Homeಮುಖಪುಟಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸ್ಥಳೀಯರು

ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸ್ಥಳೀಯರು

- Advertisement -
- Advertisement -

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್ ಶಿಕ್ಷಕನ್ನು ಜನರ ಗುಂಪೊಂದು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ (ಸೆ.14) ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ತುಕೋಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಯಾದವ್ ಅವರು, ”ಮಾಧ್ಯಮಗಳಿಗೆ ತಿಳಿಸಿರುವ ಪ್ರಕಾರ ನೀಟ್‌ಗೆ ತಯಾರಿ ನಡೆಸುತ್ತಿರುವ ಅಪ್ರಾಪ್ತ ಬಾಲಕಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿದ್ದಳು. ಈ ಇನ್‌ಸ್ಟಿಟ್ಯೂಟ್‌ನ ಶಿಕ್ಷಕ ವಿವೇಕ್ ಎಂಬಾತ ಆಕೆಯನ್ನು ಕೆಫೆಗೆ ಕರೆದು ಸ್ಪರ್ಶಿಸಿ, ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ವಿಚಾರವನ್ನು ಹೊರಗೆ ಹೇಳಿದರೆ ಕೊಲ್ಲುವುದಾಗಿ ಮತ್ತೊಬ್ಬ ಶಿಕ್ಷಕ ಶೈಲೇಂದ್ರ ಬಾಲಕಿಗೆ ಬೆದರಿಕೆ ಹಾಕಿದ್ದಾನೆ” ಎಂದು ತಿಳಿಸಿದರು.

ಘಟನೆ ಬಳಿಕ ಸಂತ್ರಸ್ತೆ ದೂರು ನೀಡಿದ್ದು, ಶಿಕ್ಷಕರ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕ ಶೈಲೇಂದ್ರನನ್ನು ವಿವಸ್ತ್ರಗೊಳಿಸಿ ಥಳಿಸಿ ಪೊಲೀಸ್ ಠಾಣೆಗೆ ಕರೆತಂದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮೂತ್ರವಿಸರ್ಜನೆ:  ಬಿಜೆಪಿ ಶಾಸಕನ ಬೆಂಬಲಿಗ ಸೇರಿ 7 ಮಂದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...