Homeಮುಖಪುಟಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು - ವರದಿ

ಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು – ವರದಿ

ಬುಡಕಟ್ಟು ಜನರ ಮೇಲಿನ ಅತಿ ಹೆಚ್ಚಿನ ದೌರ್ಜನ್ಯಗಳು ಮಧ್ಯಪ್ರದೇಶದಲ್ಲಿ ವರದಿಯಾಗಿವೆ. ಇಂತಹ ಸಮಯದಲ್ಲಿ ಆ ಜನರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಒಂದು ವಾರಗಳ ಕಾರ್ಯಕ್ರಮ ಆಯೋಜಿಸಿದೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ನವೆಂಬರ್ 15ರಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ರೂ. ಭರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭೊಪಾಲ್‌ನಲ್ಲಿ ಜಂಜಾತಿಯ ಗೌರವ್ ದಿವಸ್‌ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೋಪಾಲ್‌ಗೆ ಆಗಮಿಸಲಿದ್ದಾರೆ. ಅವರು ಭೋಪಾಲ್‌ನಲ್ಲಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ವೇದಿಕೆಯಲ್ಲಿ 1 ಗಂಟೆ 15 ನಿಮಿಷಗಳ ಕಾಲ ಇರುತ್ತಾರೆ. ಮೋದಿ ಭಾಗವಹಿಸುವ ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರವು 23 ಕೋಟಿ ರೂ. ಖರ್ಚು ಮಾಡುತ್ತಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಬಿರ್ಸಾ ಮುಂಡಾ ಅವರ ಸ್ಮರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಮತ್ತು ದೇಶದ ಮೊದಲ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಜಂಜಾತಿಯ ಗೌರವ್ ದಿವಸ್‌ನ ಅಂಗವಾಗಿ, ಬಿರ್ಸಾ ಮುಂಡಾ ಮತ್ತು ಇತರ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಸ್ಮರಿಸಲು ನವೆಂಬರ್ 15 ರಿಂದ 22 ರವರೆಗೆ ರಾ‍ಷ್ಟ್ರಮಟ್ಟದಲ್ಲಿ ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಎರಡು ಲಕ್ಷ ಬುಡಕಟ್ಟು ಜನರನ್ನು ಭಾಗಿಯಾಗುವ ನೀರಿಕ್ಷೆ ಇದೆ. ಮತ್ತು ಇಡೀ ಮೈದಾನವನ್ನು ಬುಡಕಟ್ಟು ಕಲೆ ಮತ್ತು ಬುಡಕಟ್ಟು ದಂತಕಥೆಗಳ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದು ವಾರದಿಂದ 300ಕ್ಕೂ ಹೆಚ್ಚು ಕಾರ್ಮಿಕರು ಈ ಕೆಲಸದಲ್ಲಿ ತೊಡಗಿದ್ದಾರೆ. ಗಿರಿಜನರಿಗಾಗಿ ದೊಡ್ಡ ದೊಡ್ಡ ಪಂಗಡಗಳನ್ನೂ ನಿರ್ಮಿಸಲಾಗಿದೆ.

52 ಜಿಲ್ಲೆಗಳಿಂದ ಬರುವ ಜನರಿಗೆ ಸಾರಿಗೆ, ಆಹಾರ ಮತ್ತು ವಸತಿಗಾಗಿ 12 ಕೋಟಿ ರೂ. ಭರಿಸಲಾಗುತ್ತಿದೆ. ಐದು ಗುಮ್ಮಟಗಳು, ಟೆಂಟ್‌ಗಳು, ಅಲಂಕಾರ ಮತ್ತು ಪ್ರಚಾರಕ್ಕಾಗಿ 9 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದ್ದು, ಇತರೆ ಖರ್ಚುಗಳು 2 ಕೋಟಿಯೆಂದು ಅಂದಾಜಿಸಲಾಗಿದೆ.

ಚುನಾವಣಾ ಲೆಕ್ಕಾಚಾರ?

ಮಧ್ಯಪ್ರದೇಶವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ರಾಜ್ಯದ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ 47 ಸ್ಥಾನಗಳನ್ನು ಮೀಸಲಿಡಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಬುಡಕಟ್ಟು ಜನರು ಹೆಚ್ಚಾಗಿ ಬಿಜೆಪಿಗೆ ಮತ ಹಾಕುತ್ತಾ ಬಂದಿರುವುದನ್ನು ನಾವು ಕಾಣಬಹುದು. 2008ರಲ್ಲಿ ಬಿಜೆಪಿ 29 ಸ್ಥಾನಗಳನ್ನು ಗೆದ್ದರೆ, 2013 ರಲ್ಲಿ ಈ ಸಂಖ್ಯೆ 31ಕ್ಕೆ ಏರಿತು.

ಆದರೆ 2018 ರಲ್ಲಿ ಬುಡಕಟ್ಟು ಜನರು ಬಿಜೆಪಿಯಿಂದ ಹಿಂದೆ ಸರಿದಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಕೇವಲ 16 ಸ್ಥಾನಗಳನ್ನು ಮಾತ್ರ ಗೆದ್ದಿತು. ಅಲ್ಲದೆ ರಾಜ್ಯದಲ್ಲಿ ಅಧಿಕಾರ ಸಹ ಕಳೆದುಕೊಂಡಿತ್ತು. ಸರಳ ಬಹುಮತ ಪಡೆದ ಕಾಂಗ್ರೆಸ್ ಅಧಿಕ್ಕಾರಕ್ಕೇರಿತ್ತು. ನಂತರ ನಡೆದ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನ 20 ಕ್ಕೂ ಹೆಚ್ಚು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜೀನಾಮೆ ನೀಡಿದವರೆಲ್ಲರೂ ಬಿಜೆಪಿಯಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಸರ್ಕಾರದ ಮಂತ್ರಿಮಂಡಲ ಸೇರಿದ್ದಾರೆ.

2023ರಲ್ಲಿ ಮತ್ತೆ ಅಸೆಂಬ್ಲಿ ಚುನಾವಣೆ ಬರುತ್ತಿದೆ. ಹಾಗಾಗಿ ಬುಡಕಟ್ಟು ಜನರನ್ನು ಒಲಿಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಹಾಗಾಗಿ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಹೆಸರಿನಲ್ಲಿ ಭರ್ಜರಿ ಕಾರ್ಯಕ್ರಮಕ್ಕೆ ಮುಂದಾಗಿದೆ. ಒಂದು ವಾರಗಳ ಕಾಲ ಆಚರಿಸಲು ನಿರ್ಧರಿಸಿದೆ. ಇದು ಬಿಜೆಪಿಗೆ ಮತಗಳನ್ನಾಗಿ ಪರಿವರ್ತನೆ ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್‌ಸಿಆರ್‌ಬಿ) ಮಾಹಿತಿಯ ಪ್ರಕಾರ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯಪ್ರದೇಶವು ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. 2020ರಲ್ಲಿ ರಾಜ್ಯದಲ್ಲಿ 2,401 ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ ಈ ಸಂಖ್ಯೆ 1,922 ಇತ್ತು. 2018 ರಲ್ಲಿ ಇದು 1,868 ಆಗಿತ್ತು. ಎರಡು ವರ್ಷಗಳ ಅವಧಿಯಲ್ಲಿ, ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ರಾಜ್ಯವು ಶೇ.28 ರಷ್ಟು ಏರಿಕೆಯನ್ನು ಕಂಡಿದೆ.

ರೈಲು ನಿಲ್ದಾಣ ಹೆಸರು ಬದಲಾವಣೆ?

ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಅಡಿಯಲ್ಲಿ ನಿರ್ಮಿಸಲಾಗಿದೆ. ಈ ನಿಲ್ದಾಣವು ಜರ್ಮನಿಯ ಹೈಡೆಲ್ಬರ್ಗ್ ರೈಲು ನಿಲ್ದಾಣದಂತೆಯೇ ಇದೆ ಎಂದು ಹೇಳಲಾಗಿದೆ. ಈ ರೈಲು ನಿಲ್ದಾಣವು ವಿಶ್ವ ಪರಂಪರೆಯ ತಾಣಗಳಾದ ಸಾಂಚಿ ಸ್ತೂಪ, ಭೋಜ್‌ಪುರ ದೇವಸ್ಥಾನ, ಭೀಮೇಟ್ಕಾ, ಬಿರ್ಲಾ ಮಂಡಿ, ತವಾ ಅಣೆಕಟ್ಟು ಮತ್ತು ಬುಡಕಟ್ಟು ವಸ್ತುಸಂಗ್ರಹಾಲಯಗಳ ನೋಟವನ್ನು ಸಹ ಒದಗಿಸುತ್ತದೆ.

ಈ ರೈಲು ನಿಲ್ದಾಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಬೇಕು ಎಂದು ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ಒತ್ತಾಯಿಸಿದ್ದಾರೆ. ಆದರೂ, ರಾಜ್ಯ ಸರ್ಕಾರವು ಗೋಂಡಾದ ರಾಣಿ ಕಮಲಾಪತಿ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...