Homeದಲಿತ್ ಫೈಲ್ಸ್ಮಧ್ಯಪ್ರದೇಶ| ದಲಿತ ವ್ಯಕ್ತಿಯಿಂದ 'ಪ್ರಸಾದ' ಸ್ವೀಕರಿಸಿದ 20 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶ| ದಲಿತ ವ್ಯಕ್ತಿಯಿಂದ ‘ಪ್ರಸಾದ’ ಸ್ವೀಕರಿಸಿದ 20 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ದಲಿತ ವ್ಯಕ್ತಿಯೊಬ್ಬರ ಕೈಯಿಂದ ‘ಪ್ರಸಾದ’ ಸೇವಿಸಿದ್ದಕ್ಕಾಗಿ ಸುಮಾರು 20 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕರ ವಿಧಿಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಹಿಷ್ಕಾರ ಆದೇಶ ನೀಡಿದ್ದು ಸರಪಂಚರೇ ಎಂದು ಆರೋಪಿಸಿ ಕುಟುಂಬಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಮ್ ಜೈನ್ ಅವರನ್ನು ಸಂಪರ್ಕಿಸಿದ್ದಾರೆ. ಎರಡೂ ಕಡೆಯಿಂದ ದೂರುಗಳು ಬಂದಿವೆ ಎಂದು ಎಸ್‌ಪಿ ಹೇಳಿದ್ದು, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಅವರು ಹೇಳಿದರು.

ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿ.ಮೀ ಮತ್ತು ಭೋಪಾಲ್‌ನಿಂದ 320 ಕಿ.ಮೀ ದೂರದಲ್ಲಿರುವ ಅತ್ರಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಗಸ್ಟ್ 20, 2024 ರಂದು, ತಲೈಯಾ ಹನುಮಾನ್ ದೇವಸ್ಥಾನದಲ್ಲಿ ಪ್ರಸಾದ ವಿತರಿಸುವ ಜಗತ್ ಅಹಿರ್ವಾರ್, ತಮ್ಮ ಆಸೆ ಈಡೇರಿದ ನಂತರ ‘ಮಗಜ್ ಲಡ್ಡು’ದ ವಿಶೇಷ ಪೂಜೆ ಅರ್ಪಿಸಿದರು.

ಈ ಪ್ರಸಾದವನ್ನು ಬ್ರಾಹ್ಮಣರು ಮತ್ತು ಇತರ ಮೇಲ್ಜಾತಿಗಳು ಸೇರಿದಂತೆ ವಿವಿಧ ಜಾತಿಗಳ 20 ಕ್ಕೂ ಹೆಚ್ಚು ಗ್ರಾಮಸ್ಥರೊಂದಿಗೆ ಹಂಚಿಕೊಳ್ಳಲಾಯಿತು. ಮೇಲ್ಜಾತಿಯ ವ್ಯಕ್ತಿಗಳು ದಲಿತರಿಂದ ಪ್ರಸಾದ ಸ್ವೀಕರಿಸಿದ್ದಾರೆ ಎಂಬ ಸುದ್ದಿ ಹರಡಿದ ನಂತರ, ಸರಪಂಚರು ಈ ಎಲ್ಲ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರವನ್ನು ಆದೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತರ ಪ್ರಕಾರ, ನಮ್ಮನ್ನು ಅಂದಿನಿಂದ ಮದುವೆಗಳು ಮತ್ತು ಇತರ ಸಮಾರಂಭಗಳಂತಹ ಸಾಮಾಜಿಕ ಕಾರ್ಯಕ್ರಮಗಳಿಂದ ಹೊರಗಿಡಲಾಗಿದೆ. ನಾವು ಜಿಲ್ಲಾ ಅಧಿಕಾರಿಗಳನ್ನು ಸಂಪರ್ಕಿಸಿ ಎಸ್‌ಪಿಗೆ ದೂರು ನೀಡಿದ್ದೆವೆ ಎಂದು ಹೇಳಿಕೊಂಡಿದ್ದಾರೆ. ಸ್ಥಳೀಯ ಅಧಿಕಾರಿಗಳ ಇತ್ತೀಚಿನ ಮಧ್ಯಸ್ಥಿಕೆಯ ಹೊರತಾಗಿಯೂ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.

ಸರ್ಪಂಚ್ ಮತ್ತು ಮಾಜಿ ಸರ್ಪಂಚ್ ನಡುವಿನ ಜಗಳವೂ ಸಂಘರ್ಷದಲ್ಲಿ ಪಾತ್ರ ವಹಿಸಿರಬಹುದು ಎಂದು ಸ್ಥಳೀಯರು ಹೇಳುತ್ತಾರೆ.

ಇದನ್ನೂ ಓದಿ; ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ 15 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...