Homeಮುಖಪುಟಮಧ್ಯಪ್ರದೇಶ | ಪಿತಾಂಪುರ ಯೂನಿಯನ್ ಕಾರ್ಬೈಡ್ ತ್ಯಾಜ್ಯ ದಹನದ 2ನೇ ಹಂತದ ಪ್ರಯೋಗ ಆರಂಭ

ಮಧ್ಯಪ್ರದೇಶ | ಪಿತಾಂಪುರ ಯೂನಿಯನ್ ಕಾರ್ಬೈಡ್ ತ್ಯಾಜ್ಯ ದಹನದ 2ನೇ ಹಂತದ ಪ್ರಯೋಗ ಆರಂಭ

- Advertisement -
- Advertisement -

ಮಧ್ಯಪ್ರದೇಶದ ಪಿತಾಂಪುರ್‌ನಲ್ಲಿರುವ ವಿಲೇವಾರಿ ಘಟಕದಲ್ಲಿ ಯೂನಿಯನ್ ಕಾರ್ಬೈಡ್ ಕಾರ್ಖಾನೆಯ ತ್ಯಾಜ್ಯವನ್ನು ಸುಡುವ ಎರಡನೇ ಸುತ್ತಿನ ಪ್ರಯೋಗ ಆರಂಭವಾಗಿದ್ದು, ಈ ಹಂತದಲ್ಲಿ 10 ಟನ್ ತ್ಯಾಜ್ಯವನ್ನು ಸುಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಪ್ರದೇಶ

1984 ರ ಕೈಗಾರಿಕಾ ದುರಂತದ ಸ್ಥಳವಾದ ಭೋಪಾಲ್‌ನಲ್ಲಿರುವ ನಿಷ್ಕ್ರಿಯ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ 337 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡುವ ಯೋಜನೆಯ ಭಾಗವಾಗಿ, ಈ ಅಪಾಯಕಾರಿ ತ್ಯಾಜ್ಯವನ್ನು ಜನವರಿ 2 ರಂದು ರಾಜ್ಯ ರಾಜಧಾನಿಯಿಂದ ಸುಮಾರು 250 ಕಿ.ಮೀ ದೂರದಲ್ಲಿರುವ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯು ನಿರ್ವಹಿಸುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು. ಮಧ್ಯಪ್ರದೇಶ

ತ್ಯಾಜ್ಯ ವಿಲೇವಾರಿ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ಪ್ರಕಾರ, ಈ ತ್ಯಾಜ್ಯ ವಿಲೇವಾರಿಯನ್ನು ಮೂರು ಸುತ್ತುಗಳಲ್ಲಿ ಕಟ್ಟುನಿಟ್ಟಾಗಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಬೇಕು ಮತ್ತು ಮಾರ್ಚ್ 27 ರಂದು ಹೈಕೋರ್ಟ್ ಮುಂದೆ ವರದಿಯನ್ನು ಸಲ್ಲಿಸಬೇಕಿದೆ. ಮೊದಲ ಹಂತದ ತ್ಯಾಜ್ಯ ವಿಲೇವಾರಿ ಮಾರ್ಚ್ 3 ರಂದು ಮುಕ್ತಾಯಗೊಂಡಿತ್ತು.

“ಪಿತಾಂಪುರ್ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಯೂನಿಯನ್ ಕಾರ್ಬೈಡ್ ಕಾರ್ಖಾನೆ ತ್ಯಾಜ್ಯದ ಎರಡನೇ ಸುತ್ತಿನ ಪ್ರಾಯೋಗಿಕ ದಹನವು (ಬುಧವಾರ ತಡರಾತ್ರಿ) ಪ್ರಾರಂಭವಾಗಿದೆ” ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಶ್ರೀನಿವಾಸ್ ದ್ವಿವೇದಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ತ್ಯಾಜ್ಯವನ್ನು ದಹನಕಾರಕದಲ್ಲಿ ಸುರಿಯುವ ಮೊದಲು, ಅದನ್ನು ಸುಮಾರು 12 ಗಂಟೆಗಳ ಕಾಲ ಖಾಲಿಯಾಗಿ ಚಲಾಯಿಸಲಾಗುತ್ತದೆ ಮತ್ತು ಪೂರ್ವನಿರ್ಧರಿತ ತಾಪಮಾನಕ್ಕೆ ತರಲಾಗುತ್ತದೆ” ಎಂದು ಅಧಿಕಾರಿ ಬುಧವಾರ ವಿವರಿಸಿದ್ದಾರೆ. ಎರಡನೇ ಸುತ್ತಿನ ಪ್ರಯೋಗದ ಸಮಯದಲ್ಲಿ, ಪ್ರತಿ ಗಂಟೆಗೆ 180 ಕೆಜಿ ತ್ಯಾಜ್ಯವನ್ನು ದಹನಕಾರಕದಲ್ಲಿ ಸುರಿಯಲಾಗುತ್ತದೆ. ಎರಡನೇ ಹಂತದಲ್ಲಿ ಒಟ್ಟು 10 ಟನ್ ತ್ಯಾಜ್ಯವನ್ನು ಸುಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಯೂನಿಯನ್ ಕಾರ್ಬೈಡ್ ಕಾರ್ಖಾನೆ ತ್ಯಾಜ್ಯದ ಮೊದಲ ಸುತ್ತಿನ ದಹನವು ಫೆಬ್ರವರಿ 28 ರಂದು ವಿಲೇವಾರಿ ಸ್ಥಳದಲ್ಲಿ ಪ್ರಾರಂಭವಾಯಿತು ಮತ್ತು ಮಾರ್ಚ್ 3 ರಂದು ಕೊನೆಗೊಂಡಿತು ಎಂದು ದ್ವಿವೇದಿ ಹೇಳಿದರು. ಮೊದಲ ಸುತ್ತಿನ ಪ್ರಯೋಗವು ಸುಮಾರು 75 ಗಂಟೆಗಳ ಕಾಲ ನಡೆಯಿತು ಮತ್ತು ಈ ಸಮಯದಲ್ಲಿ ಪ್ರತಿ ಗಂಟೆಗೆ 135 ಕೆಜಿ ತ್ಯಾಜ್ಯವನ್ನು ಸ್ಥಾವರದ ದಹನಕಾರಕದಲ್ಲಿ ಸುರಿಯಲಾಯಿತು ಎಂದು ಅವರು ತಿಳಿಸಿದ್ದಾರೆ.

ತ್ಯಾಜ್ಯ ವಿಲೇವಾರಿಯ ಮೊದಲ ಸುತ್ತಿನಲ್ಲಿ, ಕಣಕಣಗಳು (PM), ಸಲ್ಫರ್ ಡೈಆಕ್ಸೈಡ್, ನೈಟ್ರೋಜನ್ ಆಕ್ಸೈಡ್, ಕಾರ್ಬನ್ ಮಾನಾಕ್ಸೈಡ್, ಹೈಡ್ರೋಜನ್ ಕ್ಲೋರೈಡ್, ಹೈಡ್ರೋಜನ್ ಫ್ಲೋರೈಡ್ ಮತ್ತು ವಿಲೇವಾರಿ ಸ್ಥಾವರದಿಂದ ಒಟ್ಟು ಸಾವಯವ ಇಂಗಾಲದ ಹೊರಸೂಸುವಿಕೆಯು ಪ್ರಮಾಣಿತ ಮಿತಿಗಳಲ್ಲಿದೆ ಎಂದು ಕಂಡುಬಂದಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

“ಯೂನಿಯನ್ ಕಾರ್ಬೈಡ್ ಕಾರ್ಖಾನೆಯ ತ್ಯಾಜ್ಯವು ನಿಷ್ಕ್ರಿಯ ಘಟಕದ ಆವರಣದ ಮಣ್ಣು, ರಿಯಾಕ್ಟರ್ ಅವಶೇಷ, ಸೆವಿನ್ (ಕೀಟನಾಶಕ) ಅವಶೇಷ ಮತ್ತು ನಾಫ್ಥಲೀನ್ ಅನ್ನು ಒಳಗೊಂಡಿತ್ತು. ಇವುಗಳಲ್ಲಿ ತ್ಯಾಜ್ಯ ಮತ್ತು ಅರೆ-ಸಂಸ್ಕರಿಸಿದ ತ್ಯಾಜ್ಯ ಸೇರಿವೆ.” ಎಂದು ರಾಜ್ಯ ಸರ್ಕಾರ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ| ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಎರಡು ತಿಂಗಳು ಅಕ್ರಮ ಬಂಧನ

ಉತ್ತರ ಪ್ರದೇಶ| ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಎರಡು ತಿಂಗಳು ಅಕ್ರಮ ಬಂಧನ

ಇದನ್ನೂಓದಿ:  ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಇದನ್ನೂಓದಿ:  ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ಇದನ್ನೂಓದಿ:  ಹೊಸ ಆದಾಯ ತೆರಿಗೆ ಮಸೂದೆ; ಜನರ ಇಮೇಲ್, ಸಾಮಾಜಿಕ ಮಾಧ್ಯಮಗಳ ಪ್ರವೇಶಕ್ಕೆ ಅಧಿಕಾರಿಗಳಿಗೆ ಮುಕ್ತ ಅವಕಾಶ?

ಹೊಸ ಆದಾಯ ತೆರಿಗೆ ಮಸೂದೆ; ಜನರ ಇಮೇಲ್, ಸಾಮಾಜಿಕ ಮಾಧ್ಯಮಗಳ ಪ್ರವೇಶಕ್ಕೆ ಅಧಿಕಾರಿಗಳಿಗೆ ಮುಕ್ತ ಅವಕಾಶ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...