Homeಮುಖಪುಟಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

ಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ 11 ವ್ಯಕ್ತಿಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿದ್ದ ಮೆನಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಪೊಲೀಸ್ ತಂಡ ಅಲ್ಲಿಗೆ ಧಾವಿಸಿತು, ಆರೋಪಿಗಳ ಹಿತ್ತಲಿನಲ್ಲಿ ಕಟ್ಟಿಹಾಕಲಾಗಿದ್ದ 150 ಹಸುಗಳನ್ನು ನಾವು ವಶಪಡಿಸಕೊಂಡಿದ್ದೇವೆ. ಎಲ್ಲ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಕೊಠಡಿಯಲ್ಲಿ ಪ್ರಾಣಿಗಳ ಕೊಬ್ಬು, ಜಾನುವಾರು ಚರ್ಮ ಮತ್ತು ಮೂಳೆಗಳನ್ನು ಕೂಡ ಪತ್ತೆ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸರ್ಕಾರಿ ಪಶುವೈದ್ಯರು ವಶಪಡಿಸಿಕೊಂಡ ಮಾಂಸವು ದನದ ಮಾಂಸ ಎಂದು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಹೈದರಾಬಾದ್‌ಗೆ ಮಾದರಿಗಳನ್ನು ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿರುವುದರಿಂದ ಅವುಗಳನ್ನು ನೆಲಸಮ ಮಾಡಲಾಗಿದೆ ಎಂದು ಎಸ್‌ಪಿ ಹೇಳಿದರು.

ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು. ಉಳಿದ 10 ಮಂದಿಗಾಗಿ ಹುಡುಕಾಟ ನಡೆಸುತ್ತಿರುವಾಗ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇಬ್ಬರು ಆರೋಪಿಗಳ ಕ್ರಿಮಿನಲ್ ಇತಿಹಾಸವನ್ನು ಸಂಗ್ರಹಿಸಲಾಗಿದ್ದು, ಉಳಿದ ವ್ಯಕ್ತಿಗಳ ಪೂರ್ವಾಪರಗಳನ್ನು ಕಂಡುಹಿಡಿಯಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳೆಲ್ಲರೂ ಮುಸ್ಲಿಮರು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ವರ್ತನೆಗೆ ಪ್ರಶಾಂತ್ ಭೂಷಣ್ ವಿರೋಧ:

ಗೋಮಾಂಸ ಪತ್ತೆಯಾಯಿತು ಎಂಬ ಕಾರಣಕ್ಕೆ ಮನೆಗಳನ್ನು ಧ್ವಂಸ ಮಾಡಿರುವ ಪ್ರಕರಣಕ್ಕೆ ಆಕ್ರೋಶ ಹೊರಹಾಕಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಇದು ಫಾರೆಸ್ಟ್‌ ಫ್ಯಾಸಿಸ್ಟ್ ಆಳ್ವಿಕೆ! ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ; ‘ಇಂಡಿಯಾ ಬ್ಲಾಕ್‌’ನ ಐತಿಹಾಸಿಕ ಗೆಲುವು ಬಿಜೆಪಿಯನ್ನು 240 ಸ್ಥಾನಗಳಿಗೆ ಸೀಮಿತಗೊಳಿಸಿದೆ: ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...