Homeಮುಖಪುಟಇಬ್ಬರು ಯುವಕರನ್ನು ಕಟ್ಟಿ ಹಾಕಿ ಥಳಿಸಿದ ಪೊಲೀಸ್‌ ಪೇದೆ: ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ

ಇಬ್ಬರು ಯುವಕರನ್ನು ಕಟ್ಟಿ ಹಾಕಿ ಥಳಿಸಿದ ಪೊಲೀಸ್‌ ಪೇದೆ: ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ

- Advertisement -
- Advertisement -

ಉತ್ತರಪ್ರದೇಶ, ಮಧ್ಯಪ್ರದೇಶ ಸೇರಿ ಬಿಜೆಪಿ ಆಡಳಿತದ ಕೆಲ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪದೇ ಪದೇ ವರದಿಯಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ ನಡೆದಿದೆ. ಪೊಲೀಸ್‌ ಪೇದೆಯೋರ್ವ ಸಾರ್ವಜನಿಕವಾಗಿ ಇಬ್ಬರು ಯುವಕರನ್ನು ಥಳಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹಗ್ಗದಿಂದ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದೆ. ಕಳೆದ ವಾರ ಮೊಹ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಡೆಸ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವೈರಲ್‌ ವಿಡಿಯೋದಲ್ಲಿ ಅಂಗಡಿಗಳ ಮುಂಭಾಗದಲ್ಲಿ ಇಬ್ಬರು ಯುವಕರನ್ನು ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರು ಥಳಿಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಸ್ಥಳದಲ್ಲಿ ನಿಂತಿಕೊಂಡು ನೋಡುತ್ತಿದ್ದ ಸ್ಥಳೀಯರು ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ವೈರಲ್‌ ಮಾಡಿದ್ದಾರೆ. ಅಪ್ರಾಪ್ತ ವಯಸ್ಕರು ಸೇರಿದಂತೆ ಹಲವರು ಘಟನೆ ನಡೆದಾಗ ಸ್ಥಳದಲ್ಲಿದ್ದರು. ವ್ಯಕ್ತಿಯೊಬ್ಬರು ಇಬ್ಬರನ್ನು ಕಟ್ಟಲು ಬಳಸಿದ ಹಗ್ಗವನ್ನು ಹಿಡಿದುಕೊಂಡಿರುವುದು ಕೂಡ ವಿಡಿಯೋದಲ್ಲಿ ಕಂಡುಬಂದಿದೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಮಲಾ ಜೋಶಿ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಮೊಬೈಲ್ ಫೋನ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್ ಕಾನ್‌ಸ್ಟೆಬಲ್ ಕಮತಾ ಪ್ರಸಾದ್ ಕೀರ್ ಇಬ್ಬರನ್ನು ಥಳಿಸಿದ ವಿಡಿಯೋ ಗಮನಕ್ಕೆ ಬಂದಿದೆ. ವೀಡಿಯೋವನ್ನು ಆಧರಿಸಿ, ಬೇತುಲ್ ಪೊಲೀಸ್ ಅಧೀಕ್ಷಕರು ದಾಮ್‌ಜಿಪುರ ಪೊಲೀಸ್ ಪೋಸ್ಟ್‌ನಲ್ಲಿ ನಿಯೋಜಿಸಲಾದ ಹೆಡ್‌ ಕಾನ್ಸ್ಟೇಬಲ್‌ ಕಮತಾ ಪ್ರಸಾದ್ ಕೀರ್ ಅವರನ್ನು ಅಮಾನತುಗೊಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಮೋದಿ ಕಾ ಪರಿವಾರ್’ ಅಭಿಯಾನಕ್ಕೆ ಕಾಂಗ್ರೆಸ್‌ ತಿರುಗೇಟು; ‘ಅವರ ಸ್ವಂತ ಕುಟುಂಬಕ್ಕೆ ಅನ್ಯಾಯ ಕಾಲ’ ಎಂದ ಜೈರಾಮ್ ರಮೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...