Homeಮುಖಪುಟಮಧ್ಯಪ್ರದೇಶ: ಬಾಲಕಿಯನ್ನು ಅತ್ಯಾಚಾರವೆಸಗಿ ಉಸಿರುಕಟ್ಟಿಸಿ ಕೊಲೆ

ಮಧ್ಯಪ್ರದೇಶ: ಬಾಲಕಿಯನ್ನು ಅತ್ಯಾಚಾರವೆಸಗಿ ಉಸಿರುಕಟ್ಟಿಸಿ ಕೊಲೆ

- Advertisement -
- Advertisement -

ದೇಶಾದ್ಯಂತ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದು ಮಾತ್ರವಲ್ಲದೆ, ಅವರ ಮೇಲೆ ಅಮಾನವೀಯ ಕ್ರೌರ್ಯ, ಹಿಂಸೆ, ಕೊಲೆಗಳಂತಹ ಪ್ರಕರಣಗಳೂ ಹೆಚ್ಚಾಗಿದೆ. ಮಧ್ಯಪ್ರದೇಶದಲ್ಲಿ ಅಂತಹದ್ದೆ ಎರಡು ಪ್ರಕರಣಗಳು ಇಂದು ಬೆಳಕಿಗೆ ಬಂದಿವೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಮತ್ತು ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಅದರಲ್ಲಿ ಬಾಲಕಿಯನ್ನು ಪ್ರಕರಣ ಮುಚ್ಚಿಹಾಕಲು ಕೊಲೆ ಮಾಡಿರುವ ಘಟನೆ ನಡೆದಿವೆ.

ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಅತ್ಯಾಚಾರ ಎಸಗಿ ಮಹಿಳೆಯ ಖಾಸಗಿ ಅಂಗಗಳ ಮೇಲೆ ಕಬ್ಬಿಣದ ರಾಡ್‌ನಿಂದ ಚಿತ್ರಹಿಂಸೆ ನೀಡಿದ್ದಾರೆ; ಮತ್ತೊಂದು ಪ್ರಕರಣದಲ್ಲಿ ಖಂಡ್ವಾ ಜಿಲ್ಲೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬ ಬಾಲಕಿಯೊಬ್ಬರ ಮೇಲೆ ಅತ್ಯಾಚಾರ ಮಾಡಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ಸಿದ್ಧಿ ಜಿಲ್ಲೆಯಲ್ಲಿ ಚಹಾ ಅಂಗಡಿ ನಡೆಸುತ್ತಿದ್ದ 45 ವರ್ಷದ ಮಹಿಳೆ ತನ್ನ ಗುಡಿಸಲಲ್ಲಿ ಮಲಗಿದ್ದಾಗ, ಆರೋಪಿಗಳು ಬಂದು ಬಾಗಿಲು ಬಡಿದು ನೀರು ಕೇಳಿದ್ದಾರೆ. ಯಾರೂ ಇಲ್ಲ ಎಂದು ಮಹಿಳೆ ಹೇಳಿದಾಗ ಗುಡಿಸಲಿಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಕಬ್ಬಿಣದ ರಾಡ್‌ನಿಂದ ಚಿತ್ರಹಿಂಸೆ ನೀಡಿದ್ದಾರೆ. ಮಹಿಳೆಯ ಪತಿ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಮಹಿಳೆಯನ್ನು ರೇವಾ ಸಂಜಯ್ ‌ಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಮಿಲಿಯಾ ಪೊಲೀಸ್ ಠಾಣೆಯ ಐಜಿಪಿ ಉಮೇಶ್ ಜೋಹಾ ಮಾಹಿತಿ ನೀಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಖಂಡ್ವಾ ಜಿಲ್ಲೆಯ ಜಮಾನಿಯಾ ಗ್ರಾಮದಲ್ಲಿ ಕಿರಾಣಿ ಅಂಗಡಿಯಿಂದ ಬಿಸ್ಕೆಟ್ ಖರೀದಿಸಲು ಹೋಗಿದ್ದ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಂಗಡಿ ಮಾಲಿಕ ಮನೆಯೊಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದರ ನಂತರ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಬಾಲಕಿಯನ್ನು ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದವನನ್ನು ಕೊಂದು ಹಾಕಿದ 19 ವರ್ಷದ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...