Homeಮುಖಪುಟಮಧ್ಯಪ್ರದೇಶ: ನೀಟ್ ಪರೀಕ್ಷೆಯಲ್ಲಿ 6 ಅಂಕ ಗಳಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!

ಮಧ್ಯಪ್ರದೇಶ: ನೀಟ್ ಪರೀಕ್ಷೆಯಲ್ಲಿ 6 ಅಂಕ ಗಳಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!

ವೈದ್ಯಕೀಯ ಆಕಾಂಕ್ಷಿಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಆಕೆ 590 ಅಂಕಗಳನ್ನು ಗಳಿಸಿದ್ದಾಳೆ ಎಂದು ಆಕೆಯ ಪೋಷಕರು 18 ವರ್ಷದ ವಿಧಿ ಸೂರ್ಯವಂಶಿ ಅವರನ್ನು ಉತ್ಸಾಹಗೊಳಿಸಲು ಪ್ರಯತ್ನಿಸಿದ್ದರು.

- Advertisement -
- Advertisement -

ರಾಷ್ಟ್ರೀಯ ಅರ್ಹತೆ-ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಕೇವಲ ಆರು ಅಂಕ ಪಡೆದಿದ್ದರಿಂದ ಆಘಾತಕ್ಕೊಳಗಾದ ಯುವತಿಯೊಬ್ಬಳು ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಆಕಾಂಕ್ಷಿಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಆಕೆ 590 ಅಂಕ ಗಳಿಸಿದ್ದಾಳೆ ಎಂದು ಆಕೆಯ ಪೋಷಕರು 18 ವರ್ಷದ ವಿಧಿ ಸೂರ್ಯವಂಶಿ ಅವರನ್ನು ಉತ್ಸಾಹಗೊಳಿಸಲು ಪ್ರಯತ್ನಿಸಿದ್ದರು.

ಆಕೆಗೆ 590 ಅಂಕ ದೊರೆತಿವೆ ಎಂದು ಪೋಷಕರು ತಿಳಿಸಿದರೂ, ತೀವ್ರ ಖಿನ್ನತೆಗೆ ಒಳಗಾದ ಯುವತಿ ಅಕ್ಟೋಬರ್ 20 ರಂದು ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. “ವಿಧಿ ಮಂಗಳವಾರ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕುಟುಂಬವು ಮರುದಿನ ಈ ವಿಷಯವನ್ನು ವರದಿ ಮಾಡಿದೆ. ಪ್ರಾಥಮಿಕ ತನಿಖೆಯು ನೀಟ್‌ನಲ್ಲಿನ ಕಡಿಮೆ ಅಂಕಗಳು ಆತ್ಮಹತ್ಯೆಗೆ ಕಾರಣವಾಯಿತು ಎಂದು ಸೂಚಿಸುತ್ತದೆ. ಆದರೆ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪರಾಸಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಸುಮೇರ್ ಸಿಂಗ್ ಜಗ್ಟೆ ಹೇಳಿದ್ದಾರೆ.

ಇದನ್ನೂ ಓದಿ: ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈಗಾಗಲೇ ನೀಟ್ ಪರೀಕ್ಷೆಯ ಎಲ್ಲಾ ವಿಭಾಗಗಳ ನೀಟ್ ತಾತ್ಕಾಲಿಕ ಉತ್ತರದ ಕೀಗಳನ್ನು ಮತ್ತು ಅಭ್ಯರ್ಥಿಗಳ ನೀಟ್ ಒಎಂಆರ್ ಹಾಳೆಗಳನ್ನು ಬಿಡುಗಡೆ ಮಾಡಿದೆ. ಚಿಂದ್ವಾರ ಜಿಲ್ಲೆಯಲ್ಲಿ ಪರಾಸಿಯಾ ಪೊಲೀಸರು ತನಿಖೆ ನಡೆಸುತ್ತಿರುವ ವರದಿಯನ್ನು ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

“ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ ಇಂತಹ ಗಂಭೀರ ನಷ್ಟವನ್ನು ಹೇಗೆ ಒಪ್ಪಿಕೊಳ್ಳುವುದು. ಈ ವಿಷಯದ ಬಗ್ಗೆ ತಕ್ಷಣವೇ ಅರಿವು ಮೂಡಿಸಿ, ಗಂಭೀರ ನಷ್ಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದು ಚಿಂದ್ವರ ಸಂಸದ ಗುರುವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ಈ ಹಿಂದೆಯೂ ತಮಿಳುನಾಡಿನಲ್ಲಿ ನಿಡಿ ಪರೀಕ್ಷೆಗೆ ಹೆದರಿ ಅನೇಕ ಯುವ ಮನಸ್ಸುಗಳು ಆತ್ಮಹತ್ಯೆಯ ಮನಸ್ಸು ಮಾಡಿದ್ದವು. ಕೇವಲ ಒಂದು ಪರೀಕ್ಷೆಗೆ ಹೆದರಿ ತಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳುವುದು ಅತ್ಯಂತ ಹೇಡಿತನದ ಕೆಲಸ. ಹಾಗಾಗಿ ಅವರಿಗೆ ನಮ್ಮ ಸಮಾಜ ಮತ್ತು ಸರ್ಕಾರ ಮಾನಸಿಕ ಸ್ಥೈರ್ಯ ತುಂಬುವಂತಹ ಕ್ರಮಗಳನ್ನು ಕೈಗೊಂಡು ಬೆಳೆಯುವ ಮುನ್ನವೆ ಬಾಡಿಹೋಗುವ ಜೀವಗಳನ್ನು ಉಳಿಸಿಕೊಳ್ಳಬೇಕಾಗಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...