Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...