Homeಮುಖಪುಟಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ ಎಂದ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ!

- Advertisement -
- Advertisement -

ಛತ್ತೀಸ್‌ಘಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೆ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮೃತಪಟ್ಟ ಸಂಬಂಧಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತು ನಡೆದ ಘಟನೆ ಜರುಗಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಕ್ಕಿಲ್ಲ. ಹಾಗಾಗಿ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟಿಸಿದೆ.

“ಜ್ವರದಿಂದ ಬಳಲುತ್ತಿದ್ದ ನಮ್ಮ ಸಂಬಂಧಿ ರಾಯ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟರು. ಆಸ್ಪತ್ರೆಯವರು ಶವ ಸಾಗಿಸಲು ಯಾವುದೇ ವ್ಯವಸ್ಥೆ ಮಾಡಲಿಲ್ಲ. ಹಾಗಾಗಿ ನಾವು ಮಂಚದಲ್ಲಿಯೇ ಹೊತ್ತುಕೊಂಡು ಮನೆಗೆ ಹೋಗುತ್ತಿದ್ದೇವೆ” ಎಂದು ಮಹಿಳೆಯೊಬ್ಬರು ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಮಗೆ ಆಸ್ಪತ್ರೆಯಾಗಲಿ, ಆಡಳಿತವಾಗಲಿ ಯಾವುದೇ ಸಹಾಯ ಮಾಡಲಿಲ್ಲ. ಹಾಗಾಗಿ ನಾವು ಬಂದ ದಾರಿಯಲ್ಲಿಯೇ ಮಂಚದಲ್ಲಿಯೇ ಶವ ಹೊತ್ತು ಹೋಗುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳನ್ನು ಕರೆದೊಯ್ಯಲು ವಾಹನಗಳ ಕೊರತೆಯಿಂದ ಈ ಹಿಂದೆಯೂ ಈ ರೀತಿಯ ತೊಂದರೆ ಉಂಟಾಗಿದೆ ಎಂದು ಕೆಲ ಸಿಬ್ಬಂದಿಗಳು ಹೇಳಿದ್ದಾರೆ. ಇದು ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರು ಕೇಳಿಬಂದಿದೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...