Homeಮುಖಪುಟಮಧ್ಯಪ್ರದೇಶ: ಪ್ರೇಮ ನಿವೇದನೆ ನಿರಾಕರಣೆ; ದಲಿತ ಯುವತಿಯ ಕತ್ತು ಸೀಳಿದ ದುಷ್ಕರ್ಮಿ

ಮಧ್ಯಪ್ರದೇಶ: ಪ್ರೇಮ ನಿವೇದನೆ ನಿರಾಕರಣೆ; ದಲಿತ ಯುವತಿಯ ಕತ್ತು ಸೀಳಿದ ದುಷ್ಕರ್ಮಿ

- Advertisement -
- Advertisement -

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ದಲಿತ ಯುವತಿಯು ತನ್ನ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕೆ ಕೋಪಗೊಂಡ ದುಷ್ಕರ್ಮಿಯೊಬ್ಬ ಯುವತಿಯ ಕತ್ತು ಸೀಳಿದ ಘಟನೆ ನಡೆದಿದೆ. ಸಂತ್ರಸ್ತೆಯು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮುಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗಾರದ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೋಪಿಯನ್ನು ಬಬ್ಲು (23) ಎಂದು ಗುರುತಿಸಲಾಗಿದೆ. ಸಂತ್ರಸ್ತ ಯುವತಿ ದಲಿತ ಸಮುದಾಯಕ್ಕೆ ಸೇರಿದವರು. ಯುವತಿಯ ಕುಟುಂಬಸ್ಥರು ಸಮೀಪದ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದರು. ಈ ವೇಳೆ ಯುವತಿ ಮನೆಯಲ್ಲಿ ಒಂಟಿಯಾಗಿದ್ದರು. ಇದೇ ಸಮಯದಲ್ಲಿ ಆರೋಪಿ ಮನೆಗೆ ಪ್ರವೇಶಿಸಿ ತನ್ನ ಪ್ರೇಮ ನಿವೇದನೆ ಮಾಡಿದ್ದನು. ಇದನ್ನು ಯುವತಿ ತಿರಸ್ಕರಿಸಿದಾಗ ಸಂತ್ರಸ್ತೆಯ ಕತ್ತು ಸೀಳಿದ್ದಾನೆ” ಎಂದು ಮುಂಡಿ ಪೊಲೀಸ್ ಠಾಣೆಯ ಉಸ್ತುವಾರಿ ಬ್ರಿಜ್ಭೂಷಣ್ ಹಿರ್ವೆ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಬಬ್ಲು ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ. ಆರೋಪಿಯ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನ ನಡೆದಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಆರೋಪಿ ಬಬ್ಲು ಸಂತ್ರಸ್ತ ಯುವತಿಯನ್ನು ಪ್ರೀತಿಸುತ್ತಿದ್ದು, ಮದುವೆಯಾಗಲು ಬಯಸಿರುವುದಾಗಿ ಹೇಳಿರುವುದಾಗಿ ಸಂತ್ರಸ್ತೆಯ ಸಹೋದರಿ ಹೇಳಿಕೆ ನೀಡಿದ್ದಾರೆ. ಆಕೆ ನಿರಾಕರಿಸಿದಾಗ ಆರೋಪಿ ಆಕೆಯ ಕತ್ತು ಕೊಯ್ದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ: ನೆಮ್ಮದಿಯ ಬದುಕಿಗಾಗಿ ಇನ್ನೂ ಹೆಣಗಾಡುತ್ತಿರುವ ಜನರು

0
ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭಗೊಂಡು ಇಂದಿಗೆ (ಮೇ 3, 2024) ಒಂದು ವರ್ಷ ಪೂರ್ಣಗೊಂಡಿದೆ. ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯದ ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ....