Homeಮುಖಪುಟಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

38 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಉಮಂಗ್ ಸಿಂಘಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

“ಶಾಸಕನ ಪತ್ನಿಯಂತೆ ನಾನು ಜೀವನ ನಡೆಸುತ್ತಿದ್ದೇನೆ” ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಧಾರ್ ನಗರದ ನೌಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ಪ್ರಕರಣ ದಾಖಲಾಗಿದೆ ಎಂದು ಧಾರ್‌ನ ಪೊಲೀಸ್ ವರಿಷ್ಠಾಧಿಕಾರಿ  (ಎಸ್‌ಪಿ) ಆದಿತ್ಯ ಪ್ರತಾಪ್ ಸಿಂಗ್‌ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಂಧವಾನಿ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿಯೂ ಆಗಿರುವ ಉಮಂಗ್ ಸಿಂಘಾರ್ ಆರೋಪಿಯಾಗಿದ್ದಾರೆ. ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ.ಮಿಶ್ರಾ ಅವರು ಪಿಟಿಐಗೆ ಪ್ರತಿಕ್ರಿಯಿಸಿ, “ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಆದರೆ ಮೇಲ್ನೋಟಕ್ಕೆ ಇದು ‘ರಾಜಕೀಯ ಪ್ರೇರಿತ’ ಪ್ರಕರಣವಾಗಿ ತೋರುತ್ತದೆ” ಎಂದಿದ್ದಾರೆ.

ಸಿಂಘಾರ್‌ರವರು ದೈಹಿಕ ಚಿತ್ರಹಿಂಸೆ, ಅತ್ಯಾಚಾರ, ನಿಂದನೆ, ಅಸ್ವಾಭಾವಿಕ ಕೃತ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಸಿಂಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 294 (ಅಶ್ಲೀಲ ಕಾಯ್ದೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 376 (2) (ಅತ್ಯಾಚಾರ), 377 (ಅಸ್ವಾಭಾವಿಕ ಅಪರಾಧಗಳು), 498 (ಎ) (ಮಹಿಳೆಯ ಮೇಲೆ ಕಿರುಕುಳ), 506 (ಅಪರಾಧ ಬೆದರಿಕೆ)  ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತಿದೆ ಎಂದು ಎಸ್‌ಪಿ ವಿವರಿಸಿದ್ದಾರೆ.

ಇದರ ನಡುವೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ವಿಡಿಯೋ ಹೇಳಿಕೆ ನೀಡಿದ್ದು, “ಸಿಂಘಾರ್ ವಿರುದ್ಧ ಅವರ ಪತ್ನಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಸಿಂಘಾರ್‌ ಅವರಿಗೆ ಇತರ ಪತ್ನಿಯರೂ ಇದ್ದಾರೆ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಪಹರಣ ಆರೋಪಕ್ಕೆ ಪುರಾವೆಯಿಲ್ಲ, ರಾಜಕೀಯದ ಷಡ್ಯಂತ್ರದಿಂದ ಬಂಧನ: ಹೆಚ್.ಡಿ ರೇವಣ್ಣ

0
ಲೈಂಗಿಕ ದೌರ್ಜನ್ಯದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧಿತರಾದ ಬಳಿಕ ಮೊದಲ ಬಾರಿಗೆ ಶಾಸಕ ಹೆಚ್‌.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...