪರಿಚಿತರು ಎಂದು TNIE ವರದಿ ಮಾಡಿದೆ. ಮಧ್ಯಪ್ರದೇಶ

ಇದನ್ನೂಓದಿ:  ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...