Homeರಾಷ್ಟ್ರೀಯಮಧ್ಯಪ್ರದೇಶ: ಸ್ಥಳೀಯ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಮಧ್ಯಪ್ರದೇಶ: ಸ್ಥಳೀಯ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನೀಡಲು ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದೆ.

“ಇದೊಂದು ಐತಿಹಾಸಿಕ ದಿನ. ಸತ್ಯಕ್ಕೆ ಸೋಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ಸಾಬೀತಾಗಿದೆ. ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳುತ್ತೇನೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಚುನಾವಣೆ ಬೇಕು ಆದರೆ ಒಬಿಸಿ ಮೀಸಲಾತಿ ಎಂದು ಹೇಳಿದ್ದೇವೆ. ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ಗೆ ಹೋಗಿ  ಪಾಪ ಮಾಡಿದೆ. ಅದು ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡುವಂತೆ ನ್ಯಾಯಾಲಯದಲ್ಲಿ ಕೇಳಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ವರದಿಯನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಚುನಾವಣೆಯನ್ನು ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ತನ್ನ ವರದಿಯನ್ನು ಮಂಡಿಸಿದ್ದು, ಅದರಲ್ಲಿ ‘ತ್ರಿವಳಿ ಪರೀಕ್ಷೆ’ ಅನುಸರಿಸಲಾಗಿದೆ ಎಂದು ಹೇಳಿತ್ತು.

ಸ್ಥಳೀಯ ಚುನಾವಣೆಗಳಲ್ಲಿ ಒಬಿಸಿ ಮೀಸಲಾತಿಯನ್ನು ತೆರವುಗೊಳಿಸದ ಸುಪ್ರೀಂ ಕೋರ್ಟ್‌ನ ಮೇ 10 ರ ಆದೇಶಕ್ಕೆ ಬದಲಾವಣೆಗಳನ್ನು ಕೋರಿ ಮಧ್ಯಪ್ರದೇಶ ಸರ್ಕಾರವು ತಿದ್ದುಪಡಿ ಅರ್ಜಿಯನ್ನು ಸಲ್ಲಿಸಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಎರಡು ವರ್ಷಗಳಿಂದ ನಡೆದಿರಲಿಲ್ಲ. ಹೀಗಾಗಿ ಅಲ್ಲಿ ಪ್ರಸ್ತುತ 23,000 ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಸ್ಥಾನಗಳು ಖಾಲಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...